ಮುಂದಿನ ಚುನಾವಣೆಗೆ ನಿಗದಿಯಾಯ್ತಾ ನಿಖಿಲ್ ಸ್ಪರ್ಧಾ ಕಣ..?

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ಹಾಗಾದ್ರೆ ಮುಂದಿನ ಚುನಾವಣೆ ಸ್ಪರ್ಧೆ ಬಗ್ಗೆ ನಿಗದಿಯಾಯ್ತಾ ಕಣ..?

HD Kumaraswamy Speaks About Nikhil Kumaraswamy Politics snr

ಚನ್ನಪಟ್ಟಣ (ನ.21): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ನಡುವೆಯೇ ಸದ್ಯಕ್ಕೆ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ನಿರ್ಧಾರ ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ತಾಲೂಕಿನ ಮಹದೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ರಾಮನಗರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂದು ಇನ್ನೂ ನಿರ್ಧಾರ ಮಾಡಿಲ್ಲ. ಸ್ಪರ್ಧೆ ಮಾಡುವುದು ಮತ್ತು ಮಾಡದಿರುವುದು ಅವರವರ ವೈಯಕ್ತಿಕ ವಿಚಾರ. 

ಡಿಕೆಶಿ ಕಾಂಗ್ರೆಸ್‌ಗೆ ಕರೆದಿದ್ದಾರೆ : ಜೆಡಿಎಸ್‌ ನಾಯಕ ಮಧು ಬಂಗಾರಪ್ಪ

ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸುವುದು ನನ್ನ ಗುರಿ, ಇದಕ್ಕಾಗಿ ಕಾರ್ಯಕರ್ತರು ಮತ್ತು ಜನತೆಯ ಅಭಿಲಾಷೆಯನ್ನು ಗಮನದಲ್ಲಿರಿಸಿಕೊಂಡು ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ವಿಧಾನಸಭಾ ಚುನಾವಣೆ ಇನ್ನೂ ಸಾಕಷ್ಟುದೂರ ಇದೆ, ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios