ಸಂಯಮ ಪ್ರಶಸ್ತಿಗೆ ಗುರುಬಸವ ಶ್ರೀ, ಬಸವರಾಜ ಆಯ್ಕೆ, ಜ.18 ರಂದು ಪ್ರಶಸ್ತಿ ಪ್ರಧಾನ ಸಮಾರಂಭ

ಕೋವಿಡ್ ಹಿನ್ನೆಲೆಯಲ್ಲಿ 2021 ಮತ್ತು 2022ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ನೀಡಲು ಸಾಧ್ಯವಾಗಲಿಲ್ಲ. ಈ ವರ್ಷ ಎರಡು ಸಾಲಿನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2021ನೇ ಸಾಲಿನ ಪ್ರಶಸ್ತಿಗೆ ಬೀದರ ಜಿಲ್ಲೆಯ ಭಾಲ್ಕಿಯ ಹಿರೇಮಠದ ಗುರುಬಸವ ಪಟ್ಟದೇವರ ಶ್ರೀ ಮತ್ತು 2022ನೇ ಸಾಲಿನ ಪ್ರಶಸ್ತಿಗೆ ಮೈಸೂರಿನ ಬಸವ ಮಾರ್ಗದ ಮುಖ್ಯಸ್ಥ ಬಸವರಾಜು ಅವರು ಆಯ್ಕೆಯಾಗಿದ್ದಾರೆ.

Guru Basava Shri and  Basavaraja get Samyama Award gow

ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣನ್ಯೂಸ್, 

ಬಾಗಲಕೋಟೆ (ಜ.16): ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ 2021 ಮತ್ತು 2022ನೇ ಸಾಲಿನ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 18 ರಂದು ಇಲಕಲ್ಲಿನ ವಿಜಯ ಮಹಾಂತೇಶ ಶಿವಯೋಗಿಗಳ ಶಿವಾನುಭವ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಂಯಮ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ತುಬಾಕಿ ತಿಳಿಸಿದರು. ಬಾಗಲಕೋಟೆಯ ನವನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೋವಿಡ್ ಹಿನ್ನೆಲೆಯಲ್ಲಿ 2021 ಮತ್ತು 2022ನೇ ಸಾಲಿನ ಸಂಯಮ ಪ್ರಶಸ್ತಿಯನ್ನು ನೀಡಲು ಸಾಧ್ಯವಾಗಲಿಲ್ಲ. ಈ ವರ್ಷ ಎರಡು ಸಾಲಿನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2021ನೇ ಸಾಲಿನ ಪ್ರಶಸ್ತಿಗೆ ಬೀದರ ಜಿಲ್ಲೆಯ ಭಾಲ್ಕಿಯ ಹಿರೇಮಠದ ಗುರುಬಸವ ಪಟ್ಟದೇವರ ಶ್ರೀ ಮತ್ತು 2022ನೇ ಸಾಲಿನ ಪ್ರಶಸ್ತಿಗೆ ಮೈಸೂರಿನ ಬಸವ ಮಾರ್ಗದ ಮುಖ್ಯಸ್ಥ ಬಸವರಾಜು ಅವರು ಆಯ್ಕೆಯಾಗಿದ್ದು, ಪಶಸ್ತಿ ತಲಾ 1 ಲಕ್ಷ ರೂ. ನಗದು ಒಳಗೊಂಡಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ ಎಂದರು. 

ಜಸ್ಟ್ ಒನ್ ಪೆಗ್ ಕುಡಿದ್ರೆ ಏನಾಗಲ್ಲ ಅನ್ಬೇಡಿ, ಕಡಿಮೆ ಅಲ್ಕೋಹಾಲ್ ಸೇವನೆಯೂ ಕ್ಯಾನ್ಸರ್‌ಗೆ ಕಾರಣವಾಗುತ್ತೆ !

ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎಸ್.ಶಂಕರಪ್ಪ ಮಾತನಾಡಿ 1984ರಲ್ಲಿ ಆರಂಭಗೊಂಡ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ಮದ್ಯಪಾನ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಈ ದುಶ್ಚಟಗಳನ್ನು ರಾಜ್ಯದಿಂದ ನಿರ್ಮೂಲನ ಮಾಡುವ ದೇಯೋದ್ದೇಶದೊಂದಿಗೆ ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣ, ಬೀದಿ ನಾಟಕ, ಹೆದ್ದಾರಿ ಫಲಕ ಒಳವಡಿಸಲಾಗುತ್ತಿದೆ. ಸಂಯಮ ಪ್ರಶಸ್ತಿಯನ್ನು 2010-11ನೇ ಸಾಲಿನಿಂದ ನೀಡುತ್ತಾ ಬಂದಿರುವುದಾಗಿ ತಿಳಿಸಿದರು.

Haveri: ಮದ್ಯ ಮುಕ್ತ ಗ್ರಾಮಕ್ಕಾಗಿ ಪ್ರತಿಭಟನೆ, ಎಣ್ಣೆ ಹೊಡೆಯಲು ಬಂದ ತಾತನ ಬಾಟಲ್ ನೆಲಕ್ಕೆಸೆದು ಮಹಿಳೆಯರ ಆಕ್ರೋಶ

ಗದಗ ಜಿಲ್ಲೆ ಡೊಂಬಳದ ತೋಂಟದಾರ್ಯ ಸಂಸ್ಥಾನ ಮಠದ ಸಿದ್ದರಾಮ ಶ್ರೀ, ಬಾಗಲಕೋಟೆ ನಿಡಸೋಶಿಯ ಸಿದ್ದ ಸಂಸ್ಥಾನ ಮಠದ ಶಿವಲಿಂಗೇಶ್ವರ ಶ್ರೀ, ಬೀದರ ಜಿಲ್ಲೆ ಭಾಲ್ಕಿಯ ಬಸವಲಿಂಗ ಪಟ್ಟದೇವರು ಮತ್ತು ಇಳಕಲ್ ಗುರು ಮಹಾಂತ ಶ್ರೀಗಳ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ದೊಡ್ಡನಗೌಡ ಪಾಟೀಲ ವಹಿಸಲಿದ್ದಾರೆ ಎಂದರು.ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ನಿಗಮದ ಮಾಜಿ ನಿರ್ದೇಶಕ ಜಿ.ಎಸ್.ಗೌಡರ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios