ವಿಜಯಪುರ(ಮಾ.05): ಗ್ರಾಮ ಪಂಚಾಯತ ಉಪಾಧ್ಯಕ್ಷನೊಬ್ಬರನ್ನ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. 

ಶರಣಪ್ಪ ಗುರಪ್ಪ ಪುಟಾಣಿ(55) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಯರಗಲ್ ಗ್ರಾ.ಪಂ ಉಪಾಧ್ಯಕ್ಷನಾಗಿದ್ದ ಶರಣಪ್ಪ ಹೊಲದಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ‌ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾರು ಕೊಲೆ ಮಾಡಿದರು ಎಂಬುದರ ಬಗ್ಗೆಯೂ ಮಾಹಿತಿ ಲಭ್ಯವಾಗಿಲ್ಲ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.