Asianet Suvarna News Asianet Suvarna News

ಬೆಳಗಾವಿ, ಹುಬ್ಬಳ್ಳಿ ಏರ್ ಪೋರ್ಟ್‌ಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು

ಬೆಳಗಾವಿ, ಹುಬ್ಬಳ್ಳಿ ಏರ್ ಪೋರ್ಟ್ ಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರ ನಾಗರಿಕವಿಮಾನಯಾನ ಖಾತೆ ಸಚಿವ ಸುರೇಶ್ ಪ್ರಭುಗೆ ಪತ್ರ ಬರೆದಿದ್ದಾರೆ.

HD kumaraswamy letter  to civil aviation for name change Belagavi and Hubballi Airport
Author
Bengaluru, First Published Dec 22, 2018, 9:50 PM IST

ಬೆಂಗಳೂರು, (ಡಿ.22): ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಕಿತ್ತೂರು ರಾಣಿ  ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಶಿಫಾರಸು ಮಾಡಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಕುಮಾರಸ್ವಾಮಿ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ. 

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರಾಗಿ ಈ ಭಾಗದ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಆದ್ದರಿಂದ ಈ ವಿಮಾನ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕಿದ್ದು, ಹೆಸರಿಡಲು ಆದೇಶ ಹೊರಡಿಸಬೇಕೆಂದು ಕೋರಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಹಲವು ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ಮನವಿಗೆ ಸ್ಪಂದಿಸಿರುವ ಸಿಎಂ, ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.
 

Follow Us:
Download App:
  • android
  • ios