ಬೆಳಗಾವಿ[ಡಿ.20]: ಮಿನಿಸ್ಟರ್ ಆಗುವುದು ನಮ್ಮ ಕೈಯಲ್ಲಿಲ್ಲ. ಹೈಕಮಾಂಡ್ ಕೈಯಲ್ಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಮುಖ್ಯಮಂತ್ರಿಗೆ ಪರಮಾಧಿಕಾರವಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮನ್ನು ಸಂಪುಟದಲ್ಲಿ ತೆಗೆದುಕೊಳ್ಳುತ್ತಾರೋ, ಇಲ್ಲವೋ ಎಂಬುದು ನಮಗೆ ಗೊತ್ತಿಲ್ಲ ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗೋಕಾಕ ಉಪಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ ಅವರೇ ನನ್ನನ್ನು ಗೆಲ್ಲಿಸಿದ್ದಾರೆ. ನನಗೆ ಒಂದು ಸಾವಿರ ಮತ ಪಡೆಯುವಷ್ಟು ಕೆಪ್ಯಾಸಿಟಿ ಇಲ್ಲ ಎಂಬ ತಮ್ಮ ಸಹೋದರ ಲಖನ್ ಜಾರಕಿಹೊಳಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು. ಸತೀಶ ಜಾರಕಿಹೊಳಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಹುಚ್ಚ ನಾಯಿಗೆ ಕಲ್ಲು ಹೊಡೆಯುವುದು ಅಷ್ಟೇ. ಮತ್ತೇನೂ ಮಾಡುವುದಕ್ಕೆ ಆಗುವುದಿಲ್ಲ ಎಂದು ಕಿಡಿಕಾರಿ ದರು.

ಮಹದಾಯಿ ನೀರು ಹಂಚಿಕೆ ವಿವಾದದ ಬಗೆ ಸಂಪೂರ್ಣ ಮಾಹಿತಿ ನನಗೆ ಇಲ್ಲ. ಅದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುವುದು ಒಳ್ಳೆಯದು. ಪೌರತ್ವ ಕಾಯ್ದೆ ತಿದ್ದುಪಡಿಗೆ ಭಾರತದ ಮುಸ್ಲಿಮರು ಹೆದರುವ ಅವಶ್ಯಕತೆ ಇಲ್ಲ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಯಾರದ್ದೋ ಮಾತು ಕೇಳಿಕೊಂಡು ಗಲಾಟೆ ಮಾಡುವುದು ಸರಿಯಲ್ಲ. ಅವರಿಗೆ ಆತಂಕವಿದ್ದರೆ ಚರ್ಚಿಸಿ ಸರಿಪಡಿಸಿಕೊಳ್ಳಬ ಹುದು ಎಂದು ಅವರು ಹೇಳಿದರು.