ಕರ್ನಾಟಕ ಹಲವು ಜಿಲ್ಲೆಗಳು ಬರಗಾಲ ಪರಿಸ್ಥಿತಿ ಎದುರಿಸುತ್ತಿದ್ದರೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಬಳಿಕ ಉಡುಪಿಯಲ್ಲಿ ಮಳೆಯಾಗುತ್ತಿದೆ. ಪರಿಣಾಮ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಉಡುಪಿ (ಜು.24) ಕರ್ನಾಟಕದ ಹಲವು ಜಿಲ್ಲೆಗಳು ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ಉತ್ತಮ ಮಳೆಯಾಗುತ್ತಿದ್ದ ಹಲವು ಜಿಲ್ಲೆಗಳು ಮಳೆ ಕೊರತೆ ಎದುರಿಸಿದೆ. ಇನ್ನು ದಕ್ಷಿಣ ಕನ್ನಡದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಆದರೆ ಕೊಡಗು, ಉಡುಪಿಯಲ್ಲಿ ಮಳೆ ಕೊರತೆ ಕಂಡುಬಂದಿತ್ತು. ಇದೀಗ ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಮುನ್ನಚ್ಚೆರಿಕಾ ಕ್ರಮವಾಗಿ ನಾಳೆ (ಜುಲೈ 25) ಉಡುಪಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಮಹತ್ವದ ಘೋಷಣೆ
ನಾಳೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಸಭೆ ಸೇರಿದ ಉಡುಪಿ ಜಿಲ್ಲಾಧಿಕಾರಿ ಸ್ವೂರಪ ಟಿಕೆ, ಮಹತ್ವದ ಘೋಷಣೆ ಮಾಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಡಿಪ್ಲೋಮೋ, ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡಲ್ಲಿ ಭಾರಿ ಮಳೆ
ದಕ್ಷಿಣ ಕನ್ನಡದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಇಂದು (ಜುಲೈ.24) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತ ಅಂಗನವಾಡಿಯಿಂದ ಪಿಯುಸಿ ವರೆಗೆ ಇಂದು ರಜೆ ಘೋಷಣೆ ಮಾಡಲಾಗಿತ್ತು .ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಆದೇಶ ನೀಡಿದ್ದರು.
ಉತ್ತರ ಕನ್ನಡದಲ್ಲೂ ಭಾರಿ ಮಳೆ
ಉತ್ತರ ಕನ್ನಡ ಜಿಲ್ಲೆಯ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಪ್ರಮುಖವಾಗಿ ಸಿದ್ದಾಪುರ, ಶಿರಸಿ ಹಾಗೂ ಜೊಯಿಡಾ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು (ಜು.24) ಭಾರಿ ಮಳೆಯಾಗುತಿದ್ದ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗೆ ರಜೆ ಘೋಷಿಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಹಲೆವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಕ್ಕಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರಿ ಮಳೆಗೆ ಕಾರವಾರದ ಮುದುಗ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ಬಂಡೆ ಕಲ್ಲುಗಳು, ಮಣ್ಣು ಹೆದ್ದಾರಿಗೆ ಬಿದ್ದಿದೆ. ಈ ಪ್ರದೇಶದಲ್ಲಿ ಸಂಚಾರಕ್ಕೆ ನಿರ್ಬಂಧ ಇರುವ ಕಾರಣ ಯಾವುದೇ ಸಮಸ್ಯೆ ಆಗಿಲ್ಲ. ಇನ್ನು ಜೋಯಿಡಾದಲ್ಲಿ ಮಳೆ ಅಬ್ಬರಕ್ಕೆ ಮನೆಯ ಮೇಲೆ ಅಡಕೆ ಮರ ಬಿದ್ದು ಹಾನಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಕುಂಬಾರವಾಡದ ಕಾತೇಲಿಯಲ್ಲಿ ಘಟನೆ ನಡೆದಿದೆ.


