ಬಿಜೆಪಿ ಕಾರ್ಯಕರ್ತ ಹಾಗೂ ಪತ್ನಿ ಆತ್ಮಹತ್ಯೆ ಹಿಂದೆ ಸಾಗರ ಶಾಸಕರ ಕೈವಾಡ : ಗೋಪಾಲಕೃಷ್ಣ
ಸಾಗರದಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಆತನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದು, ಇದರ ಹಿಂದೆ ಸಾಗರ ಕ್ಷೇತ್ರದ ಶಾಸಕರ ಕೈವಾಡ ಇದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಕೃಷ್ಣ ಆರೋಪಿಸಿದ್ದಾರೆ
ಬೆಂಗಳೂರು [ಮಾ.18]: ಸಾಗರದಲ್ಲಿ ಹರೀಶ್ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಹಿಂದೆ ಸಾಗರ ಕ್ಷೇತ್ರದ ಶಾಸಕರ ಕೈವಾಡ ಇದೆ ಎಂದು ಹೇಳಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಕೃಷ್ಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಹರಿಶ್ ಬಿಜೆಪಿ ಕಾರ್ಯಕರ್ತರಾಗಿದ್ದರು. ಹರೀಶ್ ಪತ್ನಿ ಬಿಜೆಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೂಲ ಕಾರಣ ಸಾಗರ ಶಾಸಕರ ಪಿಎ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ದೂರನ್ನು ದಾಖಲಿಸಿಲ್ಲ. ಠಾಣೆ ಮುಂದೆ ಹೋರಾಟ ಆದ ಮೇಲೆ ದೂರು ತೆಗೆದುಕೊಂಡಿದ್ದಾರೆ ಎಂದಿದ್ದಾರೆ.
ಈ ಪ್ರಕರಣದಲ್ಲಿ ಸಾಗರ ಶಾಸಕ ಹಾಲಪ್ಪ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಗುರುವಿಗೆ ತಕ್ಕ ಶಿಷ್ಯ ಹಾಲಪ್ಪ ಪಿಎ ನಾಗರಾಜ್. ಬಿಜೆಪಿ ಕಾರ್ಯರ್ತನ್ನ ಬಿಜೆಪಿಯವರೇ ಸಾಯಿಸಿದ್ದಾರೆ ಎಂದು ಗೋಪಾಲಕೃಷ್ಣ ಆರೋಪಿಸಿದರು.
ಶೀಘ್ರ ರಾಜಕೀಯದಲ್ಲೊಂದು ಮಹತ್ವದ ಬದಲಾವಣೆ : ಬೇಳೂರು ಕೊಟ್ಟರು ಸುಳಿವು...
ಇನ್ನು ಮುಸ್ಲಿಮರು ಹಲ್ಲೆ ಮಾಡಿದ್ದರೆ ಬಿಜೆಪಿಯವರು ಅದನ್ನೇ ದೊಡ್ಡದು ಮಾಡುತ್ತಾರೆ. ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರದಿಂದ ಪ್ರಯತ್ನ ನಡೆಯುತ್ತಿದ್ದು, ಅಲ್ಲಿನ ಸಂಸದ ರಾಘವೇಂದ್ರ ಶಾಸಕರಿಗೆ ಸಾಥ್ ನೀಡಿದ್ದಾರೆ ಎಂದರು.
ಪರೇಸ್ ಮೇಸ್ತಾ ಪ್ರಕರಣದಲ್ಲಿ ಶೋಭಾ ಕರಂದ್ಲಾಜೆ ಬೀದಿಗೆ ಇಳಿದು ಹೋರಾಟ ಮಾಡಿದ್ದರು. ಸದನದಲ್ಲಿ ಈ ಪ್ರಕರಣವನ್ನು ಕಾಂಗ್ರೆಸ್ ಪ್ರಸ್ತಾಪಿಸಲಿದೆ. ನಮ್ಮ ನಾಯಕ ಸಿದ್ದರಾಮಯ್ಯಗೆ ಈ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಪ್ರಕರಣವನ್ನ ಸಿಬಿಐಗೆ ನೀಡದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದರು.