ಬಿಜೆಪಿ ಸರ್ಕಾರ ವಜಾಗೊಳಿಸಲು ಆಗ್ರಹ : ಭಾರೀ ಆಕ್ರೊಶ
ಭಾರೀ ದುರ್ಘಟನೆಗೆ ಸೂಕ್ತ ನ್ಯಾಯ ದೊರಕಿಸಿಕೊಡದ ಸರ್ಕಾರ ವಜಾ ಆಗಬೇಕು ಎಂದು ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸಲಾಗುತ್ತಿದೆ.
ಬೇಲೂರು (ಅ.04): ಬಿಜೆಪಿ ಸರ್ಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಶುಕ್ರವಾರ ಸಂಜೆ ಬೇಲೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬೇಲೂರಿನ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಂದಂತ ಹಣವನ್ನು ಹಿಂಪಡೆಯುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.
ಈ ಹಿಂದೆ ಸಮ್ಮಿಶ್ರ ಸರ್ಕಾರ ಇದ್ದ ಕಾಲದಲ್ಲಿ ಕೇಂದ್ರ ಸಚಿವರಾಗಿದ್ದ ನಿತಿನ್ ಗಡ್ಕರಿ ಅವರು 300 ಕೋಟಿ ರು. ರಸ್ತೆ ಅಭಿವೃದ್ಧಿಗೆ ಶಂಕು ಸ್ಥಾಪನೆ ಮಾಡಿ ಹೋಗಿದ್ದರು. ಈಗಿನ ಪಿಡಬ್ಲ್ಯು ಮಿನಿಸ್ಟರ್‌ಗಳ ಸ್ವಂತ ಸ್ಥಳಕ್ಕೆ ವರ್ಗಾವಣೆ ಮಾಡಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೇಲೂರಿನ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ರೈತಾಪಿ ವರ್ಗಕ್ಕೆ ಅನುಕೂಲವಾಗುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರಕ್ಕೆ ಬೇಲೂರು ಚಿಕ್ಕಮಗಳೂರು, ಹಾಸನ ಮೂಲಕ ಬೆಗಳೂರಿಗೆ ರೈಲ್ವೆ ಸಂಪರ್ಕಕ್ಕೆ ಒಂದೂವರೆ ವರ್ಷದ ಹಿಂದೆ ಕೇಂದ್ರ ಸಚಿವರ ಬಳಿ ಚರ್ಚಿಸಿ ಅನುಮೋದನೆ ಮಾಡಲಾಯಿತು.
ಅದನ್ನು ಹಿಂಪಡೆದು ಕೊಂಡಿರುತ್ತಾರೆ. ಕುಮಾರಸ್ವಾಮಿ ಸರ್ಕಾರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 15 ಕೋಟಿ ಹಣ ಹಾಗೂ ಬೇಲೂರು ಪುರಸಭೆಗೆ ನಗರೋತ್ಥಾನದಿಂದ 8 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿತ್ತು.
ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯ ..
ಅದನ್ನು ಹಿಂಪಡೆದುಕೊಂಡಿರುವ ಬಗ್ಗೆ ಕಲಾಪ ಮುಗಿದ ನಂತರ ಮುಖ್ಯಮಂತ್ರಿ ಬಳಿ ಚರ್ಚಿಸಿ ದ್ವೇಷದ ರಾಜಕಾರಣ ಮಾಡದೆ ಹಣ ಬಿಡುಗಡೆ ಮಾಡಿ ಎಂದು ಕೇಳಿದ್ದೇವೆ.ಅಲ್ಲದೆ ಕೊರೊನಗೆ ಹೆದರಿ ಗ್ರಾಮೀಣ ಭಾಗದ ಜನರು ಸರ್ಕಾರಿ ಆಸ್ಪತ್ರೆಗೆ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇಲ್ಲಿ ಬಂದರೆ ನಮ್ಮ ಸಾವು ಖಚಿತ ಎಂದು ಹೆದರುವ ಸ್ಥಿತಿ ಇರುವುದರಿಂದ ಯಾರೂ ಸಹ ಬರುತ್ತಿಲ್ಲ.ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಲೂಟಿ ಹೊಡೆಯುವ ಬದಲು ಕೆಲವು ಖಾಸಗಿ ಆಸ್ಪತ್ರೆಗಳನ್ನು ಸರ್ಕಾರವೇ ವಿಷೇಶ ಸವಲತ್ತು ನೀಡಿ ಬಡವರ್ಗದ ಸೊಂಕಿತರಿಗೆ ಒಳ್ಳೆಯ ಚಿಕಿತ್ಸೆ ನೀಡುವಂತೆ ಕಲಾಪದಲ್ಲಿ ಚರ್ಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಕೆಎಸ್ ಲಿಂಗೇಶ್, ತಾಲೂಕು ಅಧ್ಯಕ್ಷ ತೊಚ ಅನಂತ ಸುಬ್ಬರಾಯ್, ಟಿಎಪಿಸಿಎಂಎಸ್ ಅಧ್ಯಕ್ಷ ನಾಗೇಶ್ ಯಾದವ್, ಬಿಡಿ ಚಂದ್ರೇಗೌಡ, ಮಾರುತಿ ಚಂದ್ರು, ಎಂಕೆಆರ್ ಸೋಮೇಶ್ ಹಾಜರಿದ್ದರು.