Asianet Suvarna News Asianet Suvarna News

ಸರ್ಕಾರ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು : ಕೆ. ಮರೀಗೌಡ

ಸರ್ಕಾರ ಗ್ರಾಮೀಣ ಭಾಗದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಲು ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಆಗ್ರಹಿಸಿದರು.

Government should encourage folk artists: K. Mari Gowda snr
Author
First Published Oct 13, 2023, 10:10 AM IST

 ಮೈಸೂರು :  ಸರ್ಕಾರ ಗ್ರಾಮೀಣ ಭಾಗದಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಲು ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಆಗ್ರಹಿಸಿದರು.

ಮೈಸೂರು ತಾಲೂಕು ಡಿ. ಸಾಲುಂಡಿ ಸ್ಯಾಂಡಲ್ ರೋಸ್ ಕಾನ್ವೆಂಟ್ ನಲ್ಲಿ ಕನ್ನಡ ಜಾನಪದ ಪರಿಷತ್ ಆಯೋಜಿಸಿದ್ದ ವಿಶ್ವ ಜಾನಪದ ದಿನ ಹಾಗೂ ವಿಶ್ವ ಬುಡಕಟ್ಟು ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅವಿದ್ಯಾವಂತರಾದ ನಮ್ಮ ಹಿರಿಯರು ರಾಗಿ ಬೀಸುವಾಗ, ನಾಟಿ ಮಾಡುವಾಗ, ಮದುವೆ ಸಮಾರಂಭಗಳಲ್ಲಿ ಹಾಡುತ್ತಿದ್ದ ಜಾನಪದ ಹಾಡುಗಳು ಬಾಯಿಂದ ಬಾಯಿಗೆ, ಕಿವಿಯಿಂದ ಕಿವಿಗೆ ಹೋಗಿ ಇಂಪಾಗಿ ಕೇಳಿಸುತ್ತಿದ್ದವು ಎಂದರು.

ಇಂದು ಆಧುನಿಕತೆ, ತಂತ್ರಜ್ಞಾನ ಬೆಳೆದಂತೆ ಟಿವಿ, ಮೊಬೈಲ್ ಬಂದ ಮೇಲೆ ಜಾನಪದ ಕಲೆ, ಕಲಾವಿದರು ಮರೆಯಾಗುತ್ತಿದ್ದಾರೆ. ಇಂದಿಗೂ ಜಾನಪದ ಹಾಡುಗಳನ್ನು ಕೇಳುವಾಗ ನಮ್ಮ ಮನಸ್ಸು ಉಲ್ಲಾಸಗೊಳ್ಳುತ್ತದೆ. ಮಲೆ ಮಹದೇಶ್ವರ ಹಾಡುಗಳು, ಮಂಟೇಸ್ವಾಮಿ ಹಾಡುಗಳು, ಜಾನಪದ ಕಲಾವಿದರ ಬಾಯಲ್ಲಿ ನಲಿದಾಡುತ್ತಿವೆ. ಆದ್ದರಿಂದ ಸರ್ಕಾರ ಜಾನಪದ ಕಲೆಯನ್ನು ಉಳಿಸಲು ಮುಂದಾಗಬೇಕು. ಹಾಗೂ ಶಾಲಾ ಮಕ್ಕಳಿಗೆ ಜಾನಪದ ಗೀತೆ, ಕಲೆಯ ಬಗ್ಗೆ ತರಬೇತಿಯನ್ನು ನೀಡಬೇಕು ಎಂದು ಹೇಳಿದರು.

ಇದೇ ವೇಳೆ ಸೋಬಾನೆ ಹಾಡುಗಾರರಾದ ಚಿಕ್ಕಹೆಣ್ಣಮ್ಮ, ರೇವಮ್ಮ, ಮಹಾದೇವಪ್ಪ, ಚಂದ್ರ, ಗಂಗಮ್ಮ, ಹರ್ಷ, ಲಿಂಗಪ್ಪ, ಕೃಷ್ಣಮೂರ್ತಿ, ಕೆಎಸ್ಆರ್ಟಿಸಿ ಜವರೇಗೌಡ ಅವರನ್ನು ಸನ್ಮಾನಿಸಲಾಯಿತು.

ಸಾಹಿತಿ ಬನ್ನೂರು ಕೆ. ರಾಜು, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ಪ್ರಕಾಶ್, ಬಸವೇಶ್ವರ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಶೋಭಾ ಶಿವರಾಜು, ಸಮಾಜ ಸೇವಕ ಕೆ. ರಘುರಾಮ್, ಬೇಸೂರು ಮೋಹನ್ ಪಾಳೇಗಾರ್, ವಿನೋದ್, ದೊರೆಸ್ವಾಮಿ, ಶಿವಕುಮಾರ್ ಇದ್ದರು.

