Asianet Suvarna News Asianet Suvarna News

ಜನರ ಮನೆ ಬಾಗಿಲಿಗೆ ಸರ್ಕಾರ: ರಾಮಲಿಂಗಾರೆಡ್ಡಿ

ಜನರ ಸಮಸ್ಯೆಗಳನ್ನು ಆಲಿಸಲು ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.

Government at people's doorstep: Ramalingareddy snr
Author
First Published Jun 25, 2024, 12:10 PM IST | Last Updated Jun 25, 2024, 12:10 PM IST

ಚನ್ನಪಟ್ಟಣ: ಜನರ ಸಮಸ್ಯೆಗಳನ್ನು ಆಲಿಸಲು ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.

ತಾಲೂಕಿನ ಹುಣಸನಹಳ್ಳಿ ಹಾಗೂ ಅಕ್ಕೂರು ಗ್ರಾಮಗಳಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಜಿಪಂ ವ್ಯಾಪ್ತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಜನರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.

ವೆಹಿಕಲ್‌ ಟ್ರ್ಯಾಕಿಂಗ್‌ ವ್ಯವಸ್ಥೆ ಇಲ್ಲದ ವಾಹನಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಇಂದಿನ ಜನ ಸ್ಪಂದನಾ ಸಭೆಗೆ ೧೨ ಸಾವಿರ ಅರ್ಜಿಗಳನ್ನು ವಿತರಿಸಲಾಗಿದೆ. ವಸತಿ ಇಲ್ಲದವರಿಗೆ ನಿವೇಶನ ನೀಡಲು, ಪಡಿತರ, ಸಾರಿಗೆ ಸಮಸ್ಯೆ, ಕುಡಿಯುವ ನೀರು ಸಮಸ್ಯೆ ಸೇರಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು.ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಅರ್ಜಿಗಳು ಬರುತ್ತಿವೆ. ಪೋಡಿ, ಖಾತೆ ಸಮಸ್ಯೆಗಳು ಜಾಸ್ತಿ ಕಂಡು ಬರುತ್ತಿವೆ. ಪೊಲೀಸ್ ಇಲಾಖೆ, ಗೃಹಲಕ್ಷ್ಮೀ, ಅನ್ನ ಭಾಗ್ಯ ಸೇರಿದಂತೆ ಎಲ್ಲ ಸಮಸ್ಯೆಗಳಿಗೂ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಜನರ ಬಳಿಗೆ ತೆರಳಿ ಅರ್ಜಿ ಸ್ವೀಕರಿಸಿದ ಡಿಸಿಎಂ:

ತಾಲೂಕಿನ ಹುಣಸನಹಳ್ಳಿ ಹಾಗೂ ಅಕ್ಕೂರು ಗ್ರಾಮದಲ್ಲಿ ಆಯೋಜಿಸಿದ್ದ ಜನ ಸ್ಪಂದನಾ ಸಭೆಯಲ್ಲಿ ನೂರಾರು ಮಂದಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಜನರ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಎರಡು ಕಡೆಯೂ ತಲಾ ೨೪ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಜನರಿಗೆ ರಸೀದಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರ ಬಳಿ ಹಾಗೂ ಕೌಂಟರ್‌ಗಳ ಬಳಿ ಅಧಿಕಾರಿಗಳೊಂದಿಗೆ ಖುದ್ದು ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ಅರ್ಜಿಗಳನ್ನು ಪಡೆದು ಪರಿಶೀಲನೆ ನಡೆಸಿದ್ದು ವಿಶೇಷವೆನಿಸಿತು. -

Latest Videos
Follow Us:
Download App:
  • android
  • ios