ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ, ಸರ್ಕಾರದಿಂದ ಮಹತ್ವದ ಆದೇಶ

ಓರ್ವ ಮುಸ್ಲಿಂ ಸೇರಿದಂತೆ 8 ಜನರ ಆಡಳಿತ ಮಂಡಳಿ ರಚನೆ, 3 ದಶಕಗಳಿಂದ ವಿವಾದಿತ ಸ್ಥಳವಾಗಿರೋ ಇನಾಂ ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾ

Government Ordered the Formation of Governing Body to Inam Dattatreya Bababudan Swamy Dispute grg

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ನ.18): ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವುದರ ಜೊತೆಗೆ ಕಳೆದ ನಾಲ್ಕೈದು ದಶಕಗಳಿಂದ ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರದ ಮೂಲಕ ವಿವಾದಿತ ಕೇಂದ್ರವೂ ಆಗಿದ್ದ ಚಿಕ್ಕಮಗಳೂರು ತಾಲೂಕಿನ ದತ್ತಪೀಠಕ್ಕೆ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಆಡಳಿತ ಮಂಡಳಿ ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ಈ ಆಡಳಿತ ಮಂಡಳಿಗೆ ಇದೆ.

Government Ordered the Formation of Governing Body to Inam Dattatreya Bababudan Swamy Dispute grg

ಅರ್ಚಕರ ನೇಮಕ ಕುರಿತಂತೆ ನಿರ್ಧಾರ ಮಾಡುವ ಅಧಿಕಾರ ಆಡಳಿತ ಮಂಡಳಿಗೆ

ಈ ಆಡಳಿತ ಮಂಡಳಿಗೆ ಸದಸ್ಯರಾಗಲು 42 ಜನ ಅರ್ಜಿ ಹಾಕಿದ್ದರು. ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅರ್ಜಿದಾರರ ಅರ್ಹತೆ, ಅನರ್ಹತೆ, ವಿದ್ಯಾಭ್ಯಾಸ, ವಿಳಾಸ ಸೇರಿದಂತೆ ಎಲ್ಲರ ಮಾಹಿತಿ ಸಂಗ್ರಹಿಸಿತ್ತು. ಇಂದು ರಾಜ್ಯ ಸರ್ಕಾರ ಇಂದು ಎಂಟು ಜನರ ಆಡಳಿತ ಮಂಡಳಿ ಸದಸ್ಯರನ್ನ ನೇಮಕ ಮಾಡಿದೆ. ಇಬ್ಬರು ಮಹಿಳೆಯರು, ಓರ್ವ ಮುಸ್ಲಿಂ ಸೇರಿದಂತೆ ಆಡಳಿತ ಮಂಡಳಿಯಲ್ಲಿ ಒಟ್ಟು ಎಂಟು ಜನ ಸದಸ್ಯರಿದ್ದಾರೆ. ಈ ಸಮಿತಿ ಶೀಘ್ರದಲ್ಲೇ ಸಭೆ ಸೇರಿ ದತ್ತಪೀಠದಲ್ಲಿ ಪೂಜೆ ಹೇಗಿರಬೇಕು, ಅಲ್ಲಿನ ಆಡಳಿತ ವ್ಯವಸ್ಥೆ ಹೇಗಿರಬೇಕು, ಹಿಂದೂ-ಮುಸ್ಲಿಮರು ವಾರದಲ್ಲಿ ಯಾರು ಎಷ್ಟು ದಿನ ಪೂಜೆ ಮಾಡಬೇಕು. ಯಾರು ಮಾಡಬೇಕು ಎಂಬೆಲ್ಲಾ ಅಂಶಗಳ ಅಂತಿಮ ಪಟ್ಟಿಯನ್ನ ಸರ್ಕಾರಕ್ಕೆ ರವಾನಿಸಲಿದೆ. ಸರ್ಕಾರ ಆಡಳಿತ ಮಂಡಳಿಯ ಮನವಿಗೆ ಅಂಕಿತ ಹಾಕಿದರೆ ದತ್ತಪೀಠದಲ್ಲಿ ಇನ್ನು ಮುಂದೆ ಹಿಂದೂ ಅರ್ಚಕರು ಪೂಜೆ ಮಾಡಲಿದ್ದಾರೆ. ಹಿಂದೂ ಅರ್ಚಕರ ನೇಮಕಕ್ಕೆ ಹಿಂದೂ ಸಂಘಟನೆಗಳ ದಶಕಗಳ ಹೋರಾಟಕ್ಕೆ ಫಲ ಸಿಕ್ಕಂತಾಗಲಿದೆ. 

Government Ordered the Formation of Governing Body to Inam Dattatreya Bababudan Swamy Dispute grg

Datta Peetha Row: ವಿವಾದ ಬಗೆಹರಿಸದ ಬಿಜೆಪಿ ಸರ್ಕಾರ: ಪ್ರಮೋದ್‌ ಮುತಾಲಿಕ್‌ ಆಕ್ರೋಶ

ದತ್ತಪೀಠದ ವಿಚಾರದಲ್ಲಿ ರಾಜ್ಯ ಸರ್ಕಾರದ ಮಹತ್ವದ ಆದೇಶ

ಪೂಜಾ ಪದ್ದತಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕೋರ್ಟ್ ಸರ್ಕಾರ ಸೂಚನೆ ನೀಡಿತ್ತು.ಇದರ ಅನ್ವಯ 2014- 15ರಲ್ಲಿ ಕಾಂಗ್ರೇಸ್ ನೇತೃತ್ವದ ಸರ್ಕಾರವೂ ನಿವೃತ್ತ ಜಡ್ಜ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚನೆ ಮಾಡಿತ್ತು. 2017ರಲ್ಲಿ ಸರ್ಕಾರವೂ ಕೋರ್ಡ್‌ಗೆ ಮುಜಾವರ್ ನೇತೃತ್ವದಲ್ಲಿ ಪೂಜೆ ಪುನಸ್ಕಾರದ ಬಗ್ಗೆ ವರದಿ ಸಲ್ಲಿಸಿತ್ತು. ಇದನ್ನು ವಿರೋಧಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯವೂ ಎರಡು ಸಮುದಾಯದ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳುವಂತೆ ಸೂಚನೆ ನೀಡಿತ್ತು.ಸರ್ಕಾರವೂ ಸಚಿವ ಸಂಪುಟದ ಉಪಸಮಿತಿಯನ್ನು ರಚನೆ ಮಾಡಿತ್ತು.  

ಕಳೆದ ಫೆಬ್ರವರಿಯಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟದ ಉಪಸಮಿತಿ ಕೂಡ ಚಿಕ್ಕಮಗಳೂರಿಗೆ ಭೇಟಿ ನೀಡಿ, ಪೂಜಾ ಪದ್ಧತಿಯ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ವರದಿ ಹಿನ್ನೆಲೆ ಇಂದು ರಾಜ್ಯ ಸರ್ಕಾರ ದತ್ತಪೀಠದ ವಿಚಾರದಲ್ಲಿ ಮಹತ್ವದ ಆದೇಶ ಹೊರಡಿಸಿದೆ.
 

Latest Videos
Follow Us:
Download App:
  • android
  • ios