ಮೈಸೂರಲ್ಲಿ ಇತ್ತೀಚೆಗಷ್ಟೆ ಆರೋಗ್ಯಾಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಇದೀಗ ಮತ್ತೋರ್ವ ಅಧಿಕಾರಿ ಮೃತಪಟ್ಟಿದ್ದಾರೆ.

ಮೈಸೂರು (ಆ.30): ದೇಶದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ದೇಶದಲ್ಲಿ ಸಾವಿರಾರು ಜನರು ಬಲಿಯಾಗಿದ್ದಾರೆ. 

ಲಕ್ಷ ಲಕ್ಷ ಜನರನ್ನು ಕಾಡುತ್ತಿರುವ ಕೊರೋನಾ ಸೋಂಕು ಇದೀಗ ಮೈಸೂರಿನಲ್ಲಿ ಮತ್ತೋರ್ವ ಆರೋಗ್ಯಾಧಿಕಾರಿಯನ್ನು ಬಲಿ ಪಡೆದುಕೊಂಡಿದೆ.

ಕೋವಿಡ್‌ ಸೋಂಕಿತರ ಪತ್ತೆ ತಂಡದಲ್ಲಿದ್ದ ಸಮುದಾಯ ಆರೋಗ್ಯಾಧಿಕಾರಿ ಕೊರೋನಾಕ್ಕೆ ಬಲಿಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ. 32 ವರ್ಷದ ಅವರು ಪ್ರಸ್ತುತ ಟಿ.ನರಸೀಪುರದ ಡಿಎಚ್‌ಒ ಕಚೇರಿಯಲ್ಲಿ ಕೋವಿಡ್‌ ಸೋಂಕಿತರ ಪತ್ತೆ ತಂಡದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 

ಕೊರೋನಾ ಸೋಂಕಿತೆಗೆ ಯಶಸ್ವಿ ಮಿದುಳು ಶಸ್ತ್ರಚಿಕಿತ್ಸೆ.

ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ್ದ ಬಳಿಕ ದಿಢೀರ್‌ ಅಸ್ವಸ್ಥರಾದ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿದ್ದಾರೆ.

 ನಂತರ ನಡೆದ ಕೋವಿಡ್‌ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ.

ಇತ್ತೀಚೆಗಷ್ಟೇ ಮೈಸೂರಿನ ನಂಜನಗೂಎಉ ತಾಲೂಕಿನ ಡಿಎಚ್ಒ ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಅಧಿಕಾರಿಯೋರ್ವರು ಸಾವಿಗೀಡಾಗಿದ್ದಾರೆ.