Asianet Suvarna News Asianet Suvarna News

ಅತಿಥಿ ಶಿಕ್ಷಕನ ದಾಳಿ ಪ್ರಕರಣ: ಸಮಗ್ರ ತನಿಖೆಗೆ ಸಚಿವ ನಾಗೇಶ ಸೂಚನೆ

 ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಾಯಗೊಂಡು ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತಿಥಿ ಶಿಕ್ಷಕಿಯನ್ನು ಮಂಗಳವಾರ ಭೇಟಿಯಾದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್‌ ಅವರು ಆರೋಗ್ಯ ವಿಚಾರಿಸಿದರು.

Guest teacher attack case Minister Nagesh instructs investigation rav
Author
First Published Dec 21, 2022, 10:33 AM IST

ಹುಬ್ಬಳ್ಳಿ (ಡಿ.21) : ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಾಯಗೊಂಡು ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತಿಥಿ ಶಿಕ್ಷಕಿಯನ್ನು ಮಂಗಳವಾರ ಭೇಟಿಯಾದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್‌ ಅವರು ಆರೋಗ್ಯ ವಿಚಾರಿಸಿದರು.

ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳು ಶಿಕ್ಷಕಿ ಗೀತಾ ಬಾರಕೇರ ಆರೋಗ್ಯ ವಿಚಾರಿಸಿದರು. ಶಿಕ್ಷಕಿಯ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಬಳಿಕ ಕುಟುಂಬದವರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.

ಅತಿಥಿ ಶಿಕ್ಷಕನ ಅಮಾನವೀಯ ದಾಳಿ, ಕಿಮ್ಸ್‌ನಲ್ಲಿರುವ ಗಾಯಾಳು ಅತಿಥಿ ಶಿಕ್ಷಕಿಯ ಆರೋಗ್ಯ ವಿಚಾರಿಸಿದ ಶಿಕ್ಷಣ ಸಚಿವ

ನಂತರ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ಅವರು, ಶಾಲೆಯಲ್ಲಿ ನಡೆದಿರುವ ಈ ಘಟನೆ ಅತ್ಯಂತ ದುರದೃಷ್ಟಕರ. ಶಾಲೆಯ ಆವರಣದಲ್ಲಿ ಇಂತಹ ಘಟನೆಗಳನ್ನು ಊಹಿಸಲು ಅಸಾಧ್ಯ. ಘಟನೆಯಿಂದ ಆತಂಕಗೊಂಡಿರುವ ಶಾಲೆಯ ಮಕ್ಕಳು ಮತ್ತು ಶಿಕ್ಷಕರಿಗೆ ಕೌನ್ಸೆಲಿಂಗ್‌ ಮಾಡಿ ಧೈರ್ಯ ತುಂಬಲಾಗುತ್ತದೆ. ಘಟನೆಗೆ ಕಾರಣ ಏನು ಎಂಬುದು ಆರೋಪಿಯ ಬಂಧನದ ಬಳಿಕ ತಿಳಿದು ಬರಲಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಹದಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಆರೋಪಿ ಮುತ್ತಪ್ಪ ಹಡಗಲಿ, ಶಾಲೆಯ 4ನೇ ತರಗತಿ ವಿದ್ಯಾರ್ಥಿ ಭರತ್‌ ಮೇಲೆ ಸೋಮವಾರ ಬೆಳಗ್ಗೆ ಹಲ್ಲೆ ನಡೆಸಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದ. ಬಳಿಕ ಶಿಕ್ಷಕಿ ಗೀತಾ ಯಲ್ಲಪ್ಪ ಅವರ ಮೇಲೂ ಸಲಾಕೆಯಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಭರತ್‌ ಮೃತಪಟ್ಟಿದ್ದಾನೆ. ಶಿಕ್ಷಕಿ ಗೀತಾ ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಪರಾರಿಯಾಗಿರುವ ಆರೋಪಿ ಶಿಕ್ಷಕನ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.  Bengaluru Crime: ಸುಂದರ ಕುಟುಂಬಕ್ಕೆ ಬಡತನದ ಶಾಪ: ಮಗಳಿಗೆ ವಿಷವುಣಿಸಿ ಆತ್ಮಹತ್ಯೆಗೆ

Follow Us:
Download App:
  • android
  • ios