ಕೊಪ್ಪಳದಲ್ಲಿ ತಲೆ ಎತ್ತಲಿದೆ ಜಾನಪ್ ಲೋಕ

ಕೊಪ್ಪಳ (ಜು.8) :  ಜಿಲ್ಲೆಗೆ ಕಳೆದ ಬಜೆಟ್‌ನಲ್ಲಿ ದಕ್ಕಿದ್ದು, ಈ ಬಾರಿಯ ಬಜೆಟ್‌ನಲ್ಲಿ ಕೈಬಿಡಲಾಗಿದೆ. ಇನ್ನು ಅದೇ ಹಳೆ ಯೋಜನೆಗಳನ್ನು ಮತ್ತೆ ಘೋಷಣೆ ಮಾಡಲಾಗಿದೆ. ಜಾನಪದ ಲೋಕ ನಿರ್ಮಾಣ ಕುರಿತು ಪ್ರಸ್ತಾಪ ಮಾಡಿದ್ದೊಂದೇ ಹೊಸ ಘೋಷಣೆ.

ಇದು ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಕೊಪ್ಪಳಕ್ಕಾದ ಲಾಭ-ನಷ್ಟದ ಲೆಕ್ಕಾಚಾರದ ಹೀಗಿದೆ.

Karnataka budget 2023: ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ನಿರಾಸೆ, ಹೇಳಿಕೊಳ್ಳುವಂಥ ಯೋಜನೆ ಇಲ್ಲ

ಜನಪದ ಲೋಕ ನಿರ್ಮಾಣ:

ರಾಮನಗರÜ ಜನಪದ ಲೋಕ ಮಾದರಿಯಲ್ಲಿಯೇ ಕೊಪ್ಪಳದಲ್ಲಿ ನೂತನ ಜನಪದ ಲೋಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ಕನಸಿನ ಈ ಯೋಜನೆ ಸಹಜವಾಗಿಯೇ ಕೊಪ್ಪಳ ಜಿಲ್ಲೆಯಲ್ಲಿ ತಲೆ ಎತ್ತಲಿದೆ. ಆದರೆ, ಇದಕ್ಕಾಗಿ ಅನುದಾನ ಮೀಸಲು ಇಟ್ಟಿಲ್ಲ ಎನ್ನುವುದೇ ಬೇಸರದ ಸಂಗತಿ. ಇದು ಈ ಬಾರಿಯ ಬಜೆಟ್‌ನಲ್ಲಿ ಜಿಲ್ಲೆಗೆ ಘೋಷಣೆಯಾಗಿರುವ ಏಕೈಕ ನೂತನ ಯೋಜನೆ.

ಕೆರೆ ತುಂಬಿಸುವ ಯೋಜನೆ ಘೋಷಣೆ ಮಾಡಲಾಗಿದೆ. ಆದರೆ, ಇದು ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆಯಾಗಿ ಜಾರಿಯಾಗುತ್ತಿರುವ ಯೋಜನೆ. ನಾಲ್ಕಾರು ಜಿಲ್ಲೆಗಳಲ್ಲಿ ಕೆರೆ ತುಂಬಿಸುವ ಯೋಜನೆ ಘೋಷಣೆ ಮಾಡಲಾಗಿದ್ದು, ಅದರಲ್ಲಿ ಕೊಪ್ಪಳ ಜಿಲ್ಲೆಯೂ ಒಂದು ಎನ್ನುವುದು ವಿಶೇಷ.

450 ಹಾಸಿಗೆಯ ಆಸ್ಪತ್ರೆ ನಿರ್ಮಾಣದ ಘೋಷಣೆಯಾಗಿದೆ. ಆದರೆ, ಈಗಾಗಲೇ ಕೊಪ್ಪಳ ಬಳಿ ಕಿಮ್ಸ್‌ ಅಡಿಯಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಈಗ ಘೋಷಣೆಯಾಗಿರುವ 450 ಹಾಸಿಗೆಯ ಆಸ್ಪತ್ರೆ ಪ್ರತ್ಯೇಕ ಆಸ್ಪತ್ರೆಯೇ ಎನ್ನುವ ಬಗ್ಗೆ ನಿಖರ ಮಾಹಿತಿ ಇಲ್ಲ.

