Mandya : ನಾನು ಕಾಂಗ್ರೆಸ್‌ ಸೇರ್ಪಡೆಗೊಂಡಿಲ್ಲವೆಂದ ಹಿರಿಯ ಮುಖಂಡ

ನಾನು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ ತಂದೆ ಡಿ.ಹಲಗೇಗೌಡರು ಹಾಗೂ ಇಡೀ ನಮ್ಮ ಕುಟುಂಬವೇ ಕಾಂಗ್ರೆಸ್‌ ಆಗಿರುವ ಕಾರಣ ಭಾರತ್‌ ಜೋಡೋ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಭಿಮಾನದಿಂದ ನಮಗೆ ಹಾರ ಹಾಕಿದ್ದಾರೆ ಅಷ್ಟೇ ಎಂದು ಜಿಪಂ ಮಾಜಿ ಸದಸ್ಯ ಎಚ್‌.ಮಂಜುನಾಥ್‌ ಸ್ಪಷ್ಟಪಡಿಸಿದರು.

H Manjunath said that I have not joined the Congress snr

 ಪಾಂಡವಪುರ (ಆ.11):  ನಾನು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡಿಲ್ಲ. ಎರಡು ಬಾರಿ ಶಾಸಕರಾಗಿದ್ದ ತಂದೆ ಡಿ.ಹಲಗೇಗೌಡರು ಹಾಗೂ ಇಡೀ ನಮ್ಮ ಕುಟುಂಬವೇ ಕಾಂಗ್ರೆಸ್‌ ಆಗಿರುವ ಕಾರಣ ಭಾರತ್‌ ಜೋಡೋ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಭಿಮಾನದಿಂದ ನಮಗೆ ಹಾರ ಹಾಕಿದ್ದಾರೆ ಅಷ್ಟೇ ಎಂದು ಜಿಪಂ ಮಾಜಿ ಸದಸ್ಯ ಎಚ್‌.ಮಂಜುನಾಥ್‌ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ನಾನು ಸಕ್ರಿಯ ರಾಜಕಾರಣದಿಂದ (Politics)  ದೂರವಿದ್ದೆ. ಈ ಹಿಂದೆ ನಾನು ಬಿಜೆಪಿ(BJP) ಪಕ್ಷ ಸೇರಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಮನೆಗೆ ಭೇಟಿ ನೀಡಿ 2018ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನೀಡುವ ಭರವಸೆ ನೀಡಿದ್ದರು. ಆದರೆ, ನಾನು ಬಿಜೆಪಿಗೆ ಸೇರಿರಲಿಲ್ಲ ಎಂದರು.

ಭಾರತ್‌ ಜೋಡೋ ಯಾತ್ರೆ (Bharat Jodo Yatra ) ಪ್ರಯುಕ್ತ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಜಕ್ಕನಹಳ್ಳಿಗೆ ಬರುವ ಹಿನ್ನೆಲೆ ಡಿ.ಕೆ.ಶಿವಕುಮಾರ್‌ ಸಿದ್ಧತೆ ಪರಿಶೀಲಿಸಲು ಆಗಮಿಸಿದ್ದರು. ಜತೆಗೆ ಅದು ಪಕ್ಷಾತೀತ ಕಾರ್ಯಕ್ರಮವಾಗಿದ್ದರಿಂದ ಅಲ್ಲಿಗೆ ಭೇಟಿ ಮಾಡಿದ್ದ ನನಗೆ ಅಭಿಮಾನದಿಂದ ಹಾರ ಹಾಕಿದರು.

ಮೇಲುಕೋಟೆ ಕ್ಷೇತ್ರ ಕಾಂಗ್ರೆಸ್‌ನಲ್ಲಿ ಗೊಂದಲಮಯ ವಾತಾವರಣ ಇದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜತೆಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದರು. ಪಕ್ಷೇತರ ಅಭ್ಯರ್ಥಿಗೆ ಮತ ಚಲಾಯಿಸಲಾಯಿತು. ಅಲ್ಲದೇ, ಮೇಲುಕೋಟೆ ವಿಧಾನಸಭಾ ಕ್ಷೇತ್ರ ಚುನಾವಣೆಗಳಲ್ಲಿಯೂ ರೈತಸಂಘದ ಕೆ.ಎಸ್‌.ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಮತ ಚಲಾಯಿಸುವ ಮೂಲಕ ಪಕ್ಷದಲ್ಲಿ ಗೊಂದಲ ಉಂಟಾಗಿತ್ತು. ಹೀಗಾಗಿ ಮುಂಬರುವ ದಿನಗಳಲ್ಲಿ ಬೆಂಬಲಿಗರು ಹಾಗೂ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿ ಕಾಂಗ್ರೆಸ್‌ ಸೇರುವ ಬಗ್ಗೆ ಚಿಂತಿಸುವೆ ಎಂದರು.

ನನ್ನ ಸಹೋದರ ಕಾಂಗ್ರೆಸ್ನಲ್ಲಿದ್ದಾರೆ. ಜತೆಗೆ ನಮ್ಮ ತಂದೆ, ಮಾಜಿ ಶಾಸಕ ಡಿ.ಹಲಗೇಗೌಡರ ಕುಟುಂಬ ಕಾಂಗ್ರೆಸ್‌ ಆಗಿದೆ. ಹೀಗಾಗಿ ಕಾಂಗ್ರೆಸ್‌ ಜೋಡೋ ಯಾತ್ರೆ ಪ್ಲೆಕ್‌ಗಳಲ್ಲಿ ನನ್ನ ಫೋಟೋ ಅಳವಡಿಸಲಾಗಿದೆ. ಇದರಲ್ಲಿ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕಾಳೇನಹಳ್ಳಿ ಪುಟ್ಟಸ್ವಾಮಿಗೌಡ, ಶಿವರಾಜು, ಎಸ….ಕೆ.ಪ್ರಕಾಶ್‌, ಶಿವಣ್ಣ ಇತರರಿದ್ದರು.

