ಚಾಮುಂಡಿಬೆಟ್ಟದಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಸ್ಥಾಪಿಸಲು ಜಿ.ಟಿ. ದೇವೇಗೌಡ ಮನವಿ
ಚಾಮುಂಡಿಬೆಟ್ಟದಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಮತ್ತು ಮೈಸೂರು ತಾಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದನ್ನು ವಿಸ್ತರಿಸುವಂತೆ ಶಾಸಕ ಜಿ.ಟಿ. ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಮತ್ತು ಮೈಸೂರು ತಾಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದನ್ನು ವಿಸ್ತರಿಸುವಂತೆ ಶಾಸಕ ಜಿ.ಟಿ. ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಾಮುಂಡಿಬೆಟ್ಟಕ್ಕೆ ಪ್ರತಿ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಆಷಾಢ ಮಾಸ ಹಾಗೂ ನವರಾತ್ರಿ ಸಂದರ್ಭದಲ್ಲಿ ಹೊರ ರಾಜ್ಯ, ದೇಶ, ವಿದೇಶಗಳಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವವರಿದ್ದು, ದಟ್ಟಣೆಯಿಂದ ಸೂಕ್ತ ನಿಯಂತ್ರಣವಿಲ್ಲದೆ ಸುಗಮವಾಗಿ ದೇವಿಯ ದರ್ಶನ ಪಡೆಯಲು ಅನಾನುಕೂಲವಾಗುತ್ತಿದೆ. ಶಕ್ತಿ ಯೋಜನೆ ಮೂಲಕ ಮಹಿಳೆಯರು ಹೆಚ್ಚಿನ ಸಂಖ್ಯೆಯಲಿ ಬರುತ್ತಿದ್ದು, ಶೀಘ್ರದಲ್ಲೇ ದಸರಾ ಮಹೋತ್ಸವವು ಪ್ರಾರಂಭವಾಗುತ್ತಿರುವುದರಿಂದ ಭಕ್ತಾದಿಗಳ ದಟ್ಟಣೆಯನ್ನು ನಿಯಂತ್ರಿಸಲು ಅನುಕೂಲ ಆಗುವಂತೆ ಪೊಲೀಸ್ ಠಾಣೆ ತೆರೆಯುವಂತೆ ಹಾಗೂ ಭಕ್ತಾದಿಗಳ ಆರೋಗ್ಯ ದೃಷ್ಠಿಯಿಂದ ಬೆಟ್ಟದಲ್ಲಿ ಆಸ್ಪತ್ರೆ ಹಾಗೂ ಆಂಬುಲೆನ್ಸ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಕಲ್ಪಿಸುವಂತೆ ಅವರು ಕೋರಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರವು ಮೈಸೂರು ನಗರ ವ್ಯಾಪ್ತಿಗೆ ಹಾಗೂ ಗ್ರಾಮೀಣ ಪ್ರದೇಶವನ್ನು ಹೊಂದಿದ್ದು, ಪೊಲೀಸ್ ಠಾಣೆಗಳ ಸರಹದ್ದನ್ನು ಬದಲಾವಣೆ ಮಾಡುವ ಬಗ್ಗೆ ಹಾಗೂ ಕೆಲವೊಂದು ಠಾಣೆಗಳ ಸರಹದ್ದನ್ನು ವಿಸ್ತರಿಸುವುದು ಅವಶ್ಯಕವಾಗಿದ್ದು, ಠಾಣೆಗಳ ಸರಹದ್ದನ್ನು ವಿಸ್ತರಿಸುವಂತೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.
ನಗರದ ವ್ಯಾಪ್ತಿಯಲ್ಲಿ 17 ಪೊಲೀಸ್ ಠಾಣೆಗಳು ಹಾಗೂ ಮೈಸೂರು ತಾಲೂಕಿನ ವ್ಯಾಪ್ತಿಯಲ್ಲಿ 3 ಪೊಲೀಸ್ ಠಾಣೆಗಳು ಕಾರ್ಯ ನಿರ್ವಹಿಸುತ್ತಿವೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪೊಲೀಸ್ ಠಾಣೆಗಳ ಸರಹದ್ದನ್ನು ವಿಸ್ತರಿಸುವ ಬಗ್ಗೆ ಅಥವಾ ಹೊಸ ಪೊಲೀಸ್ ಠಾಣೆಗಳನ್ನು ತೆರೆಯುವ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅವರು ಕೋರಿದ್ದಾರೆ.
