ಅಫಜಲ್ಪುರ: ಖಾಸಗಿ ಕ್ಲಿನಿಕ್‌ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ..!
* ಸರ್ಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್ ಕೆಲಸ ಮಾಡುವಾಗ ಸಿಕ್ಕಿಬಿದ್ದ ಸರ್ಕಾರಿ ವೈದ್ಯ
* ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ ನಡೆದ ಘಟನೆ
* ವೈದ್ಯರನ್ನ ತರಾಟೆಗೆ ತೆಗೆದುಕೊಂಡ ತಹಸೀಲ್ದಾರ್
ಅಫಜಲ್ಪುರ(ಜೂ.16): ಸರ್ಕಾರಿ ವೈದ್ಯರೊಬ್ಬರು ತಾವು ನಿರ್ವಹಿಸಬೇಕಾದಂತಹ ಸರ್ಕಾರಿ ಆಸ್ಪತ್ರೆಯಲ್ಲಿನ ಸೇವೆಗೆ ಅನಧಿಕೃತ ಗೈರು ಹಾಜರಾಗಿ ಖಾಸಗಿ ಕ್ಲಿನಿಕ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ಅಫಜಲ್ಪುರ ತಾಲೂಕಿನಲ್ಲಿ ನಡೆದಿದೆ.
ಅಫಜಲ್ಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸಂಗಮೇಶ ಟಕ್ಕಳಕಿ ಅವರೇ ಸರ್ಕಾರದ ಕೆಲಸಕ್ಕೆ ಚಕ್ಕರ್ ಹೊಡೆದು ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತ ಇದ್ದಂತಹ ವೈದ್ಯರು, ಇವರಿಗೆ ಇದೀಗ ಸರ್ಕಾರದ ಕೆಲಸಕ್ಕೆ ಅನಧಿಕತ ಗೈರು ಹಾಜರಾಗಿ ಕರ್ತವ್ಯ ಲೋಪ ಎಸಗಿದ್ದಾರೆಂಬ ಆರೋಪದಡಿಯಲ್ಲಿ ತಹಸೀಲ್ದಾರ್ ಯಲ್ಲಪ್ಪ ಸುಬೇದಾರ ನೋಟಿಸ್ ನೀಡಿದ್ದಾರೆ.
ಯಾದಗಿರಿ: 20 ದಿನ ಹೋರಾಡಿ ಕೋವಿಡ್ ಗೆದ್ದ 80ರ ಅಜ್ಜಿ..!
ಅಫಜಲ್ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿರುವ ವೈದ್ಯ ಸಂಗೇಮಶ ಟಕ್ಕಳಕಿ ಮೇ 25ರಿಂದ ಕೆಲಸಕ್ಕೆ ಗೈರಾಗಿದ್ದರು. ಈ ಸಂಬಂಧ ಮೇಲಾಧಿಕಾರಿ ವೈದ್ಯರು ಕರೆ ಮಾಡಿ ವಿಚಾರಿಸುವ ಯತ್ನ ಮಾಡಿದ್ದರೂ ಅವರು ದೂರವಾಣಿ ಕರೆ ಸ್ವೀಕರಿಸಿರಲಿಲ್ಲ. ಜೊತೆಗೆ ಡಾ.ಟಕ್ಕಳಕಿ ಅವರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜನರಿಂದ ದೂರು ಬಂದಿದ್ದರಿಂದ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಸುಶೀಲಕುಮಾರ ಅಂಬೂರೆ ಜೊತೆ ತಹಸೀಲ್ದಾರ ಯಲ್ಲಪ್ಪ ಸುಬೇದಾರ ಅವರು ಡಾ.ಟಕ್ಕಳಕಿ ವಿಚಾರದಲ್ಲಿನ ದೂರು ಸಂಬಂಧ ಕಾರ್ಯಾಚರಣೆ ನಡæಸಿದಾಗ ಡಾ.ಸಂಗಮೇಶ ಟಕ್ಕಳಕಿ ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು.
ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸದೆ ನಿರ್ಲಕ್ಷಿಸಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅನಧಿಕೃತ ಗೈರಾಗಿರುವುದರ ಜೊತೆಗೆ ಖಾಸಗಿ ಆಸ್ಪತ್ರೆ ನಡೆಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ. ನಿಮ್ಮ ಈ ವರ್ತನೆ ಸಹಿಸಲಾಗುವುದಿಲ್ಲ ಎಂದು ತಹಸೀಲ್ದಾರ್ ತರಾಟೆಗೆ ತೆಗೆದುಕೊಂಡರು.
ಕರ್ತವ್ಯ ಲೋಪದಡಿ 24 ಗಂಟೆಯೊಳಗೆ ಉತ್ತರಿಸಬೇಕು ಎಂದು ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ ಸುಶೀಲಕುಮಾರ ಅಂಬೂರೆ ಅವರು ಸಂಗಮೇಶ ಟಕ್ಕಳಕಿ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.