Asianet Suvarna News Asianet Suvarna News

ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ: ಸಚಿವ ಪ್ರಲ್ಹಾದ್ ಜೋಶಿ

ಜನರಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪೈಕಿ ಶಿಕ್ಷಣ, ನೀರು, ವಸತಿ ಮತ್ತು ಆರೋಗ್ಯ ಬಹು ಮುಖ್ಯವಾದವುಗಳಾಗಿವೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.

Governments responsibility to provide quality education Says Minister Pralhad Joshi gvd
Author
First Published Sep 30, 2024, 4:45 PM IST | Last Updated Sep 30, 2024, 4:45 PM IST

ಅಳ್ನಾವರ (ಸೆ.30): ಜನರಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪೈಕಿ ಶಿಕ್ಷಣ, ನೀರು, ವಸತಿ ಮತ್ತು ಆರೋಗ್ಯ ಬಹು ಮುಖ್ಯವಾದವುಗಳಾಗಿವೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು. ಸಮೀಪದ ಮುರಕಟ್ಟಿ ಗ್ರಾಮದಲ್ಲಿನ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೇರವೇರಿಸಿ ನಂತರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ನಾವೂ ಬದಲಾವಣೆ ಹೊಂದಲು ಅವಶ್ಯಕವಾಗಿರುವ ಗುಣಮಟ್ಟದ ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿಗೂ ನೀಡುವುದು ಸರಕಾರದ ಜವಾಬ್ದಾರಿಯಾಗಿದ್ದು.

ಈ ನಿಟ್ಟಿನಲ್ಲಿ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಸುಮಾರು ಐದು ನೂರಕ್ಕೂ ಅಧಿಕ ಶಾಲಾ ಕೊಠಡಿಗಳ ನಿರ್ಮಾಣ ಮಾಡಿಸುವುದರ ಜೊತೆಗೆ ಬೋಧನಾ ಸಲಕರಣೆಗಳ ಪೂರೈಕೆ, ಸ್ಮಾರ್ಟ್‌ ಕ್ಲಾಸ್‌ಗಳ ನಿರ್ಮಾಣ, ಶಾಲೆಗಳಿಗೆ ಬಣ್ಣದರ್ಪಣ ಕಾರ್ಯಕ್ರಮದಡಿ ಬಣ್ಣ ಹಚ್ಚುವುದು ಇನ್ನಿತರ ಕೆಲಸಗಳಿಗೆ ಆದ್ಯತೆ ನೀಡಲಾಗಿದೆ. ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ಉದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ರಕ್ಷಣಾ ಕ್ಷೇತ್ರದಲ್ಲಿ ಸ್ವದೇಶಿ ಉತ್ಪನ್ನ ಹೆಚ್ಚಳ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರು ಒದಗಿಸುವ ಜಲ ಜೀವನ ಮೀಷನ್ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು ಮುಂಬರುವ ಒಂದು ವರ್ಷದೊಳಗಡೆ ಪ್ರತಿ ಮನೆಗೂ ನೀರು ತಲುಪಿಸುವ ಗುರಿ ಸಾಕಾರಗೊಳ್ಳಲಿದೆ ಎಂದು ಹೇಳಿದ ಪ್ರಹ್ಲಾದ್‌ ಜೋಶಿಯವರು ಕ್ಷೇತ್ರದ ಜನರ ಆಶೀರ್ವಾದಿಂದ ಜನ ಸೇವೆ ಮಾಡುವ ಅವಕಾಶ ಸಿಕ್ಕಿದ್ದು ಯಾವತ್ತೂ ಮರೆಯುವುದಿಲ್ಲ. ಜನರು ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಪ್ರಾಮಾಣಿಕ ಮತ್ತು ಭ್ರ‍ಷ್ಟಾಚಾರ ರಹಿತವಾದ ಆಡಳಿತ ನೀಡಲು ಬದ್ಧವಿರುವುದಾಗಿ ಭರವಸೆ ನೀಡಿದರು.

ಸರಳತೆ ಮೆರೆದ ಜೋಶಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ಮನವಿ ಸಲ್ಲಿಸಲು ಮುರಕಟ್ಟಿ ಗ್ರಾಮದಲ್ಲಿ ಜರುಗಿದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಳ್ಳಿಕೇರಿ ಗ್ರಾಮದ ವಿಕಲಚೇತನ ಯುವಕನ ನೋಡಿದ ಸಚಿವರು ಕಾರ್ಯಕ್ರಮದಿಂದ ನೇರವಾಗಿ ಆತನ ಬಳಿಗೆ ಬಂದು ಮನವಿ ಆಲಿಸಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಂಡಳ ಅಧ್ಯಕ್ಷ ಕಲ್ಮೇಶ ಬೇಲೂರ, ಜಿಪಂ ಮಾಜಿ ಸದಸ್ಯ ನಿಂಗಪ್ಪ ಘಾಟೀನ, ಈರಣ್ಣ ಗೋಕುಲ, ಶಿವಾನಂದ ಗುಂಡಗೋವಿ, ರಾಮಪ್ಪ ಸಲಕಿನಕೊಪ್ಪ, ರಾಮಣ್ಣ ಘಾಟೀನ, ಕಲಮೇಶ ಹಾವೇರಿಪೇಟ್, ಆರತಿ ಹಿರೇಮಠ, ಶಶಿ ನಿಂಬಣ್ಣವರ, ಲಿಂಗರಾಜ ಮೂಲಿಮನಿ, ರಾಮಣ್ಣ ತಳವಾರ, ಮಲ್ಲನಗೌಡ ಪಾಟೀಲ, ನಿಂಗನಗೌಡ ಪಾಟೀಲ, ಯಲ್ಲಪ್ಪ ಕೊಡಚವಾಡ, ಪ್ರವೀಣ ಪವಾರ, ಇನ್ನಿತರರು ಇದ್ದರು

ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯೊಂದಿಗೆ ಅಭಿವೃದ್ಧಿಗೂ ಒತ್ತು: ಸಚಿವ ಆರ್.ಬಿ.ತಿಮ್ಮಾಪೂರ

ಆರ್ಥಿಕ ಸ್ಥಿತಿ ಹದಗೆಟ್ಟಿದೆ: ಗ್ಯಾರಂಟಿ ಹೆಸರಿನಲ್ಲಿ ಸರಕಾರದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಅಭಿವೃದ್ದಿಗೆ ಹಣವೇ ಇಲ್ಲದಾಗಿದೆ. ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿ ಮಾಡಲು ರಾಜ್ಯ ಸರಕಾರಕ್ಕೆ ಆಗುತ್ತಿಲ್ಲ. ಈಗ ವಿತರಿಸುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರ ಸರಕಾರದ್ದಾಗಿದೆ. ಬಡ ಕುಟುಂಬಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ವಿತರಿಸುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್‌ ಅದರ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಿಂದ ಅಕ್ಕಿ ನೀಡಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಖರೀದಿಸುತ್ತಿಲ್ಲ.

Latest Videos
Follow Us:
Download App:
  • android
  • ios