Hassan: ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಪ್ರಕರಣ ಸಿಐಡಿಗೆ ವರ್ಗಾಯಿಸಿ ಎಡಿಜಿಪಿ ಆದೇಶ
ಶಾಸಕ ಎಚ್.ಡಿ.ರೇವಣ್ಣ ಆಪ್ತರಾಗಿದ್ದ ಗ್ರಾನೈಟ್ ಉದ್ಯಮಿ ಕೃಷ್ಣೇಗೌಡರ ಕೊಲೆಯಾಗಿ ಮೂರು ತಿಂಗಳು ಕಳೆದರೂ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲಗೊಂಡ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ಕೊಡಲು ಆದೇಶ ಮಾಡಲಾಗಿದೆ.
ಹಾಸನ (ನ.25): ಶಾಸಕ ಎಚ್.ಡಿ.ರೇವಣ್ಣ ಆಪ್ತರಾಗಿದ್ದ ಗ್ರಾನೈಟ್ ಉದ್ಯಮಿ ಕೃಷ್ಣೇಗೌಡರ ಕೊಲೆಯಾಗಿ ಮೂರು ತಿಂಗಳು ಕಳೆದರೂ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲಗೊಂಡ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ಕೊಡಲು ಆದೇಶ ಮಾಡಲಾಗಿದೆ. ನಗರದ ಹೊರವಲಯ ಮುಖ್ಯ ರಸ್ತೆ ಬಳಿ ಆಗಸ್ಟ್ ತಿಂಗಳಲ್ಲಿ ಗ್ರಾನೈಟ್ ಉದ್ಯಮಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಶ್ರೀರಾಮ ಮಾರ್ಬಲ್ಸ್ ಮಾಲೀಕ ಕೃಷ್ಣೇಗೌಡರನ್ನು ಅವರ ಗ್ರಾನೈಟ್ ಫ್ಯಾಕ್ಟರಿ ಎದುರೇ ಇನ್ನೋವಾ ಕಾರಿನಲ್ಲಿ ಬಂದ ನಾಲೈದು ಮಂದಿ ದುಷ್ಕರ್ಮಿಗಳು ಕೃಷ್ಣೇಗೌಡರ ಕಾರನ್ನು ಅಡ್ಡಗಟ್ಟಿ ಮಚ್ಚು ಬೀಸಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದರು. ಇದಕ್ಕೆ ಸಂಬಂಧಿಸಿದ ಐದಾರು ಜನರನ್ನು ಬಂಧಿಸಿ ನಂತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
ಆದರೆ ಮುಖ್ಯ ಆರೋಪಿಗಳು ತಲೆ ತಪ್ಪಿಸಿಕೊಂಡಿದ್ದರಿಂದ ಈ ಕೇಸಿನ ಪ್ರಮುಖರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲರಾಗಿದೆ. ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತ ಉದ್ಯಮಿ ಕೃಷ್ಣೇಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಪ್ರಕರಣವನ್ನು ಈಗ ಸಿಐಡಿ ತನಿಖೆಗೆ ವಹಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರು ಪ್ರಕರಣವನ್ನು ಸಿಐಡಿಗೆ ವಹಿಸಲು ಆದೇಶ ಮಾಡುವ ಮೂಲಕ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಂತಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣದ ತನಿಖಾಧಿಕಾರಿ ಹತ್ಯೆಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಸಿಐಡಿಗೆ ಸಲ್ಲಿಸಲು ಸೂಚನೆ ಕೊಡಲಾಗಿದೆ.