ನವಲಿ ಸಮಾಂತರ ಜಲಾಶಯ:

ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬುತ್ತಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಇದಕ್ಕೆ ಪರಿಹಾರವಾಗಿ ನವಲಿ ಸಮಾಂತರ ಜಲಾಶಯ ನಿರ್ಮಾಣಕ್ಕೆ ಈ ಹಿಂದಿನ ಸರ್ಕಾರವೇ ಅಸ್ತು ಎಂದು ಸುಮಾರು .1 ಸಾವಿರ ಕೋಟಿ ಘೋಷಣೆ ಮಾಡಿತ್ತು. ಆದರೆ, ಅದನ್ನು ಡಿಪಿಆರ್‌ ಮಾಡುವ ಕಾರ್ಯವೂ ಆಗಿದ್ದು ಅಷ್ಟಕಷ್ಟೇ. ಉಳಿದಂತೆ ಯಾವ ಪ್ರಗತಿಯೂ ಕಾಣಲೇ ಇಲ್ಲ. ಈಗ ಪುನಃ ಈ ಕುರಿತು ಪ್ರಸ್ತಾಪ ಮಾಡಲಾಗಿದೆ. ಆಂಧ್ರ, ತೆಲಂಗಾಣ ಸರ್ಕಾರಗಳೊಂದಿಗೆ ಚರ್ಚಿಸಿ ಯೋಜನೆ ಅನುಷ್ಠಾನ ಮಾಡುವ ಕುರಿತು ಪ್ರಸ್ತಾಪ ಮಾಡಲಾಗಿದೆ.

ದಕ್ಕಿದ್ದು ಕೈ ಜಾರಿತೆ !:

ಕಳೆದ ಬಾರಿ ಬಿಜೆಪಿ ಸರ್ಕಾರ ಮಂಡನೆ ಮಾಡಿದ ಬಜೆಟ್‌ನಲ್ಲಿ ಘೋಷಣೆಯಾಗಿದ್ದ ಒಂದಷ್ಟುಯೋಜನೆಗಳ ಕುರಿತು ಪ್ರಸಕ್ತ ಕಾಂಗ್ರೆಸ್‌ ಸರ್ಕಾರ ಮಂಡನೆ ಮಾಡಿರುವ ಬಜೆಟ್‌ನಲ್ಲಿ ಕೈ ಬಿಟ್ಟಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

ಕೊಪ್ಪಳ ಜಿಲ್ಲೆಗೆ ಮಂಜೂರಾಗಿದ್ದ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಇನ್ನೇನು ಪ್ರಾರಂಭವಾಗಬೇಕಾಗಿದೆ. ಆದರೆ, ಈ ಕುರಿತು ಪ್ರಸಕ್ತ ಬಜೆಟ್‌ನಲ್ಲಿ ಪ್ರಸ್ತಾಪವೇ ಇಲ್ಲವಾದ್ದರಿಂದ ವಿಮಾನ ನಿಲ್ದಾಣ ನಿರ್ಮಾಣ ಕೈಬಿಡಲಾಯಿತೇ ಎನ್ನುವುದು ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿದೆ.

10-12 ವರ್ಷಗಳ ಹಿಂದೆಯೇ ಲೋಕಾರ್ಪಣೆಗೊಂಡಿರುವ ಸಿಂಗಟಾಲೂರು ಏತನೀರಾವರಿ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಗೆ ಇದುವರೆಗೂ ಹನಿ ನೀರು ದಕ್ಕಿಲ್ಲ. ಇದನ್ನು ಕಳೆದ ಸರ್ಕಾರ ಮಧ್ಯಪ್ರದೇಶ ಮಾದರಿಯಲ್ಲಿ ಜಾರಿ ಮಾಡುವುದಾಗಿ ಹೇಳಿದ್ದು, ಈ ಬಾರಿ ಬಜೆಟ್‌ನಲ್ಲಿ ಪ್ರಸ್ತಾಪವೇ ಮಾಡಿಲ್ಲ. ಹಾಗಾದರೆ ಸಿಂಗಟಾಲೂರು ಏತ ನೀರಾವರಿ ಯೋಜನೆ ಜಾರಿ ಏನಾಗುತ್ತದೆ ಎನ್ನುವುದೇ ಈಗಿರುವ ಪ್ರಶ್ನೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡುವ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಆದರೆ, ಅದರಲ್ಲಿ ಕೊಪ್ಪಳ ಜಿಲ್ಲೆಯ ಯಾವ ಪ್ರವಾಸಿ ತಾಣಗಳ ಪ್ರಸ್ತಾಪ ಇಲ್ಲ. ವಿಶ್ವದ ಗಮನ ಸೆಳೆಯುತ್ತಿರುವ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಯ ಪ್ರಸ್ತಾಪ ಮಾಡಿಲ್ಲ, ಈ ಹಿಂದೆ ಬಜೆಟ್‌ನಲ್ಲಿ ಘೋಷಣೆ ಮಾಡಿದ ನೂರು ಕೋಟಿ ಯೋಜನೆ ಮಂದುವರೆಸುವ ಕುರಿತು ಪ್ರಸ್ತಾಪ ಮಾಡಿಲ್ಲ.

Follow Us:
Download App:
  • android
  • ios