Asianet Suvarna News Asianet Suvarna News

ಗಡಿಭಾಗದ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ: ಡಿ.ಕೆ.ಶಿವಕುಮಾರ್‌

ಮಹಾರಾಷ್ಟ್ರ ಸರ್ಕಾರ ಚಂದಗಡದಲ್ಲಿ ಕಚೇರಿ ಆರಂಭಿಸಿ ಗಡಿಭಾಗದ ಜನರಿಗೆ ಆರೋಗ್ಯ ವಿಮೆ ನೀಡಲು ಹೊರಟಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಸುವರ್ಣಸೌಧ ಕಟ್ಟಿದ್ದೇ, ಬೆಳಗಾವಿ ನಮ್ಮ ರಾಜ್ಯದ ಎರಡನೇ ರಾಜಧಾನಿ ಎನ್ನುವ ಕಾರಣಕ್ಕೆ. ಈ ಭಾಗದ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ. ಯಾವುದೇ ವಿವಾದಗಳು ಉಂಟಾಗದಂತೆ ನಾವು ನೋಡಿಕೊಳ್ಳುತ್ತೇವೆ. ಈ ಬಗ್ಗೆ ಚರ್ಚೆ ನಡೆಸುತ್ತೇನೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

Government is Committed to the Protection of the Border Kannadigas Says DCM DK Shivakumar grg
Author
First Published Oct 20, 2023, 1:00 AM IST

ಬೆಳಗಾವಿ(ಅ.20):  ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದ ಕನ್ನಡಿಗರ ಸುರಕ್ಷತೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರೊಂದಿಗೆ ಅವರು ಮಾತನಾಡಿದರು. ಮಹಾರಾಷ್ಟ್ರ ಸರ್ಕಾರ ಚಂದಗಡದಲ್ಲಿ ಕಚೇರಿ ಆರಂಭಿಸಿ ಗಡಿಭಾಗದ ಜನರಿಗೆ ಆರೋಗ್ಯ ವಿಮೆ ನೀಡಲು ಹೊರಟಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಸುವರ್ಣಸೌಧ ಕಟ್ಟಿದ್ದೇ, ಬೆಳಗಾವಿ ನಮ್ಮ ರಾಜ್ಯದ ಎರಡನೇ ರಾಜಧಾನಿ ಎನ್ನುವ ಕಾರಣಕ್ಕೆ. ಈ ಭಾಗದ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ. ಯಾವುದೇ ವಿವಾದಗಳು ಉಂಟಾಗದಂತೆ ನಾವು ನೋಡಿಕೊಳ್ಳುತ್ತೇವೆ. ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು‌.

ನಿನ್ನೆತಾನೇ ಮೊಮ್ಮಗಳ ನಾಮಕರಣ ಮಾಡಿ ಒಳ್ಳೆ ಮೂಡ್‌ನಲ್ಲಿ ಬಂದಿದ್ದೇನೆ; ಡಿಕೆಶಿ ವಿಚಾರ ಕೇಳಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ

ಕನ್ನಡಿಗರ ವಿರುದ್ಧ ಇರುವ ತಮಿಳುನಾಡು ಸರ್ಕಾರ ಬೊಮ್ಮಸಂದ್ರದಿಂದ ಹೊಸೂರು ತನಕ ಮೆಟ್ರೋ ನಿರ್ಮಾಣಕ್ಕೆ ಟೆಂಡರ್ ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಮೊದಲೇ ಅವರು ಬೇಡಿಕೆ ಇಟ್ಟಿದ್ದರು‌‌. ಎರಡೂ ರಾಜ್ಯಗಳ ಜನರು ಅಲ್ಲಿ ವಾಸ ಮಾಡುತ್ತಿದ್ದಾರೆ, ಅಲ್ಲಿನವರು ಇಲ್ಲಿಗೆ, ಇಲ್ಲಿನವರು ಅಲ್ಲಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ನಾವೇನೂ ಟೆಂಡರ್ ಕರೆಯುತ್ತಿಲ್ಲ. ಸಾಧ್ಯತೆಯ ಬಗ್ಗೆ ಸಮೀಕ್ಷೆ ನಡೆಯುತ್ತಿದೆ ಅಷ್ಟೇ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಶೇ.50 ರಷ್ಟು ಸಹಭಾಗಿತ್ವವಿದೆ. ಇದರಲ್ಲಿ ತಪ್ಪೇನಿದೆ? ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವೆ ಬಸ್ ಓಡಾಡಬಾರದು ಎಂದು ನಿಯಮ ಮಾಡಲು ಆಗುತ್ತದೆಯೇ? ಕಾಶ್ಮೀರದಿಂದ ಕನ್ಯಾಕುಮಾರಿಯ ತನಕ ರೈಲು ವ್ಯವಸ್ಥೆ ಇಲ್ಲವೇ ಎಂದು ಮರುಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ಅವರು ನನಗೂ ಮತ್ತು ಡಿ.ಕೆ.ಶಿವಕುಮಾರ್ ಅವರಿಗೂ ಆಂತರಿಕ ಭಿನ್ನಾಭಿಪ್ರಾಯವಿದೆ ಬಹಿರಂಗವಾಗಿ ಏನಿಲ್ಲ ಎಂದು ಹೇಳಿದ್ದಾರೆ ಎಂದಾಗ ಯಾವ ಆಂತರಿಕವೂ ಇಲ್ಲ, ಬಹಿರಂಗವೂ ಇಲ್ಲ. ನನಗೆ ಯಾರ ಬಗ್ಗೆಯೂ ಭಿನ್ನಾಭಿಪ್ರಾಯಗಳು ಇಲ್ಲ. ಏತಕ್ಕೆ ಇರಬೇಕು ಇದೆಲ್ಲಾ? ಎಂದು ಹೇಳಿದರು.

ನನ್ನ ಸೈಲೆಂಟ್ ನನ್ನ ದೌರ್ಬಲ್ಯವಲ್ಲ: ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡದ ಸಚಿವ ಜಾರಕಿಹೊಳಿ

ದೂದ್‌ಗಂಗಾ ನದಿ ನೀರನ್ನು ಮಹಾರಾಷ್ಟ್ರದವರು ತಿರುವು ಮಾಡಿ ಬಳಸಿಕೊಳ್ಳುವ ಯೋಜನೆ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಸಿದಿ ಅವರು, ನೀವೆ ಈ ವಿಚಾರವನ್ನು ಮೊದಲು ಹೇಳುತ್ತಿರುವುದು. ತಾಂತ್ರಿಕ ಸಮಿತಿಯ ಜೊತೆ ಚರ್ಚೆ ನಡೆಸಿ ಮಾತನಾಡುತ್ತೇನೆ ಎಂದರು.

ಹಿರೇಮಠದ ಶೀಗಳು ಆದಷ್ಟು ಬೇಗ ಮುಖ್ಯಮಂತ್ರಿಗಳಾಗಳಿ ಎಂದು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದಾಗ, ಐದು ವರ್ಷಗಳ ಆಡಳಿತ ನಡೆಸಿ ಎಂದು ಸುಭದ್ರ ಸರ್ಕಾರ ಸ್ಥಾಪನೆಗೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಜನರಿಗೆ ಆಸೆ ಇರುತ್ತದೆ. ಅದಕ್ಕೆ ಗೌರವ ನೀಡುತ್ತಾ, ಮೊದಲು ನಮ್ಮ ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡಬೇಕು. ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದರು.

Follow Us:
Download App:
  • android
  • ios