ಗ್ರಾಮದ ರೈತರಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು: ಶಾಸಕ ಎಚ್.ಡಿ.ರೇವಣ್ಣ
ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಹೆಣ್ಣು ಮಕ್ಕಳು ಹಾಗೂ ರೈತರಿಗೆ ನುರಿತ ವೈದ್ಯರಿಂದ ಉತ್ತಮ ಚಿಕಿತ್ಸೆ ದೊರೆಯಬೇಕು. ಈ ಉದ್ದೇಶದಿಂದ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೭ ಸಮುದಾಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ಹೊಳೆನರಸೀಪುರ (ಫೆ.29): ಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಹೆಣ್ಣು ಮಕ್ಕಳು ಹಾಗೂ ರೈತರಿಗೆ ನುರಿತ ವೈದ್ಯರಿಂದ ಉತ್ತಮ ಚಿಕಿತ್ಸೆ ದೊರೆಯಬೇಕು. ಈ ಉದ್ದೇಶದಿಂದ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೭ ಸಮುದಾಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ತಾಲೂಕಿನ ಪಡುವಲಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಸನದ ಹಿಮ್ಸ್ ಆಸ್ಪತ್ರೆ ಹಾಗೂ ಹೊಳೆನರಸೀಪುರದ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಹಾಗೂ ಸಾಕಷ್ಟು ನುರಿತ ವೈದ್ಯರು ಆಗಮಿಸಿದ್ದು ಇವರ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ಮತ್ತು ರಕ್ತ ದಾನ ಶಿಬಿರವನ್ನು ನಡೆಸಲಾಗುತ್ತಿದೆ. ಈ ಶಿಬಿರದಲ್ಲಿ ನುರಿತ ವೈದ್ಯರ ತಂಡ ಬಂದಿದ್ದು, ಅವರಿಂದ ತಪಾಸಣೆ ಮಾಡಿಸಿಕೊಂಡು, ಸಾರ್ವಜನಿಕರು ಅರೋಗ್ಯವನ್ನು ಕಾಪಾಡಿಕೊಳ್ಳುವ ಜತೆಗೆ ಪ್ರಧಾನಿ ಮೋದಿಯವರು ಬಡವರ ಆರೋಗ್ಯ ದೃಷ್ಟಿಯಿಂದ ಜಾರಿ ಮಾಡಿರುವ ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯುವ ಮೂಲಕ ಸಂಕಷ್ಟದ ಸಮಯದಲ್ಲಿ ಚಿಕಿತ್ಸೆಯ ೫ ಲಕ್ಷ ರು. ಸಹಾಯಧನವನ್ನು ಕೇಂದ್ರ ಸರ್ಕಾರ ನೀಡುತ್ತದೆ.
ಕಾಂಗ್ರೆಸ್‌ಗೆ ದೇಶಕಿಂತ ದೇಶದ್ರೋಹಿಗಳೇ ಮೆಚ್ಚು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಆದ್ದರಿಂದ ರೈತರು ತಪ್ಪದೇ ಆಯುಷ್ಮಾನ್ ಕಾರ್ಡ್ ಪಡೆಯುವಂತೆ ಐದಾರು ಸಲ ಸಲಹೆ ನೀಡುವ ಜತೆಗೆ ಮುಂದಿನ ತಿಂಗಳು ಚುನಾವಣೆ ಘೋಷಣೆಯಾಗುವುದರಿಂದ ತಪ್ಪದೇ ಈಗಲೇ ಕಾರ್ಡ್ ಪಡೆಯಲು ಹೆಸರು ನೋಂದಾಯಿಸಬೇಕು ಎಂದು ಸಲಹೆ ನೀಡಿದರು. ಆರೋಗ್ಯ ಶಿಬಿರದಲ್ಲಿ ೬೫೦ಕ್ಕೂ ಹೆಚ್ಚು ಜನರು ಹೆಸರು ನೊಂದಾಯಿಸಿಕೊಂಡು, ಚಿಕಿತ್ಸೆ ಪಡೆದರು. ಹಾಸನ ಹಿಮ್ಸ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಎಚ್.ಸಿ.ಲೋಕೇಶ್, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಧನಶೇಖರ್, ಡಾ.ವಿನಯ್ ಕುಮಾರ್, ಡಾ.ನಾಗೇಂದ್ರ, ಡಾ.ಕುಸುಮಾ, ಡಾ.ದಿನೇಶ್, ಡಾ.ಸಂಜನಾ, ಡಾ.ಶ್ರೇಯಾ ಹಾಗೂ ಪಡುವಲಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ನೀರಜಾ, ಡಾ.ನಿಶಿತಾ ಹಾಗೂ ಡಾ.ಉಮಾ ಹಾಗೂ ಸಿಬ್ಬಂದಿ ಆರೋಗ್ಯ ಶಿಬಿರದಲ್ಲಿ ಸೇವೆ ಸಲ್ಲಿಸಿದರು.
ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿ ನಾನಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್
ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಇಒ ಕುಸುಮಾದರ್, ತಾಲೂಕು ಅರೋಗ್ಯಾಧಿಕಾಡಿ ಡಾ. ರಾಜೇಶ್, ತಾಪಂ ತಾಂತ್ರಿಕ ಅಧಿಕಾರಿ ಗೋಪಾಲ್ ಪಿ.ಆರ್., ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಕೌಸರ್ ಅಹಮದ್, ಸಿಡಿಪಿಒ ಜ್ಯೋತಿ, ಪ್ರಾಂಶುಪಾಲ ಕುಮಾರಸ್ವಾಮಿ, ಗ್ರಾಮದ ಮುಖಂಡರಾದ ಗೌಡಪ್ಪ ಮಾಸ್ಟರ್, ಶಿವಣ್ಣ, ಲಕ್ಷ್ಮಣಗೌಡ, ಪುರುಶೋತಮ್ ಇದ್ದರು. ಹೊಳೆನರಸೀಪುರ ತಾಲೂಕು ಪಡುವಲಹಿಪ್ಪೆ ಗ್ರಾಮದಲ್ಲಿ ಶಾಸಕ ಎಚ್.ಡಿ.ರೇವಣ್ಣ ಉಪಸ್ಥಿತಿಯಲ್ಲಿ ಆಯೋಜನೆ ಮಾಡಿದ್ದ ಬೃಹತ್ ಆರೋಗ್ಯ ಮೇಳವನ್ನು ಮಹಿಳಾ ವೈದ್ಯರು ಉದ್ಘಾಟಿಸಿದರು.