ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಅಸಮರ್ಪಕ: ಎಚ್‌.ಸಿ.ಮಹದೇವಪ್ಪ

ಮತದಾರರ ಪಟ್ಟಿಯಲ್ಲಿನ ನಕಲಿ ಹೆಸರುಗಳನ್ನು ತೆಗೆದು ಹಾಕುವುದಕ್ಕಾಗಿ ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್‌ ಕಾರ್ಡ್‌ ಜೋಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದೊಂದು ಅಸಮರ್ಪಕ ಕ್ರಮ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. 

hc mahadevappa talks over linking of aadhar card to voter id card gvd

ಮೈಸೂರು (ಸೆ.02): ಮತದಾರರ ಪಟ್ಟಿಯಲ್ಲಿನ ನಕಲಿ ಹೆಸರುಗಳನ್ನು ತೆಗೆದು ಹಾಕುವುದಕ್ಕಾಗಿ ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್‌ ಕಾರ್ಡ್‌ ಜೋಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದೊಂದು ಅಸಮರ್ಪಕ ಕ್ರಮ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. ಪ್ರಜಾಪ್ರಭುತ್ವವನ್ನು ನಿರ್ಧರಿಸುವ ಚುನಾವಣೆಯಲ್ಲಿ ಪಾಲ್ಗೊಳ್ಳಲು ಕಡ್ಡಾಯವಾಗಿದ್ದು, ಮತದಾರರ ಗುರುತಿನ ಚೀಟಿಯ ವಿಷಯದಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿರುವ ಸರ್ಕಾರವು ಚುನಾವಣಾ ವರ್ಷದಲ್ಲಿ ಆಧಾರ್‌ ಜೋಡಿಸಬೇಕೆಂಬ ಅಸಮರ್ಪಕ ಕೆಲಸಕ್ಕೆ ಕೈ ಹಾಕಿದ್ದು ಇದು ಪ್ರಜೆಯೊಬ್ಬರ ಸಂವಿಧಾನಾತ್ಮಕ ಹಕ್ಕಿನ ಸ್ಪಷ್ಟಉಲ್ಲಂಘನೆ ಆಗಿದೆ ಎಂದು ಅವರು ಕಿಡಿಕಾರಿದ್ದಾರೆ.

ವೋಟರ್‌ ಐಡಿಗೆ ಆಧಾರ್‌ ಜೋಡಿಸುವ ವಿಷಯದಲ್ಲಿ ಅಧಿಕಾರಿಗಳು ಮತ್ತು ಆಡಳಿತ ಪಕ್ಷದ ಕಾರ್ಯಕರ್ತರು ಜನ ಸಾಮಾನ್ಯರನ್ನು ಆಧಾರ್‌ ಕಾರ್ಡ್‌ ಜೋಡಿಸುವುದು ಕಡ್ಡಾಯ ಮತ್ತು ಆಧಾರ್‌ ಕಾರ್ಡ್‌ ಜೋಡಿಸುವುದು ಐಚ್ಛಿಕ ಎಂದು ಗೊಂದಲ ಮೂಡಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಗೊಂದಲದಿಂದ ಎಷ್ಟೋ ಜನ ನಮ್ಮ ಆಧಾರ್‌ ಜೋಡಣೆ ಆಗಿಲ್ಲ. ನಮಗೆ ಮತ ಹಾಕಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೂ ಬರುವಂತಹ ಸಾಧ್ಯತೆ ಇದ್ದು, ಇದು ಚುನಾವಣಾ ಪ್ರಕ್ರಿಯೆಯ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ಗುಲಾಮ್‌ ನಬಿ ನಿರ್ಗಮನ ವಿಷಾದನೀಯ: ಎಚ್‌.ಸಿ.ಮಹದೇವಪ್ಪ

ಮತದಾರರ ಗುರುತಿನ ಚೀಟಿಯಲ್ಲಿನ ನಕಲಿ ಹೆಸರನ್ನು ತೆಗೆದು ಹಾಕಲು ಆಧಾರ್‌ ಕಾರ್ಡ್‌ ಜೋಡಿಸಬೇಕು ಎಂದು ಹೇಳಲಾಗುತ್ತಿದೆ. ಆದರೆ ಕಳೆದ ಬಾರಿಯ ಮಹಾಲೆಕ್ಕ ಪರಿಶೋಧಕರ ವರದಿಯಂತೆ ಭಾರತದಲ್ಲಿ ಸುಮಾರು 5 ಲಕ್ಷದಷ್ಟುನಕಲಿ ಆಧಾರ್‌ಕಾರ್ಡ್‌ ಪತ್ತೆಯಾಗಿದೆ. ಹೀಗಿರುವಾಗ ಯಾವ ಆಧಾರದ ಮೇಲೆ ಮತದಾರರ ಗುರಿತುನ ಚೀಟಿಯನ್ನು ಜೋಡಿಸಬೇಕು ಎಂದು ಸರ್ಕಾರ ಹೇಳುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ಸಿದ್ದು ಮತ್ತೆ ಸಿಎಂ ಆಗಲಿ: ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಬರಬೇಕು ಎಂದು ಮಾಜಿ ಸಚಿವ ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.  ಸಮಾಜವಾದಿ ವೇದಿಕೆ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘ಶಾಂತವೇರಿ ಗೋಪಾಲಗೌಡ ಹಾಗೂ ಮಧುಲಿಮಯೆ ಜನ್ಮ ಶತಮಾನೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜನಪರ ಆಡಳಿತ, ಬಡವರ ಪರ ಕಾಳಜಿಯನ್ನು ಉಲ್ಲೇಖಿಸಿ, ಮತ್ತೊಮ್ಮೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಬರಲಿ. 

ಮಾದರಿ ಕ್ಷೇತ್ರ ಮಾಡುವುದು ನನ್ನ ಜೀವನದ ಗುರಿ: ಸಾ.ರಾ.ಮಹೇಶ್‌

ಶಾಂತವೇರಿ ಗೋಪಾಲಗೌಡರ ನೂರನೇ ವರ್ಷದ ಜನ್ಮದಿನಚಾರಣೆಯನ್ನು ಮುಂದೆ ಸರ್ಕಾರವೇ ಮಾಡಲಿ ಎಂದು ಆಶಿಸಿದರು. ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಯಾರೂ ಸಹ ಮಾತನಾಡಬಾರದು ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದ್ದರೂ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಈ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿಕೆ ನೀಡಿದ್ದಾರೆ.

Latest Videos
Follow Us:
Download App:
  • android
  • ios