Asianet Suvarna News Asianet Suvarna News

ಯಾವ ಸ್ಫೋಟವೂ ಆಗದು: ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು

ಸ್ಫೋಟವೂ ಆಗುವುದಿಲ್ಲ, ಏನೂ ಆಗುವುದಿಲ್ಲ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿರುಗೇಟು ನೀಡಿದ್ದಾರೆ.

Govind Karjol taunts siddaramaiah over his statement on cabinet expansion in mysore
Author
Bangalore, First Published Jan 22, 2020, 12:49 PM IST

ಮೈಸೂರು(ಜ.22): ಸಂಪುಟ ವಿಸ್ತರಣೆಯಾದಲ್ಲಿ ಸ್ಫೋಟ ಆಗುತ್ತೆ ಎಂಬ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿರುಗೇಟು ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಆದರೆ ಸಿದ್ದರಾಮಯ್ಯ ಹೇಳುವಂತೆ ಸ್ಫೋಟವೂ ಆಗುವುದಿಲ್ಲ, ಏನೂ ಆಗುವುದಿಲ್ಲ. ಅವರು ಭ್ರಮೆಯಲ್ಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬುದನ್ನ ನಮ್ಮ ನಾಯಕರು ನಿರ್ಧರಿಸುತ್ತಾರೆ. ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ, ಭಿನ್ನಾಭಿಪ್ರಾಯವೂ ಇಲ್ಲ ಎಂದು ಅವರು ಹೇಳಿದ್ದಾರೆ.

ಹಿಂದೂಗಳಲ್ಲಿ ಟೆರರಿಸ್ಟ್‌ ಇಲ್ಲ:

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಂದೂಗಳಲ್ಲಿ ಯಾರೂ ಟೆರರಿಸ್ಟ್‌ ಇಲ್ಲ. ಹಿಂದೂ ಭಯೋತ್ಪಾದನೆ ಅನ್ನುವ ಪದವನ್ನೇ ನಾನು ಕೇಳಿಲ್ಲ. ಭಯೋತ್ಪಾದಕರು ಎಂದರೆ ಪಾಕಿಸ್ತಾನದಿಂದ ಬಂದವರು ಅಂತ ಅಂದುಕೊಂಡಿದ್ದೇನೆ. ಆದ್ದರಿಂದ ಬಾಂಬ್‌ ಪತ್ತೆ ಪ್ರಕರಣ ಸೂಕ್ತ ತನಿಖೆ ಆಗಬೇಕು. ತನಿಖಾ ಹಂತದಲ್ಲಿ ಒಬ್ಬಬ್ಬರೂ ಒಂದೊಂದು ರೀತಿ ಹೇಳಿಕೆ ನೀಡುವುದು ಬೇಡ. ಇಡೀ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ನಿನ್ನೆ ನಾನು ದೆಹಲಿಯಲ್ಲಿ ಇದ್ದೆ. ಇಂದು ಮೈಸೂರಿಗೆ ಬಂದಿದ್ದೇನೆ. ಬಾಂಬ್‌ ಪತ್ತೆ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಸರ್ಕಾರ ಟೇಕ್‌ ಆಫ್‌ ಅಲ್ಲ, ಸತ್ತೇ ಹೋಗಿದೆ, ಸಿಎಂ ಸುಳ್‌ ಹೇಳ್ಕೊಂಡ್ ತಿರುಗ್ತಾರೆ: ಸಿದ್ದು

ವಿರೋಧ ಪಕ್ಷಗಳು ಸಿಎಎಯನ್ನು ಯಾಕೆ ಇಷ್ಟುವಿರೋಧ ಮಾಡುತ್ತಿವೆ ಗೊತ್ತಿಲ್ಲ. ಜವಹರಲಾಲ್‌ ನೆಹರು, ಇಂದಿರಾ ಗಾಂಧಿ ರಾಜೀವ್‌ ಗಾಂಧಿ ಮನಮೋಹನ್‌ ಸಿಂಗ್‌ ಕಾಲದಲ್ಲಿಯೂ ಪೌರತ್ವ ಕಾಯ್ದೆಗೆ ತಿದ್ದುಪಡಿ ಆಗಿದೆ. ಹಾಗೆಲ್ಲಾ ವಿರೋಧ ಮಾಡದ ಕಾಂಗ್ರೆಸ್‌ನವರು ಈಗ ಯಾಕೆ ಇಷ್ಟೊಂದು ಪ್ರತಿರೋಧ ತೋರುತ್ತಿದೆ. ಬಾಂಗ್ಲಾದೇಶ, ಪಾಕಿಸ್ತಾನ, ಆಷ್ಘಾನಿಸ್ತಾನ ದೇಶಗಳಿಂದ ಬಂದವರು ಶೋಷಿತರು. ಅತ್ಯಾಚಾರಕ್ಕೆ ಒಳಗಾದವರಿಗೆ ಪೌರತ್ವ ನೀಡುತ್ತಿದ್ದೇವೆ. ಜೊತೆಗೆ ಆಕ್ರಮ ವಲಸಿಗರನ್ನ ದೇಶದಿಂದ ಹೊರಕ್ಕೆ ಕಳುಹಿಸುತ್ತಿದ್ದೇವೆ ಎಂದರು. ವಲಸಿಗರು ಇಲ್ಲಿ ಇರುವುದರಿಂದ ದೇಶಕ್ಕೆ ಆರ್ಥಿಕ ಹೊರೆಯಾಗುತ್ತಿದ್ದೆ. ಇಲ್ಲಿ ನೆಲಸಿರುವ ಯಾವೊಬ್ಬರಿಗೂ ತೊಂದರೆ ಕೊಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow Us:
Download App:
  • android
  • ios