ಮಲೆನಾಡಲ್ಲಿ ಮುಂಗಾರು ಅಬ್ಬರ, ಉಕ್ಕಿ ಹರಿದ ನದಿ

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದ್ದು ಮಲೆನಾಡು ಪ್ರದೇಶದಲ್ಲಿಯೂ ಭಾರೀ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿವೆ. 

Heavy Monsoon Rain Across Karnataka Malnad Region

ಚಿಕ್ಕಮಗಳೂರು [ಜು.05] : ರಾಜ್ಯದ ಹಲವೆಡೆ ಮುಂಗಾರು ಅಬ್ಬರಿಸುತ್ತಿದ್ದು, ಮಲೆನಾಡಿನ ಭಾಗದಲ್ಲಿ‌ ಧಾರಾಕಾರವಾಗಿ ಸುರಿಯುತ್ತಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಹಲವು ಪ್ರದೇಶಗಳಲ್ಲಿ ಭತ್ತದ ಗದ್ದೆಗಳು ಜಲಾವೃತವಾಗಿವೆ. 

ಮಂಗಳೂರು - ಮಡಿಕೇರಿ ಹೆದ್ದಾರಿಯಲ್ಲಿ ಬಿರುಕು : ವಾಹನ ಸವಾರರ ಆತಂಕ !

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಭಾರೀ ಮಳೆಯಿಂದ ಗುಡ್ಡ ಕುಸಿದಿದ್ದು,  ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.  ಇಲ್ಲಿನ ಬಣಕಲ್ ಸಮೀಪದ ಮೂಲರಹಳ್ಳಿಯಲ್ಲಿ ಗುಡ್ಡ ಕುಸಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಜಿಲ್ಲೆಯ ಕುದುರೆಮುಖ, ಕೊಪ್ಪ ಸೇರಿದಂತೆ ಹಲವೆಡೆ ಭಾರೀ ಪ್ರಮಾಣದಲ್ಲಿ ನಿರಂತವಾಗಿ ಮುಂಗಾರಿನ ಅಬ್ಬರ ಮುಂದುವರಿದಿದೆ.

Latest Videos
Follow Us:
Download App:
  • android
  • ios