Asianet Suvarna News

ಸಿಂದಗಿ ಬಳಿ ಸರ್ಕಾರಿ ಬಸ್, ಟ್ಯಾಂಕರ್ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಸರ್ಕಾರಿ ಬಸ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ| 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯ| ಸಿಂದಗಿ ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ನಡೆದ ಘಟನೆ| ಗಾಯಗೊಂಡ ವಿದ್ಯಾರ್ಥಿಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು| 

Government Bus, Tanker Collision  Near Sindagi in Vijayapura District
Author
Bengaluru, First Published Nov 27, 2019, 9:54 AM IST
  • Facebook
  • Twitter
  • Whatsapp

ವಿಜಯಪುರ(ನ.27): ಸರ್ಕಾರಿ ಬಸ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಇಂದು(ಬುಧವಾರ) ನಡೆದಿದೆ. 

ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೈಲ ಟ್ಯಾಂಕರ್ ಜೇವರ್ಗಿಯಿಂದ ಸಿಂದಗಿಗೆ ಆಗಮಿಸುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. 
 

Follow Us:
Download App:
  • android
  • ios