Asianet Suvarna News Asianet Suvarna News

ಕೊರೋನಾ ಕಾಟ: ಈ ಬಾರಿ ಆನ್‌ಲೈನ್‌ನಲ್ಲಿ ಮಾತ್ರ ಹಾಸನಾಂಬೆ ದರ್ಶನ ಭಾಗ್ಯ

ನವೆಂಬರ್‌ 5 ರಿಂದ ನವೆಂಬರ್‌ 17 ರವರೆಗೆ ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ| ಆನ್‌ಲೈನ್‌ ಮೂಲಕ ದೇವಿ ದರ್ಶನಕ್ಕೆ ಅವಕಾಶ: ಜಿಲ್ಲಾಧಿಕಾರಿ ಆರ್‌.ಗಿರೀಶ್‌| ಅವಕಾಶವಿರುವ ಸ್ಥಳಗಳಲ್ಲಿ ಎಲ್‌.ಇ.ಡಿ. ಸ್ಕ್ರೀನ್‌ ಮೂಲಕ ಲೈವ್‌ನಲ್ಲಿ ದರ್ಶನ ನೀಡಲು ನಿರ್ಧಾರ| 

Hasanambe Devi Darshan to Devotees on Online due to Coronavirusgrg
Author
Bengaluru, First Published Oct 3, 2020, 12:09 PM IST
  • Facebook
  • Twitter
  • Whatsapp

ಹಾಸನ(ಅ.03): ಜಿಲ್ಲೆಯಲ್ಲಿ ಕೋವಿಡ್‌-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನಡೆಯಲಿರುವ ಹಾಸನಾಂಬ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಆನ್‌ಲೈನ್‌ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸುವುದಾಗಿ ಜಿಲ್ಲಾ​ಧಿಕಾರಿ ಆರ್‌.ಗಿರಿಶ್‌ ತಿಳಿಸಿದರು.

ಜಿಲ್ಲಾ​ಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ 5 ರಿಂದ ನವೆಂಬರ್‌ 17 ರವರೆಗೆ ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಪ್ರತಿ ವರ್ಷದಂತೆ ಈ ಬಾರಿ ಜನಜಂಗುಳಿಯೊಂದಿಗೆ ಉತ್ಸವ ಆಚರಣೆ ಕಷ್ಟಸಾಧ್ಯವಾಗಿದೆ ಎಂದರು. ನೀಡುವುದರ ಬಗ್ಗೆ ಶೀಘ್ರವೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುವುದು.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ತುಂಬಾ ಕಷ್ಟಸಾಧ್ಯ. ಪ್ರತಿ ವರ್ಷ ಆ ಅವ​ಯಲ್ಲಿ ಲಕ್ಷಕ್ಕಿಂತ ಹೆಚ್ಚು ಜನ ದೇವಸ್ಥಾನಕ್ಕೆ ಭೆಟಿ ನೀಡುತ್ತಿದ್ದು, ಈ ವರ್ಷ ಜಾಗೃತಿಯಿಂದ ಇರಬೇಕಾಗುತ್ತದೆ. ಹಾಗಾಗಿ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

'ಗಂಡ ನಾ ಹೇಳಿದಂತೆ ಕೇಳೋ ಹಾಗೆ ಮಾಡು', ಹಾಸನಾಂಬೆಗೆ ಭಕ್ತೆಯ ಪತ್ರ

ಕೋವಿಡ್‌ ಹಿನ್ನೆಲೆಯಲ್ಲಿ ಮೊದಲ ದಿನ ಹಾಗೂ ಕೊನೆಯ ದಿನ ಮಾತ್ರ ಪ್ರತಿ ವರ್ಷದಂತೆ ವಿಧಿ​ ವಿಧಾನಗಳ ಪ್ರಕಾರ ಸಣ್ಣ ಕಾರ್ಯಕ್ರಮ ಆಯೋಜಿಸಿ ದೇವಸ್ಥಾನ ತೆರೆಯುವಿಕೆ ಹಾಗೂ ಮುಚ್ಚುವುದಕ್ಕೆ ಚಿಂತಿಸಲಾಗಿದೆ ಎಂದು ಜಿಲ್ಲಾ​ಧಿಕಾರಿಯವರು ತಿಳಿಸಿದರು.

ಉಳಿದ ದಿನಗಳಲ್ಲಿ ದೇವಾಸ್ಥಾನದ ಸಿಬ್ಬಂದಿ ಮಾತ್ರ ಪೂಜೆ ಪುರಸ್ಕಾರ ಮಾಡಲಾಗುತ್ತದೆ. ಪ್ರಾರಂಭದಿಂದ ಅಂತ್ಯದವರೆಗೂ ದೇವರ ದರ್ಶನವನ್ನು ನಗರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅವಕಾಶವಿರುವ ಸ್ಥಳಗಳಲ್ಲಿ ಎಲ್‌.ಇ.ಡಿ. ಸ್ಕ್ರೀನ್‌ ಮೂಲಕ ಲೈವ್‌ನಲ್ಲಿ ದರ್ಶನ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಕ ಅಧಿ​ಕಾರಿ ಬಿ.ಎ. ಪರಮೇಶ್‌ ಹಾಜರಿದ್ದರು.
 

Follow Us:
Download App:
  • android
  • ios