Asianet Suvarna News Asianet Suvarna News

ಚಾಮುಂಡಿಬೆಟ್ಟದಲ್ಲಿ ಡಿಕೆಶಿ, ಎಚ್.ಡಿ. ರೇವಣ್ಣ ಪೂಜೆ

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡದೆ, ದೇವಿಯ ದರ್ಶನ ಪಡೆದು ಇಷ್ಟಾರ್ಥಗಳ ಈಡೇರಿಕೆಗೆ ಪ್ರಾರ್ಥಿಸಿದರು. 

HD Revanna and DKS  Performs  Pooja At Chamundi Hill
Author
Bengaluru, First Published Aug 11, 2018, 5:09 PM IST

ಮೈಸೂರು(ಆ.11): ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡದೆ, ದೇವಿಯ ದರ್ಶನ ಪಡೆದು ಇಷ್ಟಾರ್ಥಗಳ ಈಡೇರಿಕೆಗೆ ಪ್ರಾರ್ಥಿಸಿದರು. ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಡನೆ ಮಾತನಾಡಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಕಬಿನಿ ಸೇರಿದಂತೆ ಎಲ್ಲಾ ಜಲಾಶಯಗಳು ತುಂಬಿದೆ. ಕಬಿನಿ
ಜಲಾಶಯದಿಂದ ಈಗಾಗಲೇ ಅಧಿಕ ಪ್ರಮಾಣದ ನೀರು ಹೊರ ಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಹಾಗೂ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಎಚ್ಚರಿಕೆ ನೀಡಿದ್ದೇವೆ ಎಂದರು.

ಇಂದಿನ ನನ್ನ ಭೇಟಿ ದೇವಿ ಮತ್ತು ಭಕ್ತನ ನಡುವಿನ ಸಂಬಂಧ ಅಷ್ಟೇ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ ದರು. ಬಳಿಕ ಚಾಮುಂಡಿಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಕಮಿಷನ್ ಸರ್ಕಾರ ಎಂಬ ಕೆ.ಎಸ್. ಈಶ್ವರಪ್ಪ ಆರೋಪಕ್ಕೆ, ಅವರನ್ನೇ ಕೇಳಿ ಎಂದಷ್ಟೇ ಹೇಳಿ ತೆರಳಿದರು. 

ಇದೇ ವೇಳೆ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಕೂಡ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಅವರೂ ಕೂಡ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
 

Follow Us:
Download App:
  • android
  • ios