ನನ್ನನ್ನು ಕಂಡರೆ ಭಯ  :  

ಭಾರತ್‌ ಜೋಡೋ ಪಾದಯಾತ್ರೆಯಿಂದ ಬಿಜೆಪಿಗರಲ್ಲಿ ನಡುಕ ಶುರುವಾಗಿದ್ದು, ದೇಶದಲ್ಲಿ ರಾಹುಲ್‌ ಗಾಂಧಿ, ರಾಜ್ಯದಲ್ಲಿ ನಾನು ಎಂದರೆ ಅವರಿಗೆ ಭಯವಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಸ್ಥಳೀಯ ಯರಮರಸ್‌ ಸಕ್ರ್ಯುಟ್‌ ಹೌಸ್‌ನಲ್ಲಿ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಿಂದ ಭೀತಿಗೊಂಡಿರುವ ಬಿಜೆಪಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದ ಮೇಲೆ ದ್ವೇಷದ ರಾಜಕಾರಣ ಹೆಚ್ಚಾಗಿದೆ. 

ಜನರ ಮನಸ್ಸಿನಲ್ಲಿ ದ್ವೇಷವನ್ನು ಬಿತ್ತಿ ರಾಜಕೀಯ ಮಾಡುತ್ತಿರುವ ಬಿಜೆಪಿ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಸಾಕಷ್ಟುಸಮಸ್ಯೆಗಳಿದ್ದು ಅವುಗಳಿಗೆ ಪರಿಹಾರ ನೀಡದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಅವುಗಳನ್ನು ಮುಚ್ಚಿ ಹಾಕಿಕೊಳ್ಳುವುದಕ್ಕಾಗಿ ಹಿಂದುತ್ವ ವಾದವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದರಿಂದ ರೈತರು, ಬಡವರು, ಅಲ್ಪಸಂಖ್ಯಾತರು, ಜನಸಾಮಾನ್ಯರು ಭಯದಲ್ಲಿ ಜೀವನ ಸಾಗಿಸುವ ವಾತಾವರಣ ಸೃಷ್ಟಿಸಲಾಗಿದೆ. ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಇದರಿಂದ ಜನರ ಮನಸ್ಸುಗಳು ಒಡೆದುಹೋಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. 

ನಾನು ಸಿದ್ದು ಒಂದಾಗಿದ್ದೇವೆ, ಬಿಜೆಪಿ ಆಟ 6 ತಿಂಗಳಷ್ಟೇ: ಡಿಕೆಶಿ

ಮೀಸಲಾತಿ ಹೆಚ್ಚಳಕ್ಕಾಗಿ ಕಾಂಗ್ರೆಸ್‌ ನಾಗಮೋಹನ್‌ದಾಸ್‌ ಸಮಿತಿ ರಚಿಸಿದ್ದು ಇಷ್ಟು ದಿನಗಳ ನಂತರ ಬಿಜೆಪಿ ಅನುಷ್ಠಾನಕ್ಕೆ ತಂದಿದೆ. ಕಾಂಗ್ರೆಸ್‌ ಪಕ್ಷವೇ ಮೀಸಲಾತಿ ಹೆಚ್ಚಳಕ್ಕೆ ಒತ್ತಡಹಾಕಿತ್ತು. ಮೀಸಲಾತಿ ವಿಷಯದಲ್ಲಿ ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿಕೆ ನೀಡುತ್ತಿದ್ದ ಸಚಿವ ಬಿ.ಶ್ರೀರಾಮುಲು ಒಂದು ದಿನವೂ ಅಧಿವೇಶದಲ್ಲಿ ಮಾತನಾಡಲಿಲ್ಲ ಎಂದು ದೂರಿದರು. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ವಿಷಯವಾಗಿ ಕೆಲ ಸಮುದಾಯಗಳ ವಿರೋಧವಿದ್ದು, ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು. 

ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ಪತ್ರಬರೆದು ವರ್ಷಗಳು ಕಳೆದರೂ ಇದುವರೆಗೆ ತನಿಖೆ ನಡೆಯುತ್ತಿಲ್ಲ. ನಾ ಕಾವುಂಗಾ ಕಾನೆದೂಂಗಾ ಅನ್ನೋ ಮೋದಿಯವರು ತನಿಖೆ ನಡೆಸಲು ಕ್ರಮ ತೆಗೆದುಕೊಳ್ಳಬಹುದಾಗಿತ್ತು ಎಂದು ವ್ಯಂಗ್ಯವಾಗಿ ಟೀಕಿಸಿದರು. ಶೇ.40ರಷ್ಟುಕಮಿಷನ್‌ ಕೊಡಬೇಕು ಅಂತ ಈ ಮೊದಲು ಕೇಳಿರಲಿಲ್ಲ. ನಾನು ಕೇಳಿದ್ದರೆ ಸಿಬಿಐಗೆ ರೆಫರ್‌ ಮಾಡಿಬಿಡುತ್ತಿದ್ದೆ. ಬಿಜೆಪಿಯವರು ಸಿಬಿಐಯನ್ನ ಚೋರ್‌ ಬಚಾವ್‌ ಸಂಸ್ಥೆಯಾಗಿದೆ. ಸಿಬಿಐ ಬಿಜೆಪಿ ಸರ್ಕಾರದ ಕೈಯಲ್ಲಿದೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. 

Latest Videos
Follow Us:
Download App:
  • android
  • ios