ತಂಬಾಕಿಗೆ ಪರ್ಯಾಯವಾಗಿ ರೇಷ್ಮೆ ಬೆಳೆಯಿರಿ: ರೈತರಿಗೆ ಸಚಿವ ವೆಂಕಟೇಶ್‌ ಸಲಹೆ

ತಂಬಾಕಿಗೆ ಪರ್ಯಾಯವಾಗಿ ವಾಣಿಜ್ಯ ಬೆಳೆಯಾದ ರೇಷ್ಮೆ ಬೆಳೆಯನ್ನು ಸಹ ಬೆಳೆಯಿರಿ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌ ತಿಳಿಸಿದರು. 

Grow Silk as an Alternative to Tobacco Says Minister K Venkatesh gvd

ರಾವಂದೂರು (ಆ.06): ತಂಬಾಕಿಗೆ ಪರ್ಯಾಯವಾಗಿ ವಾಣಿಜ್ಯ ಬೆಳೆಯಾದ ರೇಷ್ಮೆ ಬೆಳೆಯನ್ನು ಸಹ ಬೆಳೆಯಿರಿ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್‌ ತಿಳಿಸಿದರು. ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳು ಮತ್ತು ಮತದಾರರಿಗೆ ಕೃತಜ್ಞತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ತಂಬಾಕಿಗಿಂತಲೂ ರೇಷ್ಮೆ ಬೆಳೆಯು ಸಹ ಉತ್ತಮ ವಾಣಿಜ್ಯ ಬೆಳೆಯಾಗಿದೆ ಹಾಗೂ ಹೊಸ ಹೊಸ ಆವಿಷ್ಕಾರ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರೊಂದಿಗೆ

ಹೊಸ ವೈಜ್ಞಾನಿಕ ಪದ್ದತಿಗಳನ್ನು ಅನುಸರಿಸುವ ಮೂಲಕ ರೇಷ್ಮೆ ಬೆಳೆಯನ್ನು ಬೆಳೆಯುವ ಮೂಲಕ ಆರ್ಥಿಕ ಸ್ವಾವಲಂಭಿ ಬದುಕು ನಡೆಸಲು ಸಹಕಾರಿಯಾಗಿದೆ. ಹಾಗೂ ಗ್ರಾಮಗಳ ಸಮಸ್ಯೆಗಳನ್ನು ಅರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವುದರ ಜೊತೆಗೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶಾಶ್ವತ ಪರಿಹಾರ ನೀಡುವ ಮೂಲಕ ಹಂತಹಂತವಾಗಿ ಅಭಿವೃದ್ದಿಗೆ ಆಧ್ಯತೆಯನ್ನು ನೀಡಲಾಗುತ್ತದೆ ಹಾಗೂ ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕಾದುದು ನಮ್ಮೆಲ್ಲರ ಪಾತ್ರ ಅತೀ ಮುಖ್ಯವಾಗಿದೆ ಎಂದು ತಿಳಿಸಿದರು.

Mandya: ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ

ರಾಜ್ಯ ಸಿದ್ದರಾಮಯ್ಯನವರ ಸರ್ಕಾರದ ಜನಪರ ಯೋಜನೆಗಳು ಪ್ರಧಾನಮಂತ್ರಿನರೇಂದ್ರಮೋದಿ ಅವರನ್ನು ನಿದ್ದೆಗೆಡಿಸುವಂತಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ 28 ಕ್ಕೆ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. ಸರ್ಕಾರದ ರೇಷ್ಮೆ ಇಲಾಖೆಯ ವಿವಿಧ ಯೊಜನೆಗಳ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಹಂಡಿತವಳ್ಳಿ ಗ್ರಾಪಂ ಎಲ್ಲ ಗ್ರಾಮಗಳಿಗೂ ಎಲ್ಲ ಅಧಿಕಾರಿಗಳನ್ನು ಜನರ ಬಳಿ ಕೊಂಡ್ಯೋಯ್ದು ಸ್ಥಳದಲ್ಲೇ ತಮ್ಮ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಲಾಯಿತು.

ಕುಮಾರಸ್ವಾಮಿ ಬಿಜೆಪಿ ವಕ್ತಾರರೇ?: ಸಚಿವ ಚಲುವರಾಯಸ್ವಾಮಿ

ತಹಸೀಲ್ದಾರ್‌ ಕುಂಜಿ ಮೊಹಮ್ಮದ್‌, ತಾಪಂ ಇಒ ಸುನೀಲ್‌ಕುಮಾರ್‌, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಮಾದೇಶ್‌, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಿ.ಟಿ. ಸ್ವಾಮಿ, ಕೆಪಿಸಿಸಿ ಸದಸ್ಯ ನಿತಿನ್‌ ವೆಂಕಟೇಶ್‌, ಗ್ರಾಪಂ ಅಧ್ಯಕ್ಷ ಸ್ವಾಮಿಗೌಡ, ಆಹಾರ ನಿರೀಕ್ಷಕ ಸಣ್ಣಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್‌, ಮುಖಂಡರಾದ ನಂದೀಶ್‌, ಹೊಲದಪ್ಪ, ಕುಮಾರ್‌ವಿಜಯ್‌, ಮಂಜುನಾಥ್‌, ಉಪತಹಸೀಲ್ದಾರ್‌ ಕೆ. ಶುಭ, ಪಿಡಿಒ ವಿವೇಕ್‌, ಜಯರಾಮ್‌, ರಮೇಶ್‌, ಕೀರ್ತಿ, ರವಿಕುಮಾರ್‌, ಕೃಷ್ಣ ಇದ್ದರು.

Latest Videos
Follow Us:
Download App:
  • android
  • ios