Asianet Suvarna News Asianet Suvarna News

ಜನರ ಕಂದುಕೊರತೆ ನಿವಾರಿಸುವಲ್ಲಿ ಗ್ರಾಮವಾಸ್ತವ್ಯ ಯಶಸ್ವಿ: ಶಾಸಕ ರಾಜೇಶ್‌ ಗೌಡ

ಜನರ ಕುಂದು ಕೊರತೆಗಳು, ಅವರ ಆಶಯಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಾಗೂ ಮೂಲಭೂತ ಅಗತ್ಯತೆಗಳನ್ನು ನೇರವಾಗಿ ಅವರ ಮನೆ ಬಾಗಿಲಿಗೆ ಸವಲತ್ತುಗಳು ದೊರಕಬೇಕು.

Gramvastavya was successful in eliminating the shortage of people says mla cm rajesh gowda gvd
Author
First Published Sep 18, 2022, 11:12 PM IST

ಶಿರಾ (ಸೆ.18): ಜನರ ಕುಂದು ಕೊರತೆಗಳು, ಅವರ ಆಶಯಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಾಗೂ ಮೂಲಭೂತ ಅಗತ್ಯತೆಗಳನ್ನು ನೇರವಾಗಿ ಅವರ ಮನೆ ಬಾಗಿಲಿಗೆ ಸವಲತ್ತುಗಳು ದೊರಕಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯುತ್ತಿದ್ದು, ಸ್ಥಳೀಯರ ಸಮಸ್ಯೆಗಳನ್ನು ಕೇಳಿ ಅಧಿಕಾರಿಗಳ ಮೂಲಕ ಸ್ಥಳದಲ್ಲಿಯೇ ಪರಿಹರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು. 

ತಾಲೂಕಿನ ರತ್ನಸಂದ್ರ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್‌ ಮಮತಾ ಮಾತನಾಡಿ, ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಗ್ರಾಮಸ್ಥರೂ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ ಎಂದರು.

ಕಾಂಗ್ರೆಸ್‌ನಲ್ಲಿ ಅಪಸ್ವರ ಇರುವುದು ಸತ್ಯ: ಪರಮೇಶ್ವರ್‌

ಕಾರ್ಯಕ್ರಮದಲ್ಲಿ ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆ ಸೇರಿದಂತೆ ಹಲವಾರು ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ರತ್ನಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ರಂಗನಾಥ್‌, ಉಪಾಧ್ಯಕ್ಷೆ ಲಕ್ಷ್ಮೇದೇವಿ ನಾಗರಾಜ್‌, ಸಹಾಯಕ ಕೃಷಿ ನಿರ್ದೇಶಕ ರಂಗನಾಥ್‌, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್‌, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಗ್ರೇಡ್‌ 2 ತಹಸೀಲ್ದಾರ್‌ ಮಂಜುನಾಥ್‌, ವಲಯ ಅರಣ್ಯಾಧಿಕಾರಿ ನವನೀತ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್‌, ಆಹಾರ ಪೂರೈಕೆ ಇಲಾಖೆ ನಾಗರಾಜು, ಪಿಡಿಒ ವಿಜಯ್‌ಕುಮಾರ್‌, ಕಸಬಾ ಹೋಬಳಿ ಕಂದಾಯ ವೃತ್ತ ನಿರೀಕ್ಷಕ ಮಂಜುನಾಥ್‌ ಸೇರಿದಂತೆ ಹಲವರು ಭಾಗವಹಿಸಿದ್ದರು

ಐಕ್ಯತಾ ಯಾತ್ರೆ ಮೂಲಕ ದೇಶದಲ್ಲಿ ಬದಲಾವಣೆ ತರಬೇಕು: ಡಿಕೆಶಿ

ಸಾಮಾನ್ಯನ ಮೊಗದಲ್ಲಿ ಮಂದಹಾಸ ಮೂಡಬೇಕು: ಸರ್ಕಾರ ಕಟ್ಟಕಡೆಯ ಸಾಮಾನ್ಯ ಪ್ರಜೆಯೂ ನಿರ್ಲಕ್ಷ್ಯವಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಜಾರಿಗೆ ತಂದಿದೆ. ಸರ್ಕಾರದ ಸವಲತ್ತುಗಳು ಸಾಮಾನ್ಯ ಪ್ರಜೆಗೆ ತಲುಪಿ ಅವರ ಮುಖದಲ್ಲಿ ಮಂದಹಾಸ ಮೂಡಿದಾಗ ಸರ್ಕಾರಗಳ ಯೋಜನೆಗಳನ್ನು ತಂದಿದ್ದು ಸಾರ್ಥಕವಾಗುತ್ತದೆ. ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ನರೇಗಾ ಯೋಜನೆಗಳು ಸೇರಿದಂತೆ ಎಲ್ಲಾ ಇಲಾಖೆಗಳ ಸವಲತ್ತುಗಳ ಬಗ್ಗೆ ಮಾಹಿತಿ ಕೇಂದ್ರಗಳನ್ನು ತೆರೆದು ಜನತೆಗೆ ಸವಲತ್ತುಗಳ ಬಗ್ಗೆ ತಿಳಿಸಲಾಗುತ್ತಿದೆ. ಅಧಿಕಾರಿಗಳು ಸಹ ಸರ್ಕಾರದ ಯೋಜನೆಗಳನ್ನು ಪೂರೈಸುವ ಕಾರ್ಯ ಮಾಡುತ್ತಿದ್ದಾರೆ. ಅರ್ಹ ಫಲಾನುಭವಿಗಳಿಗೆ ಮಾಶಾಸನ ಪತ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ವಿತರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

Follow Us:
Download App:
  • android
  • ios