ಎಂಪಿ ಚುನಾವಣೆವರೆಗೂ ಸರ್ಕಾರದ ಜಾತಿಗಣತಿ ನಾಟಕ: ಎಚ್‌ಡಿಕೆ
ಕೃಷ್ಣೇಗೌಡರ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಯೋಗಾನಂದ ಹಾಗೂ ಅನಿಲ್ ಅವರಿಬ್ಬರ ಸುಳಿವು ಪತ್ತೆ ಮಾಡುವಲ್ಲಿ ಜಿಲ್ಲಾ ಪೊಲೀಸ್ ಸಂಪೂರ್ಣ ವಿಫಲಗೊಂಡಿದ್ದರಿಂದ ಮತ್ತು ಈ ಕೊಲೆ ಕೇಸು ಬಗ್ಗೆ ಕೆಲ ಅನುಮಾನಗಳು ಎಡೆ ಮಾಡಿಕೊಟ್ಟಿರುವ ಬಗ್ಗೆ ಸುಳಿವು ಸಿಕ್ಕಿದ್ದರಿಂದ ಸಿಐಡಿಗೆ ವಹಿಸಲು ಮುಂದಾಗಿದ್ದಾರೆ, ಈಗಾಗಲೇ ಆದೇಶದ ಕಾಪಿ ಕೂಡ ಕಳುಹಿಸಲಾಗಿದೆ. ಈ ನಡುವೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು, ಹೀಗಾಗಿ ರಾಜ್ಯದ ಗಮನ ಸೆಳೆದಿದ್ದ ಈ ಪ್ರಕರಣ ಹಳ್ಳ ಹಿಡಿಯುವ ಲಕ್ಷಗಳಿದ್ದವು. ಪ್ರಕರಣದ ಗಂಭೀರತೆಗೆ ತಕ್ಕಂತೆ ತನಿಖೆ ನಡೆಯದಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆದಿತ್ತು.
ಪ್ರಕರಣ ಪ್ರಾರಂಭದಲ್ಲೆ ಎಸ್ಪಿ ಹರಿರಾಂ ಶಂಕರ್ ವರ್ಗಾವಣೆ ಆಯಿತು. ನಂತರ ಆ ಸ್ಥಾನಕ್ಕೆ ಬಂದ ಮೊಹಮದ್ ಸುಜೀತಾ ಅವರಿಂದಲೂ ಆರೋಪಿಗಳ ಸುಳಿವು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆಯ ಅಸ್ತ್ರ ಎಂಬಂತೆ ಈಗ ಸಿಐಡಿ ಪ್ರವೇಶದಿಂದ ಪ್ರಕರಣದ ತನಿಖೆಯ ದಿಕ್ಕು ಬದಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆಲ ದಿನಗಳಲ್ಲೆ ಈ ಕೇಸಿನ ಎಲ್ಲಾ ಪ್ರಮುಖ ಆರೋಪಿಗಳು ಪತ್ತೆ ಆಗುವ ಬಗ್ಗೆ ನಂಬಿಕೆ ವ್ಯಕ್ತವಾಗಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಆಪ್ತರಾಗಿದ್ದ ಗ್ರಾನೈಟ್ ಉದ್ಯಮಿ ಕೃಷ್ಣೇಗೌಡರ ಕೊಲೆಯಾಗಿ ಮೂರು ತಿಂಗಳು ಕಳೆದರೂ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲಗೊಂಡ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ಕೊಡಲು ಆದೇಶ ಮಾಡಲಾಗಿದೆ.
ನಗರದ ಹೊರವಲಯ ಮುಖ್ಯ ರಸ್ತೆ ಬಳಿ ಆಗಸ್ಟ್ ತಿಂಗಳಲ್ಲಿ ಗ್ರಾನೈಟ್ ಉದ್ಯಮಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಶ್ರೀರಾಮ ಮಾರ್ಬಲ್ಸ್ ಮಾಲೀಕ ಕೃಷ್ಣೇಗೌಡರನ್ನು ಅವರ ಗ್ರಾನೈಟ್ ಫ್ಯಾಕ್ಟರಿ ಎದುರೇ ಇನ್ನೋವಾ ಕಾರಿನಲ್ಲಿ ಬಂದ ನಾಲೈದು ಮಂದಿ ದುಷ್ಕರ್ಮಿಗಳು ಕೃಷ್ಣೇಗೌಡರ ಕಾರನ್ನು ಅಡ್ಡಗಟ್ಟಿ ಮಚ್ಚು ಬೀಸಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದರು. ಇದಕ್ಕೆ ಸಂಬಂಧಿಸಿದ ಐದಾರು ಜನರನ್ನು ಬಂಧಿಸಿ ನಂತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಮುಖ್ಯ ಆರೋಪಿಗಳು ತಲೆ ತಪ್ಪಿಸಿಕೊಂಡಿದ್ದರಿಂದ ಈ ಕೇಸಿನ ಪ್ರಮುಖರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲರಾಗಿದೆ.
