Asianet Suvarna News Asianet Suvarna News

ಟ್ರ್ಯಾಕ್ಟರ್ ಇದ್ದವ್ರಿಗೆ ಬಿಪಿಎಲ್ ಕಾರ್ಡ್ ಇಲ್ಲ: ಸರ್ಕಾರದ ಕ್ರಮದ ಬಗ್ಗೆ ಎಚ್‌ಡಿಕೆ ಕಿಡಿ

ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸರ್ಕಾರ ಹೇಳಿರುವ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

hd kumaraswamy slams govt for taking back bpl card from farmers
Author
Bangalore, First Published Jun 7, 2020, 12:43 PM IST

ಬೆಂಗಳೂರು(ಜೂ.07): ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸರ್ಕಾರ ಹೇಳಿರುವ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ಷೇ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಇದು ಮೂರ್ಖತನದ ಸೂಚನೆ.  ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಯದುವೀರ್‌ ಇನ್ನೂ ಬಾಲಕ, ತಾಯಿ ಹೇಳಿದ್ದಕ್ಕೆ ತಲೆ ಅಲ್ಲಾಡಿಸ್ತಾನೆ: ಮಾಜಿ ಮೇಯರ್

ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್‌ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ ಎಂದು ಸೂಚನೆಯನ್ನೂ ಕೊಟ್ಟಿದ್ದಾರೆ.

'ಮಾಜಿ ಸಚಿವ ಸಾರಾ ಮಹೇಶ್‌ಗೆ ಪ್ರಚಾರದಲ್ಲಿರೋಕೆ ಆಸೆ': ಬಿಜೆಪಿ ಮುಖಂಡ

ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow Us:
Download App:
  • android
  • ios