ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ|  ಕಳೆದ ತಿಂಗಳಿನಂತೆ ಈ ಬಾರಿಯೂ ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ| ಬುಧವಾರದಿಂದ ಮುಂದಿನ 48 ಗಂಟೆಯವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ  ಹವಾಮಾನ ಇಲಾಖೆ| ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು, [ಸೆ.04]: ಕೊಡಗು ಜಿಲ್ಲೆಯಾದ್ಯಂತ ಮತ್ತೆ ನಿರಂತರ ಮಳೆ ಸುರಿಯುತ್ತಿದ್ದು, ಮತ್ತಷ್ಟು ಮಳೆಯಾಗು ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆನೀಡಿದೆ. 

ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರ 'ರೆಡ್‌ ಅಲರ್ಟ್‌' ಘೋಷಿಸಿದೆ. ಬುಧವಾರದಿಂದ ಮುಂದಿನ 48 ಗಂಟೆಯವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊಡಗು : ಸಾವಿರಾರು ಹೆಕ್ಟೇರ್‌ ಪ್ರದೇಶದ ಭತ್ತ ಕೃಷಿ ಮಣ್ಣುಪಾಲು!

 ಈ ಸಂಬಂಧ ಜಿಲ್ಲಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. 204.5 ಮಿ.ಮೀಟರ್ ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಭಾರತೀಯ ಹವಮಾನ ಇಲಾಖೆ ನೀಡಿದ ಎಚ್ಚರಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ 5-9-19 [ನಾಳೆ ಗುರುವಾರ] ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.