ಮಾಜಿ ಸಚಿವ ಎಚ್ ಡಿ ರೇವಣ್ಣ ಆಪ್ತ ಉದ್ಯಮಿ ಕೃಷ್ಣೇಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಪ್ರಕರಣವನ್ನು ಈಗ ಸಿಐಡಿ ತನಿಖೆಗೆ ವಹಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರು ಪ್ರಕರಣವನ್ನು ಸಿಐಡಿಗೆ ವಹಿಸಲು ಆದೇಶ ಮಾಡುವ ಮೂಲಕ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಂತಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣದ ತನಿಖಾಧಿಕಾರಿ ಹತ್ಯೆಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಸಿಐಡಿಗೆ ಸಲ್ಲಿಸಲು ಸೂಚನೆ ಕೊಡಲಾಗಿದೆ. ಕೃಷ್ಣೇಗೌಡರ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಯೋಗಾನಂದ ಹಾಗೂ ಅನಿಲ್ ಅವರಿಬ್ಬರ ಸುಳಿವು ಪತ್ತೆ ಮಾಡುವಲ್ಲಿ ಜಿಲ್ಲಾ ಪೊಲೀಸ್ ಸಂಪೂರ್ಣ ವಿಫಲಗೊಂಡಿದ್ದರಿಂದ ಮತ್ತು ಈ ಕೊಲೆ ಕೇಸು ಬಗ್ಗೆ ಕೆಲ ಅನುಮಾನಗಳು ಎಡೆ ಮಾಡಿಕೊಟ್ಟಿರುವ ಬಗ್ಗೆ ಸುಳಿವು ಸಿಕ್ಕಿದ್ದರಿಂದ ಸಿಐಡಿಗೆ ವಹಿಸಲು ಮುಂದಾಗಿದ್ದಾರೆ.
ಡಿಕೆಶಿ ಸಿಬಿಐ ಕೇಸ್ ವಾಪಸಿನ ನಿರ್ಧಾರಕ್ಕೆ ಛೀಮಾರಿ ಬೀಳಲಿದೆ: ಎಚ್.ಡಿ.ಕುಮಾರಸ್ವಾಮಿ
ಈಗಾಗಲೇ ಆದೇಶದ ಕಾಪಿ ಕೂಡ ಕಳುಹಿಸಲಾಗಿದೆ. ಈ ನಡುವೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು, ಹೀಗಾಗಿ ರಾಜ್ಯದ ಗಮನ ಸೆಳೆದಿದ್ದ ಈ ಪ್ರಕರಣ ಹಳ್ಳ ಹಿಡಿಯುವ ಲಕ್ಷಗಳಿದ್ದವು. ಪ್ರಕರಣದ ಗಂಭೀರತೆಗೆ ತಕ್ಕಂತೆ ತನಿಖೆ ನಡೆಯದಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆದಿತ್ತು. ಪ್ರಕರಣ ಪ್ರಾರಂಭದಲ್ಲೆ ಎಸ್ಪಿ ಹರಿರಾಂ ಶಂಕರ್ ವರ್ಗಾವಣೆ ಆಯಿತು. ನಂತರ ಆ ಸ್ಥಾನಕ್ಕೆ ಬಂದ ಮೊಹಮದ್ ಸುಜೀತಾ ಅವರಿಂದಲೂ ಆರೋಪಿಗಳ ಸುಳಿವು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆಯ ಅಸ್ತ್ರ ಎಂಬಂತೆ ಈಗ ಸಿಐಡಿ ಪ್ರವೇಶದಿಂದ ಪ್ರಕರಣದ ತನಿಖೆಯ ದಿಕ್ಕು ಬದಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆಲ ದಿನಗಳಲ್ಲೆ ಈ ಕೇಸಿನ ಎಲ್ಲಾ ಪ್ರಮುಖ ಆರೋಪಿಗಳು ಪತ್ತೆ ಆಗುವ ಬಗ್ಗೆ ನಂಬಿಕೆ ವ್ಯಕ್ತವಾಗಿದೆ.