ಗ್ರಾಪಂ ಚುನಾವಣಾ ವೈಷಮ್ಯಕ್ಕೆ ಗೆದ್ದ ಅಭ್ಯರ್ಥಿಯ ಸಂಬಂಧಿ ಬಲಿ | ಜಗಳೂರು ತಾಲೂಕಲ್ಲಿ ಘಟನೆ | 2 ಗುಂಪುಗಳ ನಡುವೆ ಮಾರಾಮಾರಿ | ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ
ದಾವಣಗೆರೆ(ಜ.05): ಜಗಳೂರು ಗ್ರಾಮ ಪಂಚಾಯಿತಿ ಚುನಾವಣೆ ವೈಷಮ್ಯದ ಹಿನ್ನೆಲೆ ಭಾನುವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ತಂದೆ ಮೃತಪಟ್ಟರೆ, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಿನಿಗರಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ(70) ಮೃತ ದುರ್ದೈವಿ. ಇವರ ಮಗ ವೀರೇಂದ್ರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಪಂ ಚುನಾವಣೆಯಲ್ಲಿ ಕೃಷ್ಣಪ್ಪ ಅವರ ಸಹೋದರನ ಸೊಸೆ ಜಯಶೀಲರಾಗಿದ್ದು, ಚುನಾವಣೆ ಸಂಬಂಧವಾಗಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಭಾನುವಾರ ರಾತ್ರಿ ಆರಂಭಗೊಂಡ ಮಾತಿನ ಚಕಮಕಿ, ಘರ್ಷಣೆ ಸ್ವರೂಪ ಪಡೆದಿತ್ತು.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: 3 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್
ಈ ವೇಳೆ 2 ಗುಂಪುಗಳ ನಡೆದ ಮಾರಾಮಾರಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣಪ್ಪರನ್ನು ಜಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ತೀವ್ರ ಸ್ವರೂಪದ ಗಾಯಗಳಾಗಿರುವ ಕೃಷ್ಣಪ್ಪ ಅವರ ಪುತ್ರನನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಸದ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಘಟನೆ ಸಂಬಂಧ 8 ಜನರ ಮೇಲೆ ಜಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಸ್ಪತ್ರೆ ಎದುರು ಪ್ರತಿಭಟನೆ:
ಕೃಷ್ಣಪ್ಪ ಅವರ ಸಾವಿನ ಸುದ್ದಿ ತಿಳಿದು ಸಂಬಂಧಿಕರು ಸರ್ಕಾರಿ ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು. ಸಾವಿಗೆ ಕಾರಣರಾದವನ್ನು ಕೂಡಲೇ ಬಂಧಿಸಬೇಕು. ಜಗಳಕ್ಕೆ ಕುಮ್ಮಕ್ಕು ನೀಡಿದವರಿಗೆ ಶಿಕ್ಷೆ ಆಗಬೇಕು ಎಂದು ಪಟ್ಟುಹಿಡಿದರು. ಮಾಜಿ ಶಾಸಕ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸ್ಥಳಕ್ಕಾಗಮಿಸಿದ ಹೆಚ್ಚುವರಿ ಪೊಲೀಸ್ ಅಧಿಕ್ಷಕ ರಾಜೀವ್, ಯಾರೇ ಆಗಲಿ ತಪ್ಪಿತಸ್ಥರಿಗೆ ಕಾನೂನು ಚೌಕಟ್ಟಿನಡಿ ಶಿಕ್ಷೆ ನೀಡಲಾಗುವುದು. ಗ್ರಾಮದಲ್ಲಿ ಶಾಂತಿ ಕಾಪಾಡಬೇಕು. ಇಂಥ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪರಿಸ್ಥಿತಿ ಶಾಂತಗೊಂಡಿತ್ತು. 04ಜೆಎಲ್‌ಆರ್‌ಚಿತ್ರ2.ಜೆಪಿಜಿ: ಮಿನುಗರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತ ವ್ಯಕ್ತಿ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 5, 2021, 10:33 AM IST