ಗಿಡಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಅತ್ಯಮೂಲ್ಯ ವಿಗ್ರಹಗಳು ಸುಟ್ಟು ಮಸಿ ಹಿಡಿದು ಮೂಲರೂಪ ಕಳೆದುಕೊಂಡಿರುವ ಪ್ರಕರಣ  ಹಳೇಬೀಡಿನ ಹೊಯ್ಸಳೇಶ್ವರ ದೇಗುಲದ ಬಳಿ ನಡೆದಿದೆ. 

 ಬೇಲೂರು (ಫೆ.15):  ಸ್ಮಾರಕದ ಸುತ್ತ ಬೆಳೆದಿದ್ದ ಅನುಪಯುಕ್ತ ಕಳೆ ತೆಗೆದು ಸ್ವಚ್ಛಗೊಳಿಸುವ ಕೆಲಸವನ್ನು ಸುಲಭ ಮಾಡಿಕೊಳ್ಳುವ ಸಲುವಾಗಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಅತ್ಯಮೂಲ್ಯ ವಿಗ್ರಹಗಳು ಸುಟ್ಟು ಮಸಿ ಹಿಡಿದು ಮೂಲರೂಪ ಕಳೆದುಕೊಂಡಿರುವ ಪ್ರಕರಣ ಹಳೇಬೀಡಿನ ಹೊಯ್ಸಳೇಶ್ವರ ದೇಗುಲದ ಆವರಣದಲ್ಲಿ ಜರುಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತೀಯ ಪುರಾತತ್ವ ವಿಭಾಗದಿಂದ ನಿಯೋಜಿರಾಗಿದ್ದ ಕಾರ್ಮಿಕರು ಈ ಅಚಾತುರ್ಯ ಎಸಗಿದ್ದು ಸಿಬ್ಬಂದಿ ಹಾಗೂ ಅ​ಕಾರಿಗಳು ಸೂಚನೆ ನೀಡಿದ ಬಳಿಕವೆ ಬೆಂಕಿ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಬಿಸಿಲಿಗೆ ಒಣಗಿದ್ದ ಗಿಡ-ಬಳ್ಳಿಗಳು ಧಗಧಗನೆ ಹೊತ್ತಿಕೊಂಡು ಉರಿದಿದ್ದು ಕೆರೆ ದಂಡೆಯಲ್ಲಿದ್ದ ಹುಚ್ಚೇಶ್ವರ(ಬ್ರಹ್ಮೇಶ್ವರ) ಸ್ಮಾರಕದ ಬಹುಭಾಗ ಬೆಂಕಿಯ ಜ್ವಾಲೆಗೆ ಸಿಲುಕಿ ಕರಕಲಾಗಿದೆ.

50 ಕ್ಕೂ ಹೆಚ್ಚು ಬೌನ್ಸ್‌ ಸ್ಕೂಟರ್ ಬೆಂಕಿಗಾಹುತಿ .

ಘಟನೆಯ ತರುವಾಯ ಸಿಬ್ಬಂದಿ ಹಾಗೂ ಕಾರ್ಮಿಕರು ನೀರು ಹಾಕಿ ಬೆಂಕಿಯನ್ನು ಆರಿಸಿದರೂ ವಿಗ್ರಹಗಳಿಗೆ ಆಗಿರುವ ಹಾನಿಯನ್ನು ಸರಿಪಡಿಸಲು ಆಗಿಲ್ಲ. ಭಾನುವಾರ ಸ್ಥಳಕ್ಕೆ ಭೇಟಿ ನೀಡಲು ತೆರಳಿದ್ದ ಮಾಧ್ಯಮದವರಿಗೆ ಪ್ರವೇಶ ನಿರಾಕರಿಸಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.

ಜೈನ ಬಸದಿ ಹಿಂಭಾಗದಲ್ಲಿ ಪುರಾತತ್ವ ವಿಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು ಉನ್ನತ ಮಟ್ಟದ ಅ​ಧಿಕಾರಿಗಳು ಪಾಲ್ಗೊಂಡಿದ್ದಾರೆ. ಹೀಗಿದ್ದರೂ ಅಚಾತುರ್ಯ ನಡೆಯಲು ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಹವ್ಯಾಸಿ ಸಂಶೋಧಕ ಎಚ್‌.ಜಿ. ಶಶಿಧರ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಸದ್ಯ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂ​ಸಿದ್ದು ಭಾನುವಾರ ಮಧ್ಯಾಹ್ನ ಅ​ಕಾರಿಗಳು ಆಗಮಿಸುವ ನಿರೀಕ್ಷೆಯಿದೆ. ಇತ್ತೀಚೆಗೆ ಜಿಲ್ಲೆಯ ದೊಡ್ಡಗದ್ದವಳ್ಳಿ ದೇಗುಲದ ಕಾಳಿಯ ವಿಗ್ರಹಕ್ಕೆ ಹಾನಿಯಾಗಿದ್ದನ್ನು ಸ್ಮರಿಸಬಹುದಾಗಿದ್ದು, ಸ್ಮಾರಕಗಳನ್ನು ಕಾಪಾಡಬೇಕಾದ ಇಲಾಖೆಯೆ ಹೊಣೆಗೇಡಿತನ ತೋರುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಲ್ಮಟ್ಟದ ಅಧಿ​ಕಾರಿಗಳ ಗಮನಕ್ಕೆ ತಾರದೆ ಎಸಗಿರುವ ಕೃತ್ಯಕ್ಕೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲು ಚಿಂತಿಸಲಾಗುತ್ತಿದೆ ಎಂದು ಹೆಸರು ಹೇಳಲಿಚ್ಚಿಸದ ಅಧಿ​ಕಾರಿ ಹೇಳಿದ್ದಾರೆ.