ಕಳ್ಳಭಟ್ಟಿ ಕುಡಿಯೋರಿಗೆ ಸಚಿವ ನಾಗೇಶ್ ಸಲಹೆ..!
ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಿರುವ ಕಾರಣ ಕಳ್ಳಬಟ್ಟಿಸಾರಾಯಿ ತಯಾರಿಕೆ ನಡೆಯುತ್ತಿದೆ ಮದ್ಯವ್ಯಸನಿಗಳು ಇದನ್ನು ಸೇವಿಸಿ ಪ್ರಾಣ ಕಳೆದುಕೊಳ್ಳಬಾರದು ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸಲಹೆ ನೀಡಿದ್ದಾರೆ.
ಕೋಲಾರ(ಏ.25): ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಿರುವ ಕಾರಣ ಕಳ್ಳಬಟ್ಟಿಸಾರಾಯಿ ತಯಾರಿಕೆ ನಡೆಯುತ್ತಿದೆ ಮದ್ಯವ್ಯಸನಿಗಳು ಇದನ್ನು ಸೇವಿಸಿ ಪ್ರಾಣ ಕಳೆದುಕೊಳ್ಳಬಾರದು ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸಲಹೆ ನೀಡಿದರು.
ದಾಸ್ತಾನು ಲೆಕ್ಕ ಸ್ಪಷ್ಟವಾಗಿರಬೇಕು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳಬಟ್ಟಿತಯಾರಿಯನ್ನು ತಡೆಯಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಕಾರ್ಯಾಚರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ದೂರು ದಾಖಲು ಮಾಡಲಾಗುತ್ತಿದೆ.
ಕೋವಿಡ್-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್ ಆರಂಭ
ಲಾಕ್‌ಡೌನ್ ಆರಂಭದ ದಿನದಿಂದ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದ್ದು, ದಸ್ತಾನು ಪುಸ್ತಕ ಪರಿಶೀಲನೆ ನಡೆಸಿದಾಗ ವ್ಯಾತ್ಯಾಸ ಕಂಡುಬಂದರೆ ಬಾರ್ ಲೈಸನ್ಸ್ ರದ್ದುಪಡಿಸುವುದರ ಜತೆಗೆ ಮಾಲೀಕನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.
20 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ
ರಾಮನಗರ ಕಾರಾಗೃಹದಿಂದ ಕೈದಿಗಳನ್ನು ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕಾರಗೃಹಕ್ಕೆ ವರ್ಗಾವಣೆ ಮಾಡುತ್ತಿರುವ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಮುನಿಸ್ವಾಮಿ, ಇಂತಹ ಸಂದರ್ಭದಲ್ಲಿ ಯಾರು ಏನು ಮಾತನಾಡಿದರೂ ತಲೆಕೆಡಿಸಿಕೊಳ್ಳಬಾರದು ಎಂದು ತಿರುಗೇಟು ನೀಡಿದರು.