Asianet Suvarna News Asianet Suvarna News

ಪ್ರಾಪರ್ಟಿ ಕಾರ್ಡ್‌ ರದ್ದತಿಗೆ ಮುಂದಾದ ಸರ್ಕಾರ

ಆಸ್ತಿದಾರರಿಗೆ ತೀವ್ರ ಕಿರಿಕಿರಿಯಾಗಿದ್ದ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ವ್ಯವಸ್ಥೆ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಪ್ರಾಪರ್ಟಿ ಕಾರ್ಡ್‌ ವ್ಯವಸ್ಥೆಯಿಂದ ನಗರದ ಆಸ್ತಿ ಮಾಲೀಕರಿಗೆ ಉಂಟಾಗುತ್ತಿದ್ದ ಕಿರಿಕಿರಿಯನ್ನು ಮನಗಂಡು ಈ ರೀತಿ ಮಾಡಲಾಗಿದೆ ಎಂದಿದ್ದಾರೆ.

Govt decides to remove property card says B Y Raghavendra
Author
Bangalore, First Published Sep 10, 2019, 11:08 AM IST
  • Facebook
  • Twitter
  • Whatsapp

ಶಿವಮೊಗ್ಗ(ಸೆ.10): ಆಸ್ತಿದಾರರಿಗೆ ತೀವ್ರ ಕಿರಿಕಿರಿಯಾಗಿದ್ದ ಪ್ರಾಪರ್ಟಿ ಕಾರ್ಡ್‌ ಕಡ್ಡಾಯ ವ್ಯವಸ್ಥೆ ರದ್ದುಗೊಳಿಸಲು ಸರ್ಕಾರ ಮುಂದಾಗಿದ್ದು, ನಗರದ ಜನತೆಯ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಪ್ರಾಪರ್ಟಿ ಕಾರ್ಡ್ ಸಂಬಂಧ ಸಂಸದ ಬಿ. ವೈ. ರಾಘವೇಂದ್ರ ಅವರು ಪತ್ರಿಕಾ ಹೇಳಿಕೆಯೊಂದನ್ನು ನೀಡಿ, ಪ್ರಾಪರ್ಟಿ ಕಾರ್ಡ್‌ ವ್ಯವಸ್ಥೆಯಿಂದ ನಗರದ ಆಸ್ತಿ ಮಾಲೀಕರಿಗೆ ಉಂಟಾಗುತ್ತಿದ್ದ ಕಿರಿಕಿರಿಯನ್ನು ಮನಗಂಡ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಆಸ್ತಿ ನೋಂದಣಿ ಸಂದರ್ಭದಲ್ಲಿ ಪ್ರಾಪರ್ಟಿ ಕಾರ್ಡ್‌ ಹಾಜರಾತಿ ಕಡ್ಡಾಯ ಮಾಡಿರುವುದನ್ನು ರದ್ದುಗೊಳಿಸುವ ಸಂಬಂಧ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ತವರು ಜಿಲ್ಲೆಗೆ ರೈಲು ಸೇವೆ ಸೇರಿ ಸಿಎಂ BSY ಗುಡ್ ನ್ಯೂಸ್

ಪ್ರಾಪರ್ಟಿ ಸಂಬಂಧ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದು, ಯೋಜನೆಯನ್ನು ತಾಂತ್ರಿಕವಾಗಿ ಇನ್ನಷ್ಟುಬಲಿಷ್ಠಗೊಳಿಸಿದ ನಂತರ ಹಾಗೂ ಎಲ್ಲ ಆಸ್ತಿ ಮಾಲೀಕರಿಗೆ ಪ್ರಾಪರ್ಟಿ ಕಾರ್ಡ್‌ ವಿತರಣೆ ಮಾಡಿದ ನಂತರ ಯೋಜನೆ ಜಾರಿಗೆ ಆದ್ಯತೆ ನೀಡಬೇಕು ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ ಎಂದು ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್‌. ಈಶ್ವರಪ್ಪ ಮತ್ತು ಜನಸಾಮಾನ್ಯರ ನೋವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಸಂಸದ ಬಿ.ವೈ. ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

Follow Us:
Download App:
  • android
  • ios