Asianet Suvarna News Asianet Suvarna News

ನಮ್ಮ ಕ್ಲಿನಿಕ್ ಬಗ್ಗೆ ಸರ್ಕಾರದ ದಿವ್ಯ ನಿರ್ಲಕ್ಷ್ಯ..!

ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ಗಟ್ಟಿಯಾದ ತಳಹದಿಯಿಲ್ಲದೆ ಚುನಾವಣಾ ಸಮಯದಲ್ಲಿ ಆರಂಭಿಸಿದ 'ನಮ್ಮ ಕ್ಲಿನಿಕ್' ಯೋಜನೆಯನ್ನು ಚುನಾವಣೆಯ ನಂತರ ಚುಕ್ಕಾಣಿ ಹಿಡಿದ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಲಪಡಿಸುವ ಗೋಜಿಗೆ ಹೋಗಲಿಲ್ಲ. ಹಾಗೆಯೇ ಮುಂದುವರೆಸಿಕೊಂಡು ಹೋಗುವ ಮನಸ್ಸು ಮಾಡಿದಂತಿಲ್ಲ. 

Government of Karnataka Neglect of Namma Clinic in Bengaluru grg
Author
First Published Jan 26, 2024, 1:12 PM IST

ಎಂ.ನರಸಿಂಹಮೂರ್ತಿ

ಬೆಂಗಳೂರು(ಜ.26):  ದಕ್ಷಿಣ ಕೊಳೆಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿ ಕರು ಹಾಗೂ ದುರ್ಬಲ ವರ್ಗದವರಿಗೆ ಸುಲ ಭವಾಗಿ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವ 'ನಮ್ಮ ಕ್ಲಿನಿಕ್'ನ ಪರಿಕಲ್ಪನೆ ಹಳ್ಳ ಹಿಡಿದಂತಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸುಮಾರು 12 ನಮ್ಮ ಕ್ಲಿನಿಕ್‌ಗಳಲ್ಲಿ ವೈದ್ಯರು, ಸಿಬ್ಬಂದಿ ವರ್ಗದವರಿಗೆ ಸಂಬಳ ಸರಿಯಾಗಿ ನೀಡುತ್ತಿಲ್ಲ.ಹಾಗೂ ಖಾಸಗಿ ಕಟ್ಟಡಗಳಲ್ಲಿರುವ ಕ್ಲಿನಿಕ್‌ಗಳಿಗೆ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ನೀಡದೆ ಸತಾಯಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ ಹಿಂದಿನ ಬಿಜೆಪಿ ಸರ್ಕಾರ ಗಟ್ಟಿಯಾದ ತಳಹದಿಯಿಲ್ಲದೆ ಚುನಾವಣಾ ಸಮಯದಲ್ಲಿ ಆರಂಭಿಸಿದ 'ನಮ್ಮ ಕ್ಲಿನಿಕ್' ಯೋಜನೆಯನ್ನು ಚುನಾವಣೆಯ ನಂತರ ಚುಕ್ಕಾಣಿ ಹಿಡಿದ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಲಪಡಿಸುವ ಗೋಜಿಗೆ ಹೋಗಲಿಲ್ಲ. ಹಾಗೆಯೇ ಮುಂದುವರೆಸಿಕೊಂಡು ಹೋಗುವ ಮನಸ್ಸು ಮಾಡಿದಂತಿಲ್ಲ. 

ಧಾರವಾಡ: ನಮ್ಮ ಕ್ಲಿನಿಕ್ ಆಸ್ಪತ್ರೆ ಕಾರ್ಯನಿರ್ವಣೆ ಸಮಯ ಬದಲಾವಣೆ - ಡಿಎಚ್ಓ ಮಾಹಿತಿ

ಸರ್ಕಾರದಲ್ಲಿ ಅನುದಾನದ ಕೊರತೆಯಿದೆ ಹಾಗೂ ಸಂಬಳ ನೀಡಬೇಕಾದ ಖಾತೆಗಳು ನಿಷ್ಕ್ರಿಯವಾಗಿದೆ ಎಂದು ಸಬೂಬು ಹೇಳುತ್ತಿ ದ್ದಾರೆ ಎಂದು ವೈದ್ಯಕೀಯ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ನಮ್ಮ ಕ್ಲಿನಿಕ್ ಗಳು ಹೆಸರಿ ಗಷ್ಟೇ ಉಳಿದಿವೆ ಎಂಬಂತೆ ತೋರುತ್ತಿದೆ.

