ವಿಜಯಪುರ (ಜ.31): ನೀವು ಒಳ್ಳೆಯ ನಾಯಕರು. ನಿಮ್ಮನ್ನು ನಾವು ಬಿಟ್ಟು ತಪ್ಪು ಮಾಡಿದ್ದೇವೆ. ಕರ್ನಾಟಕದಲ್ಲಿ ನಿಜವಾದ ವಿಪಕ್ಷದ ನಾಯಕರು ಎಂದರೆ ನೀವೇ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಶುಕ್ರವಾರವಷ್ಟೇ ಸಿಂದಗಿಯಲ್ಲಿ ಮಾಜಿ ಸಚಿವ ಎಂ.ಸಿ.ಮನಗೂಳಿ ಅಂತ್ಯಕ್ರಿಯೆ ವೇಳೆ ಎಚ್‌.ಡಿ.ಕುಮಾರಸ್ವಾಮಿ ಅಕ್ಕಪಕ್ಕದಲ್ಲಿಯೇ ಆಸೀನರಾಗಿ ದೀರ್ಘ ಸಮಾಲೋಚನೆ ನಡೆಸಿದ್ದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ, ಕುಮಾರಸ್ವಾಮಿ ಹಾಗೂ ತಮ್ಮ ನಡುವೆ ಹಳೆಯ ಸಂಬಂಧವಿದೆ. ನಾವು ಗೆಳೆಯರಾಗಿ ಮಾತನಾಡಿದ್ದೇವೆ ಎಂದರು.

ಮತ್ತೊಂದು ಹೊಸ ಬಾಂಬ್‌ ಸಿಡಿಸಿದ ಯತ್ನಾಳ್..!

ಕುಮಾರಸ್ವಾಮಿ ಜೆಡಿಎಸ್‌ಗೆ ಬರಲು ತಮಗೆ ಆಹ್ವಾನಿಸಿದರೆ ಎಂಬ ಪ್ರಶ್ನೆಗೆ ಉತ್ತರಿಸಿದ ಯತ್ನಾಳ, ನಾನು ಎಲ್ಲಿಯೂ ಹೋಗುವುದಿಲ್ಲ. ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ನಾನು ಬ್ಲ್ಯಾಕ್‌ಮೇಲ್‌ ಮಾಡಲು ಬ್ಲ್ಯಾಕ್‌ಮೇಲ್‌ ರಾಜಕಾರಣಿ ಅಲ್ಲ ಎಂದರು.