ಬೆಳಗಾವಿ[ಡಿ.25]: ಸರ್ಕಾರಿ ಬಸ್‌ವೊಂದು ಬಂಡೆಗೆ ಡಿಕ್ಕಿ ಹೊಡೆದ ಪಲ್ಟಿಯಾದ ಪ್ರಯಾಣಿರಿಗೆ ಗಾಯವಾದ ಘಟನೆ ಜಿಲ್ಲೆಯ ಗೋಕಾಕ್ ನಗರದ ಹೊರವಲಯದಲ್ಲಿ ಇಂದು[ಬುಧವಾರ] ನಡೆದಿದೆ. 

ಗೋಕಾಕ್ ರೋಡ್ ರೈಲ್ವೆ ನಿಲ್ದಾಣದಿಂದ ಗೋಕಾಕ್ ನಗರಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ನ ಬ್ರೇಕ್ ಫೇಲ್ ಆಗಿದ್ಗರಿಂದ ಚಾಲಕನ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಘಟನೆಯಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಗಂಭೀರವಾಗಿ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.