ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಅವರು ಪಕ್ಷದ ನಾಯಕರ ವಿರುದ್ಧ ಫುಲ್ ಗರಂ ಆಗಿದ್ದಾರೆ.
ಮೈಸೂರು (ಡಿ.14): ಗ್ರಾಪಂ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ. ಚಾಮುಂಡೇಶ್ವರಿ ಕ್ಷೇತ್ರಕ್ಕೂ ಹೋಗುವುದಿಲ್ಲ, ಹುಣಸೂರಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದಲ್ಲಿ ಭಾನುವಾರ ಮಾತನಾಡಿದ ಅವರು, ನಿನ್ನೆಯಷ್ಟೇ ಜೆಡಿಎಸ್ ಪಕ್ಷದಿಂದ ಹುಣಸೂರು ಕ್ಷೇತ್ರದ ಉಸ್ತುವರಿಯನ್ನಾಗಿ ಮಾಡಲಾಗಿತ್ತು. ಈ ವಿಚಾರ ಕೂಡ ಪಕ್ಷದ ಮೂಲಗಳಿಂದ ತಿಳಿದಿಲ್ಲ.
ಗ್ರಾ.ಪಂ ಚುನಾವಣೆಗೆ ಜೆಡಿಎಸ್ ತಂತ್ರ: ಒಂದಾದ ದಳಪತಿಗಳು..! ...
ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಸಭೆಗೂ ಹಾಜರಾಗಲ್ಲ. ಆ ಸಭೆಗೆ ಆಹ್ವಾನ ಸಹ ನೀಡಿಲ್ಲ.
ಗ್ರಾಪಂ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯುವ ಚುನಾವಣೆಯಲ್ಲ. ಈ ಕಾರಣಕ್ಕೋಸ್ಕರ ನಾನು ಗ್ರಾಪಂ ಚುನಾವಣೆಯಲ್ಲಿ ತಟಸ್ಥವಾಗಿರುತ್ತೇನೆ ಎಂದರು.
