ಉಡುಪಿ(ಮಾ.05): ಉಡುಪಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಲೇಜು ಡೇ ದಿನ ಮದ್ಯ ಸೇವಿಸಿದ್ದ ಯುವಕ ಸ್ನೇಹಿತರಿಗೆ ಕರೆ ಮಾಡಿ ಮಾಹಿತಿ ನೀಡಿ ಆತ್ಮಹತ್ಯೆ ಮಾಡಿದ್ದಾನೆ.

ಸರಕಾರಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದು, ಚರಣ್ ಶೆಟ್ಟಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೆಬ್ರಿ ಕಾಲೇಜಿನಲ್ಲಿ ಪ್ರಥಮ‌ ಬಿಕಾಂ ಕಲಿಯುತ್ತಿರುವ ವಿದ್ಯಾರ್ಥಿ ಕಾಲೇಜು ಡೇ ದಿನ ಮದ್ಯ ಸೇವಿಸಿ ಗಲಾಟೆ ಮಾಡಿದ್ದ.

ಕೋಲಾರ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು

ಮದ್ಯ ಸೇವಿಸಿದ್ದಕಕೆ ವಿದ್ಯಾರ್ಥಿಯನ್ನು ಶಿಕ್ಷಕರು ತರಾಟೆಗೆ ತೆಗೆದುಕೊಂಡಿದ್ದರು. ಪೋಷಕರ ಸಭೆಯಲ್ಲೂ ಶಿಕ್ಷಕರಿಂದ ವಿದ್ಯಾರ್ಥಿ ಬಗ್ಗೆ ದೂರು ಕೇಳಿ ಬಂದಿತ್ತು. ಶಿಕ್ಷಕರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಚರಣ್ ಶೆಟ್ಟಿ ಆರೋಪಿಸಿದ್ದಾನೆ.

ಆತ್ಮಹತ್ಯೆಗೆ ಮೊದಲು ಗೆಳೆಯರಿಗೆ ಕರೆ ಮಾಡಿದ್ದ ಚರಣ್ ಮನೆ ಸಮೀಪದ ಮಂದಾರ್ತಿ ಗ್ರಾಮದ ಹಾಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]