ಕಡಿಮೆ ವೇತನ ನಿಗದಿಪಡಿಸಿರುವ ಕಾರಣ ಹಲವೆಡೆ ಸಿಬ್ಬಂದಿ ಕೊರತೆ ಕಾಡುತ್ತಿದೆ. ಮಧು ಮೇಹ, ಮೂತ್ರ ಪರೀಕ್ಷೆ, ಡೆಂಘಿ ಮತ್ತು ಮಲೇರಿಯಾ ತಪಾಸಣೆ ಹಾಗೂ ರಕ್ತ ಪರೀಕ್ಷೆ ಸೇರಿ 14 ಉಚಿತ ಡಯಾಗೋಸ್ಟಿಕ್ ಸೇವೆಗಳ ವರದಿ ವಿಳಂಬದಿಂದಾಗಿ ಚಿಕಿತ್ಸಾ ವಿಧಾನಗಳು ಹಲವು ದಿನಗಳವರೆಗೆ ನಡೆಯುವ ಕಾರಣ ರೋಗಿಗಳು ಪರದಾಡುವಂತಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೆಲವೆಡೆ ವೈದ್ಯರು ರಜೆಯ ಸಂದರ್ಭಗಳಲ್ಲಿ ನರ್ಸಿಂಗ್ ಸಿಬ್ಬಂದಿ ಚಿಕಿತ್ಸೆ ನೀಡುವುದು ಕಂಡು ಬರುತ್ತಿದೆ. ವೈದ್ಯರಿಲ್ಲದ ಕಾರಣ ಸಣ್ಣ ಪುಟ್ಟ ಕಾಯಿಲೆಗಳ ಚಿಕಿತ್ಸೆಗೆ ಬರುವ ರೋಗಿಗಳು ಇಲ್ಲಿ ಇರುವ ನರ್ಸ್‌ಗಳಿಂದ ಚಿಕಿತ್ಸೆ ಪಡೆಯಬೇ ಕಿದ್ದು, ಕಾಯಿಲೆ ಹೆಚ್ಚಿದಲ್ಲಿ ಅನಿವಾರ್ಯವಾಗಿ ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಗೆ ಹೋಗಬೇಕಾ ಗಿದೆ. ಸಣ್ಣಪುಟ್ಟ ಕಾಯಿಲೆಗಳಿಗೂ ಚಿಕಿತ್ಸೆ ದೊರ ಕದೆ, ಕೇವಲ ಮಾತ್ರೆಗಳನ್ನು ನೀಡಿ ವಾಪಸ್ ಕಳುಹಿಸುತ್ತಾರೆ ಎಂದು ಕ್ಲಿನಿಕ್‌ಗೆ ಬರುವ ರೋಗಿಗಳು ನೋವು ತೋಡಿಕೊಂಡಿದ್ದಾರೆ.

ಬಡವರು, ಜನಸಾಮಾನ್ಯರ ಆರೋಗ್ಯದ ವಿಷಯ ದಲ್ಲಿ ಸರ್ಕಾರ ಉದಾಸೀನದಿಂದ ನಡೆದುಕೊಳ್ಳ ಬಾರದು. ವೈದ್ಯರು ಹಾಗೂ ಸಿಬ್ಬಂದಿಗೆ ನಿಗದಿ ಪಡಿಸಿರುವ ಸಂಬಳವನ್ನು ಸರಿಯಾಗಿ ನೀಡ ಬೇಕು. ಯಾವುದೇ ಸರ್ಕಾ ರದ ಯೋಜನೆಯಾ ದರೂ ಜನಸ್ನೇಹಿ ಯಾಗಿದ್ದರೆ ಉತ್ತೇಜನ ನೀಡ ಬೇಕು ಎಂದು ಸ್ಥಳೀಯ ನಿವಾಸಿ ನಾಗರಾಜ್ ಸರ್ಕಾರಕ್ಕೆ ಆಗ್ರಹಿಸಿದರು.

225 ವಾರ್ಡ್‌ನಲ್ಲಿ ನಮ್ಮ ಕ್ಲಿನಿಕ್‌ ಶುರು, ವೈದ್ಯರ ಕೊರತೆಗೂ ಪರಿಹಾರ ಹುಡುಕಿದ ಬಿಬಿಎಂಪಿ

ನಿಷ್ಕ್ರಿಯ ಬ್ಯಾಂಕ್ ಖಾತೆಗಳನ್ನು ಸಕ್ರಿಯಗೊಳಿಸುವ ಮೂಲಕ ಸಮಸ್ಯೆ ಬಗೆಹರಿಸಲಾಗಿದೆ. ಈ ತಿಂಗಳಿನಿಂದ ಎಲ್ಲಾ ಸಿಬ್ಬಂದಿಯ ಸಂಬಳ ಸರಿಯಾದ ಸಮಯಕ್ಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಖಾಸಗಿ ಕಟ್ಟಡಗಳಲ್ಲಿರುವ ಕ್ಲಿನಿಕ್‌ಗಳಿಗೆ ಉಳಿಕೆ ಸಹಿತ ಬಾಡಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಬೊಮ್ಮನಹಳ್ಳಿ ವಲಯ ಕಾರ್ಯಕ್ರಮ ನಿರ್ವಾಹಕ ಲಕ್ಷ್ಮೀಪತಿ ತಿಳಿಸಿದ್ದಾರೆ. 

ಪ್ರತಿ ತಿಂಗಳು 40 ಸಾವಿರ ಬಾಡಿಗೆ ನೀಡುವುದಾಗಿ ಕರಾರು ಮಾಡಿಕೊಂಡಿದ್ದು, ಕಳೆದ ಐದಾರು ತಿಂಗಳಿಂದ ಬಾಡಿಗೆ ಸರಿಯಾಗಿ ನೀಡುತ್ತಿಲ್ಲ. ಕೇಳಿದರೆ ಅನುದಾನದ ಕೊರತೆ ಎಂದು ಸಬೂಬು ಹೇಳುತ್ತಾರೆ. ಖಾಲಿ ಮಾಡಿಸೋಣ ಎಂದರೆ ಜನಸಾಮಾನ್ಯರಿಗೆ ತೊಂದರೆ ಆಗಬಹುದೆಂಬ ದೃಷ್ಟಿಯಿಂದ ಸುಮ್ಮನಾಗಿದ್ದೇವೆ ಎಂದು ಕಾಳೇನ ಅಗ್ರಹಾರದ ನಮ್ಮ ಕ್ಲಿನಿಕ್ ಕಟ್ಟಡ ಮಾಲೀಕ ಅರುಣ್ ಸಿಂಹ ಹೇಳಿದ್ದಾರೆ. 

Follow Us:
Download App:
  • android
  • ios