ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಆರ್ಭಟ ಜೋರಾಗಿದೆ. ನಗರದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಹವಾಮಾನ ಇಲಾಖೆ 2 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿದೆ.
ಬೆಂಗಳೂರು (ಅ.15): ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಆರ್ಭಟ ಜೋರಾಗಿದೆ. ನಗರದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಹವಾಮಾನ ಇಲಾಖೆ 2 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿದೆ. ಶಿವಾನಂದ ಸರ್ಕಲ್, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕಾರ್ಪೋರೇಷನ್, ಶಿವಾಜಿನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ಜೊತೆಗೆ ವರುಣನ ಆರ್ಭಟ ಶುರುವಾಗಿದ್ದು, ಮಳೆ ಅಬ್ಬರ ಹಾಗೂ ಟ್ರಾಫಿಕ್ ಜಾಮ್‌ಗೆ ವಾಹನ ಸವಾರರು ಸಿಲುಕಿದ್ದಾರೆ.
ಕರ್ನಾಟಕದಲ್ಲಿ ಇನ್ನೂ 6 ದಿನ ಮಳೆ: ರಾಜ್ಯದಲ್ಲಿ ಮುಂದಿನ ಐದಾರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ನೈಋುತ್ಯ ಮುಂಗಾರು ಮಾರುತ ಮರಳುವಿಕೆ, ಅರಬ್ಬಿ ಸಮುದ್ರ, ಉತ್ತರ ಅಂಡಮಾನ್ ಸಮುದ್ರ ಭಾಗ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣ ಆಗಿರುವ ಮೇಲ್ಮೈ ಸುಳಿಗಾಳಿಗಳು ಮಳೆಯ ಅಬ್ಬರವನ್ನು ಹೆಚ್ಚಿಸಲಿದೆ ಎಂದು ಹವಾಮಾನ ತಜ್ಞರು ಹೇಳುತ್ತಾರೆ. ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಭರ್ಜರಿ ಮಳೆಯ ಸಾಧ್ಯತೆಯಿದ್ದು, ಒಟ್ಟಾರೆ ಮುಂದಿನ ಕೆಲ ದಿನ ರಾಜ್ಯದಲ್ಲಿ ಮಳೆಯ ವಾತಾವರಣ ಇರಲಿದೆ.
Karnataka Rains: ಮತ್ತೆ ಕರ್ನಾಟಕದ ಹಲವೆಡೆ ಮಳೆಯಬ್ಬರ: 2 ಬಲಿ
ಅಕ್ಟೋಬರ್ ಕೊನೆಯ ವಾರದಲ್ಲಿ ಹಿಂಗಾರು ಮಾರುತದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಬೆಳಗ್ಗೆ 8.30ರವರೆಗೆ ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಉತ್ತರಕನ್ನಡ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
Chikkaballpura; ಪ್ರವಾಹದಲ್ಲಿ ಸಿಲುಕಿ ಜಾಲಿ ಮರ ಹಿಡಿದು ಬದುಕುಳಿದ ವ್ಯಕ್ತಿ!
ಆ ಬಳಿಕ ಭಾನುವಾರ ಬೆಳಗ್ಗೆ 8.30ರವರೆಗೆ ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಇರಲಿದೆ. ಭಾನುವಾರ ಬೆಳಗ್ಗೆಯಿಂದ ಸೋಮವಾರದ ತನಕ ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಆ ಬಳಿಕವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಅಗುವ ಸಂಭವ ಇದೆ.
