ಬೆಂಗಳೂರು (ಸೆ.06) : ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ 30 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. 

ಅಲ್ಲದೆ, ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ ಗಳ ಪರಿಹಾರಕ್ಕೆ 10 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. 

ಆಗಸ್ಟ್‌ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿದ್ದ ನೆರೆ ಪರಿಸ್ಥಿತಿಯಿಂದ ಬಟ್ಟೆ ಬರೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರು ವಂತೆ ತಲಾ 10 ಸಾವಿರ ರು. ಪರಿಹಾರ ನೀಡಲು ಹಾಗೂ  ಇತರೆ ರಕ್ಷಣಾ ಕಾರ್ಯಗಳಿಗೆ ಬಿಲ್ಲುಗಳ ಸಂದಾಯಕ್ಕೆ 40  ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಸೆ. 1ರಂದು ಸರ್ಕಾರವನ್ನು ಕೋರಿದ್ದರು. 

ಮಳೆಗೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಪರಿಹಾರಕ್ಕೆ 10 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆಗೆ ಅಲ್ಲಿನ ಡೀಸಿ ಮನವಿ ಮಾಡಿದ್ದರು.