ಕೊಪ್ಪಳ[ನ.29]: ಸರ್ಕಾರಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಬಳಿ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಪತಿ ಮಹಮ್ಮದ್ ಸಲಾವೂದ್ದೀನ್ (30) ಪತ್ನಿ ಲಿಖಹತ್ (28) ಎಂದು ಗುರುತಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಸ್ತೆ ಅಡ್ಡಲಾಗಿ ಬಂದ ಹಾವು ಬದುಕಿಸಲು ಹೋಗಿದ್ದ ಈಶಾನ್ಯ ಸಾರಿಗೆ ಬಸ್  ಬೈಕ್ ಗೆ  ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘನೆ ಸಂಭವಿಸಿದೆ. ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.