ಖಾಸಗಿ ವಾಹನ ನಿಷೇಧ
ಮೈಸೂರು (ಜೂ.22): ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳ ಖಾಸಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಆಷಾಢ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟದಲ್ಲಿ ಜನಸಂದಣಿ ಹೆಚ್ಚಾಗಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಗರದ ಪೊಲೀಸ್ ಆಯುಕ್ತರಾದ ರಮೇಶ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ಸೂಚನೆ ನೀಡಲಾಗುತ್ತಿದೆ. ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಿದ್ದೇವೆ. ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ, ನಗರದ ಲಲಿತಮಹಲ್ ಹೆಲಿಪ್ಯಾಡ್ ಬಳಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ಚಾಮುಂಡಿ ಬೆಟ್ಟಕ್ಕೆ ಹೋಗಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು
ಪುರುಷರಿಗೂ 5 ದಿನ ಉಚಿತ ಬಸ್ ಪ್ರಯಾಣ: ಮೈಸೂರು ಜಿಲ್ಲಾಡಳಿತದ ಮಹತ್ವದ ಆದೇಶ
ವಿಶೇಷ ದರ್ಶನಕ್ಕೆ ಕೌಂಟರ್: ಲಲಿತಾ ಮಹಲ್ ಪ್ಯಾಡ್‌ನಿಂದ ಚಾಮುಂಡಿ ಬೆಟ್ಟಕ್ಕೆ ಹೋಗಲು ಎಲ್ಲ ಸಾರ್ವಜನಿಕರಿಗೂ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ, ಸರ್ವರ ದರ್ಶನಕ್ಕೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಪ್ಲಾಸ್ಟಿಕ್ ಮುಕ್ತವಾದ ಆಷಾಡಮಾಸ ಆಚರಣೆ ಮಾಡಲು ಸಿದ್ಧತೆ ಮಾಡಲಾಗಿದೆ. ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಿಸಾಡಿದವರಿಗೆ ದಂಡ ಬೀಳಲಿದೆ. ಮೆಟ್ಟಿಲುಗಳು ಮತ್ತು ದೇವಸ್ಥಾನ ಸೇರಿದಂತೆ ಅನೇಕ ಭಾಗಗಳಲ್ಲಿ ಕ್ಯಾಮೆರಗಳ ಅಳವಡಿಕೆ ಮಾಡಲಾಗುತ್ತಿದೆ ಎಂದರು.
ಪ್ರಸಾದ ವಿತರಣೆಗೆ ಫುಡ್ ಸೇಫ್ಟಿ ಸರ್ಟಿಫಿಕೇಟ್ ಕಡ್ಡಾಯ: ಆಷಾಢ ಮಾಸದ ನಿಮಿತ್ಯ ಅನ್ನಪ್ರದಾಸ ನೀಡುವವರ ಸಂಖ್ಯೆಯೂ ಹೆಚ್ಚಾಗಿರುತ್ತದೆ. ಆದ್ದರಿಂದ ಫುಡ್ ಪಾಯಿಸನ್ ಆಗುವ ಸಾಧ್ಯತೆಯಿದೆ. ಹೀಗಾಗಿ, ಪ್ರಸಾದ ಕೌಂಟರ್ ಗಳಲ್ಲಿ ಫುಡ್ ಸೇಫ್ಟಿ ಆಫೀಸರ್ಸ್ ಗಳ ತಂಡ ಇರುತ್ತದೆ. ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ಸ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ರಾಜ್ಯಾದ್ಯಂತ ಜೂ.27ರಂದು ಕೆಂಪೇಗೌಡ ಜಯಂತಿ: ಮೂವರಿಗೆ ಪ್ರಶಸ್ತಿ ಪ್ರದಾನ
ಸರ್ಕಾರಿ ಬಸ್‌ಗಳಲ್ಲಿ ಮಾತ್ರ ಪ್ರಯಾಣ: ಚಾಮುಂಡಿ ಬೆಟ್ಟಕ್ಕೆ ಹೊರಡುವ ಸಾರ್ವಜನಿಕರ ವಾಹನಗಳಿಗೆ ಸಂಪೂರ್ಣ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲರೂ ಸರ್ಕಾರಿ ಬಸ್ ನಲ್ಲಿ ಮಾತ್ರ ಪ್ರಯಾಣ ಮಾಡಬೇಕು. ಚಾಮುಂಡಿ ಬೆಟ್ಟಕ್ಕೆ ಭಕ್ತರು ತೆರಳು ಅನುಕೂಲವಾಗುವಂತೆ ಬೆಳಗ್ಗೆ 5 ರಿಂದ ರಾತ್ರಿ 8 ಗಂಟೆಯವರೆಗ ಮಾತ್ರ ಕೆಎಸ್ ಆರ್ ಟಿಸಿ ಬಸ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.