ಕಡಿಮೆ ನೀರಿನಲ್ಲಿ ಹೆಚ್ಚಿನ ಬೆಳೆ ಪ್ರಾತ್ಯಕ್ಷಿಕೆ

ಕಡಿಮೆ ನೀರಿನ ಪ್ರಮಾಣದಲ್ಲಿ ಹೆಚ್ಚು ಲಾಭ ನೀಡುವಂತಹ ತಂತ್ರಜ್ಞಾನ ಆಧಾರಿತ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆಯ ಬೆಳೆ ಮೂಲಕ ಅನ್ನದಾತರಿಗೆ ಕೃಷಿಯತ್ತ ಹೆಚ್ಚು ಆಕರ್ಷಿತರನ್ನಾಗಿ ಮಾಡಬೇಕು ಎಂದು ಎಂದು ಜಿ.ಪಂ. ಸಿಇಒ ಜಿ.ಪ್ರಭು ಹೇಳಿದರು.

Greater crop performance with less water snr

  ಶಿರಾ :  ಕಡಿಮೆ ನೀರಿನ ಪ್ರಮಾಣದಲ್ಲಿ ಹೆಚ್ಚು ಲಾಭ ನೀಡುವಂತಹ ತಂತ್ರಜ್ಞಾನ ಆಧಾರಿತ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆಯ ಬೆಳೆ ಮೂಲಕ ಅನ್ನದಾತರಿಗೆ ಕೃಷಿಯತ್ತ ಹೆಚ್ಚು ಆಕರ್ಷಿತರನ್ನಾಗಿ ಮಾಡಬೇಕು ಎಂದು ಎಂದು ಜಿ.ಪಂ. ಸಿಇಒ ಜಿ.ಪ್ರಭು ಹೇಳಿದರು.

ಆರೋಗ್ಯ, ಕೃಷಿ, ಕ್ರೀಡೆ, ನರೇಗಾ, ಮಹಿಳಾ ಸಬಲೀಕರಣ, ಪಿಂಚಣಿ ಅದಾಲತ್ ಬಗ್ಗೆ ಕಾರ್ಯಾಗಾರ ಏರ್ಪಡಿಸಿ ಜನಸಾಮಾನ್ಯರಿಗೆ ಮಾಹಿತಿ ನೀಡಿದಾಗ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಗಳು ಹಲವಾರು ರೈತ ಮತ್ತು ಜನಸಾಮಾನ್ಯರಲ್ಲಿ ಬದಲಾವಣೆ ತರಲಿವೆ ಎಂದರು.

ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ 21ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ವಿವಿಧ ಯೋಜನೆಯಡಿ ನೀಡುವಂತಹ ಸವಲತ್ತುಗಳ ಬಗ್ಗೆ ಸಮಗ್ರ ಮಾಹಿತಿ ವಸ್ತು ಪ್ರದರ್ಶನದಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ಜನಸಾಮಾನ್ಯರಿಗೆ ತಿಳಿಯಪಡಿಸಬೇಕು. ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸ ಬೇಕು ಎಂದರು.

ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ರೈತ ಮಳೆಯಿಲ್ಲದೆ ಕಂಗಾಲಾಗಿದ್ದು ಕೃಷಿಯ ನೂತನ ಆವಿಷ್ಕಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಮೂಲಕ ಅನ್ನದಾತರಿಗೆ ಕೃಷಿ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವ ಕೆಲಸ ಇಲಾಖೆಗಳು ಮಾಡಬೇಕು. ಶ್ರೀಮಠ ಕಳೆದ 21 ವರ್ಷಗಳಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಏರ್ಪಡಿಸುವ ಮೂಲಕ ರೈತ, ಮಹಿಳೆಯರು, ಜನಸಾಮಾನ್ಯರ ಬದುಕಿನಲ್ಲಿ ಹೆಚ್ಚು ಬದಲಾವಣೆ ತಂದಿದೆ. ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ವಸ್ತು ಪ್ರದರ್ಶನವನ್ನು ಯಶಸ್ವಿಗೊಳಿಸಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ 2024 ಜ. 25 ರಿಂದ ಫೆ. 6ರವರೆಗೆ ನಡೆಯಲಿದ್ದು, ಜ.31 ರಂದು ಐತಿಹಾಸಿಕ ಪ್ರಸಿದ್ಧ ಶ್ರೀ ಒಂಕಾರೇಶ್ವರಸ್ವಾಮಿ ಕಲ್ಲುಗಾಲಿ ರಥೋತ್ಸವ ಹಾಗೂ 21ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆಗೊಳ್ಳಲಿದೆ.

ಪೂರ್ವಭಾವಿ ಸಭೆಯಲ್ಲಿ ಉಪ ನಿರ್ದೇಶಕ ನರಸಿಂಹಮೂರ್ತಿ, ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಸಿಪಿಒ ಸಣ್ಣ ಮಸಿಯಪ್ಪ, ತಹಸೀಲ್ದಾರ್ ಎಲ್.ಮುರಳಿಧರ, ತಾ.ಪಂ.ಸಿಇಒ ಅನಂತರಾಜು, ನಾದೂರು ಗ್ರಾ.ಪಂ. ಅಧ್ಯಕ್ಷೆ ರಕ್ಷಿತಾ ಆರ್.ಕೆ .ಮಾರುತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios