ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆಗಸ್ಟ್ 5ರವರೆಗೂ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ತುಮಕೂರು(ಜು.26): ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆಗಸ್ಟ್ 5ರವರೆಗೂ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ವರಮಹಾಲಕ್ಷ್ಮಿ ಹಬ್ಬದಂದು ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬ್ರೇಕ್ ಬಿದ್ದಿದೆ. ಹೀಗಾಗಿ ಈ ಬಾರಿ ಭಕ್ತರಿಗೆ ದೇವಿ ದರ್ಶನ ಸಿಗುವುದು ಅನುಮಾನ.
ತುಮಕೂರಿನಲ್ಲಿ ಒಂದೇ ಕುಟುಂಬದ 11 ಮಂದಿಗೆ ಸೋಂಕು!
ಪ್ರತಿ ವರ್ಷ ವರಮಹಾಲಕ್ಷ್ಮಿ ಹಬ್ಬದಂದು ಭಕ್ತರು ಗೊರವನಹಳ್ಳಿ ಲಕ್ಷ್ಮಿ ದರ್ಶನ ಪಡೆಯುತ್ತಿದ್ದರು. ಈ ಭಾರಿ ಭಕ್ತರಿಗೆ ದೇವಿಯ ದರ್ಶನವಿಲ್ಲದೆ ನಿರಾಸೆಯಾಗುವ ಎಲ್ಲ ಸಾಧ್ಯತೆಗಳೂ ಇವೆ. ಮುಂದಿನ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ ಬರಲಿದೆ.
