5 ಕೊರೋನಾ ಕೇಸ್ ಬಂದಾಗ್ಲೇ ಎಚ್ಚೆತ್ತ ಜನ: ಗ್ರಾಮ ಸಂಪೂರ್ಣ ಲಾಕ್‌ಡೌನ್ ಮಾಡಿದ ಗ್ರಾಮಸ್ಥರು
ಹರೇಕಳ ಗ್ರಾಮದಲ್ಲಿ ಐದು ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಪಂಚಾಯಿತಿ ಕಠಿಣ ಕ್ರಮ ಕೈಗೊಂಡಿದ್ದು ಸೋಮವಾರದಿಂದ ಹತ್ತು ದಿನ ಗ್ರಾಮವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲು ಗ್ರಾಮಸ್ಥರು ತೀರ್ಮಾನ ಕೈಗೊಂಡಿದ್ದಾರೆ.
ಉಳ್ಳಾಲ(ಜು.04): ಹರೇಕಳ ಗ್ರಾಮದಲ್ಲಿ ಐದು ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಪಂಚಾಯಿತಿ ಕಠಿಣ ಕ್ರಮ ಕೈಗೊಂಡಿದ್ದು ಸೋಮವಾರದಿಂದ ಹತ್ತು ದಿನ ಗ್ರಾಮವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲು ಗ್ರಾಮಸ್ಥರು ತೀರ್ಮಾನ ಕೈಗೊಂಡಿದ್ದಾರೆ.
ಈ ಬಗ್ಗೆ ಶುಕ್ರವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖಂಡ ಕೆ.ರವೀಂದ್ರ ಶೆಟ್ಟಿಉಳಿದೊಟ್ಟು ಮಾತನಾಡಿ, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಲಮಾರ್ಗದ ಜೊತೆ ಬಸ್ಸುಗಳ ಸಂಚಾರವನ್ನೂ ಸಂಪೂರ್ಣ ಬಂದ್ ಮಾಡಲಾಗಿದೆ, ಹೊರಗಿನ ಖಾಸಗಿ ವಾಹನ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು ಅತ್ಯಗತ್ಯ ಕೆಲಸ, ಕಾರ್ಯಗಳಿಗೆ ಹೊರಗೆ ಹೋಗುವವರು ಸೂಕ್ತ ತಪಾಸಣೆ ನಡೆಸಿ, ಕೆಲಸಕ್ಕೆ ಹೋಗುವ ಬಗ್ಗೆ ಕಾರಣ ನೀಡಬೇಕು ಎಂದು ತಿಳಿಸಿದರು.
ಗಡಿಯಲ್ಲಿ ದಾರಿ ತಪ್ಪಿದ ವಿದ್ಯಾರ್ಥಿ: ಶಿಕ್ಷಕರ ಸಾಹಸದಿಂದ ಕೊನೆಗೂ ಎಕ್ಸಾಂ ಬರೆದ..!
ಪಂಚಾಯಿತಿ ಅಧ್ಯಕ್ಷೆ ಅನಿತಾ ಡಿಸೋಜ ಮಾತನಾಡಿ, ಗ್ರಾಮದಲ್ಲಿರುವ ಎಲ್ಲ ಅಂಗಡಿಗಳು 12 ಗಂಟೆಗೆ ಬಂದ್ ಮಾಡಲಾಗುತ್ತಿದ್ದು, ಹೊಟೇಲುಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದರು.
ತಾ.ಪಂ. ಮಾಜಿ ಸದಸ್ಯ ಮುಸ್ತಫಾ ಮಲಾರ್, ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು ಮಾತನಾಡಿ, ಉಪಾಧ್ಯಕ್ಷ ಮಹಾಬಲ ಹೆಗ್ಡೆ ದೆಬ್ಬೇಲಿಗುತ್ತು ಹಾಗೂ ಸದಸ್ಯರು, ವಿವಿಧ ಪಕ್ಷ, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.