Asianet Suvarna News Asianet Suvarna News

ಸುಮಲತಾ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಿಎಂ ಎಚ್‌ಡಿಕೆ

ಮಂಡ್ಯದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಪರೋಕ್ಷ ಟಾಂಗ್ ನೀಡಿದ್ದಾರೆ. 

HD Kumaraswamy Taunts Mandya MP Sumalatha Ambareesh snr
Author
Bengaluru, First Published Jan 25, 2021, 11:30 AM IST

ಮದ್ದೂರು (ಜ.25):  ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆಗಳು ಕಾರ್ಯನಿರ್ವಹಿಸುತ್ತಿರುವುದಕ್ಕೆ ಅಧಿಕಾರಿಗಳೇ ಮುಖ್ಯ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಣದಲ್ಲಿಡುವಲ್ಲಿ ಹಾಗೂ ಗಣಿ ಸಂಪತ್ತನ್ನು ರಕ್ಷಣೆ ಮಾಡುವಲ್ಲಿ ಅಧಿಕಾರಿ ವರ್ಗ ಸಂಪೂರ್ಣ ನಿಷ್ಕಿ್ರೕಯವಾಗಿದೆ. ಜಿಲ್ಲೆಯಲ್ಲಿ ಸಾವಿರಾರು ಅಕ್ರಮ ಗಣಿಗಾರಿಕೆಗಳಿರುವ ಬಗ್ಗೆ ಪಕ್ಷದ ವಿಧಾನ ಪರಿಷತ್‌ ಸದಸ್ಯರು ಸದನದಲ್ಲಿ ದನಿ ಎತ್ತಿದ್ದಾರೆ. ಅದು ಜಗಜ್ಜಾಹೀರು ಕೂಡ. ಆದರೆ, ಅದನ್ನು ನಿಯಂತ್ರಿಸಲು ಜಿಲ್ಲಾಡಳಿತ, ಅಧಿಕಾರಿಗಳು ಏನು ಕ್ರಮ ಕೈಗೊಂಡಿದ್ದಾರೆ ಎನ್ನುವುದಕ್ಕೆ ಉತ್ತರವೇ ಸಿಗುತ್ತಿಲ್ಲ ಎಂದು  ಸುದ್ದಿಗಾರರಿಗೆ ತಿಳಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರಿಗಿದು ಎಚ್ಚರಿಕೆ ಗಂಟೆ: ಸುಮಲತಾ ಅಂಬರೀಶ್ ...

ನಾರಾಯಣಗೌಡರಿಗೆ ಈಗ ಅಕ್ರಮ ಗಣಿಗಾರಿಕೆ ಬಗ್ಗೆ ಜ್ಞಾನೋದಯವಾಗಿದೆ. ಒಂದು ವರ್ಷದಿಂದ ಸಚಿವರಾಗಿ ಏನು ಮಾಡುತ್ತಿದ್ದರು. ಅಕ್ರಮ ಗಣಿ ಬಗ್ಗೆ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ಮೈಸೂರು ಸಕ್ಕರೆ ಕಂಪನಿ ಆರಂಭದ ಬಗ್ಗೆ ಭಿನ್ನ ಕೂಗು ಕೇಳಿಬರುತ್ತಿರುವುದರ ಬಗ್ಗೆ ಕೇಳಿದಾಗ, ಎಂಪಿ ಅವರು ಮೈಷುಗರ್‌ ಕಾರ್ಖಾನೆಗೆ ಅನುಕೂಲ ಮಾಡಿಕೊಡುತ್ತಾರೆ ಎಂದು ಸುಮಲತಾ ಹೆಸರೇಳದೆ ವ್ಯಂಗ್ಯವಾಡಿದರು.

ಸರ್ಕಾರ ಹಣ ಕೊಟ್ಟಯೋಜನೆಗಳನ್ನು ಅನುಷ್ಠಾನಕ್ಕೆ ತರುವುದರಲ್ಲಿ ಜಿಲ್ಲಾಡಳಿತದ ವೈಫಲ್ಯದ ಬಗ್ಗೆ ಜನಪ್ರತಿನಿಧಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸುವುದಾಗಿ ಹೇಳಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ, ಆ ಬಗ್ಗೆ ವಿಚಾರ ಮಾಡಿಲ್ಲ. ಮುಂದೆ ನೋಡೋಣ ಎಂದಷ್ಟೇ ಹೇಳಿದರು. ಶಾಸಕ ಡಿ.ಸಿ. ತಮ್ಮಣ್ಣ, ವಿಧಾನ ಪರಿಷತ್‌ ಸದಸ್ಯ ಎನ್‌. ಅಪ್ಪಾಜಿಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಇತರರಿದ್ದರು.

Follow Us:
Download App:
  • android
  • ios