ರಾಜ್ಯದ ಎಂಟು ಜಿಲ್ಲೆಗಳಲ್ಲಿ ಸೋಮವಾರವೂ ಸುರಿದ ಭಾರಿ ಮಳೆ ಮತ್ತಷ್ಟು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ರಾವಳಿ ಜಿಲ್ಲೆಗಳಲ್ಲಿ ಮಳೆ ಚುರುಕಾಗಿದ್ದು, ಜು.16ರ ವರೆಗೆ ಭಾರೀ ಗಾಳಿಯೊಂದಿಗೆ ಉತ್ತಮ ಮಳೆ
ಬೆಂಗಳೂರು (ಜು.13): ರಾಜ್ಯದ ಎಂಟು ಜಿಲ್ಲೆಗಳಲ್ಲಿ ಸೋಮವಾರವೂ ಮಳೆಯಾಗಿದೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಚುರುಕಾಗಿದ್ದು, ಜು.16ರ ವರೆಗೆ ಭಾರೀ ಗಾಳಿಯೊಂದಿಗೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
7 ಜಿಲ್ಲೆಗಳಲ್ಲಿ ಉತ್ತಮ ಮಳೆ: ಸಿಡಿಲಿಗೆ ತಾಯಿ, ಪುತ್ರಿ ಬಲಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮಂಗಳೂರಲ್ಲಿ ಮರಬಿದ್ದು 9 ಮನೆಗಳಿಗೆ ಹಾನಿಯಾಗಿದ್ದು ಬಿಟ್ಟರೆ ಅದೃಷ್ಟವಶಾತ್ ಬೇರಿನ್ನೇನೂ ಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಇತರೆರಡು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಸುರಿದಿದೆ.
ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!
ಜು.16ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಇದರ ಜತೆಗೆ ಭಾರೀ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಧಾರವಾಡ, ಕೊಡಗು, ಚಿಕ್ಕಮಗಳೂರಲ್ಲಿ ಸಾಧಾರಣ ಮಳೆಯಾಗಿದ್ದರೆ ಗದಗ, ಬೆಳಗಾವಿಯಲ್ಲಿ ತುಂತುರು ಮಳೆ ಸುರಿದಿದೆ.
