ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ : ಹೊಸ ಸೇವೆ ಶೀಘ್ರ ಶುರು

ಶೀಘ್ರ ಕರ್ನಾಟಕ ಸಾರಿಗೆ ಇಲಾಖೆಯಿಂದ ಹೊಸ ಸೇವೆಗಳು ಆರಂಭವಾಗಲಿವೆ. ಸಾರ್ವಜನಿರಿಗೆ ಇದರಿಂದ ಸಾಕಷ್ಟು ಅನುಕೂಲತೆ ಒದಗಲಿದೆ.

Govt may soon allow courier parcel services From Transportation Department

ರಾಯಚೂರು (ಆ.16): ತೀವ್ರ ಸಂಕಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನು ಆರ್ಥಿಕ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದು, ಆ ನಿಟ್ಟಿನಲ್ಲಿ ಇಲಾಖೆಯಿಂದ ಕೋರಿಯರ್‌ ಸೇವೆ ಆರಂಭಿಸಲಾಗುತ್ತಿದೆ. 

ಇದರ ಜೊತೆಗೆ ಬಸ್‌ಗಳಲ್ಲಿ ಸೈಕಲ್‌ ತೆಗೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸುವ ಚಿಂತನೆ ಸಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಬೆಂಗಳೂರು ಗಲಭೆ: ಕಾಂಗ್ರೆಸ್‌ ಮುಖವಾಡ ಬಯಲು, ಡಿಸಿಎಂ ಲಕ್ಷ್ಮಣ ಸವದಿ...

ಡಿಎಆರ್‌ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಬಸ್‌ಗಳು ರಾಜ್ಯದ ಪ್ರತಿ ನಗರ, ಪಟ್ಟಣ, ಗ್ರಾಮೀಣ ಭಾಗಕ್ಕೆ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಕೋರಿಯರ್‌ ಸೇವೆ ಆರಂಭಿಸಿ ಖಾಸಗಿ ಕೋರಿಯರ್‌ಗಿಂತಲೂ ವೇಗವಾಗಿ ಸೇವೆ ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.

 ಅದೇ ರೀತಿ ಸರ್ಕಾರಿ ಬಸ್‌ಗಳಲ್ಲಿ ಸೈಕಲ್‌ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದೆ. ಆ ನಿಟ್ಟಿನಲ್ಲಿ ಬಸ್‌ಗಳ ಮುಂದೆ ಹಾಗೂ ಹಿಂಭಾಗದಲ್ಲಿ ಸ್ಟ್ಯಾಂಡ್‌ ಅಳವಡಿಸಲಾಗುವುದು ಎಂದು ತಿಳಿಸಿದರು.

Latest Videos
Follow Us:
Download App:
  • android
  • ios