Asianet Suvarna News Asianet Suvarna News

ವರುಣನ ಅಬ್ಬರ : ಇಲ್ಲಿನ ಪ್ರವಾಸಿ ತಾಣಗಳಿಗೆ ನಿಷೇಧ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರ ಜೋರಾಗಿದೆ. ಇದರಿಂದ ಇಲ್ಲಿನ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ. 

Heavy Rain Lashes Ban To Visit Tourist Places in Uttara Kannada District
Author
Bengaluru, First Published Aug 8, 2019, 10:21 AM IST
  • Facebook
  • Twitter
  • Whatsapp

ಕಾರವಾರ [ಆ.08] : ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಹಾಗೂ ಅದರಿಂದಾಗುವ ಹಾನಿಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಮೂರುದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜಿಲ್ಲೆ ಹಾಗೂ ಹೊರ ರಾಜ್ಯಗಳ ಪ್ರವಾಸಿಗರು ತಮ್ಮ ಪ್ರಯಾಣ ಮೂಂದೂಡುವಂತೆ ಸೂಚಿಸಲಾಗಿದೆ. 

ಮುಂದಿನ ಮೂರು ದಿನಗಳು ಹೊರ ಜಿಲ್ಲೆಯಿಂದ ಯಾವ ಪ್ರವಾಸಿಗರೂ  ಜಿಲ್ಲೆಗೆ ಬಾರದಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ.ಸೂಚನೆ ನೀಡಿದ್ದಾರೆ. 

ಜಿಲ್ಲೆಯನ್ನು ಪ್ರವೇಶಿಸುವ ಎಲ್ಲ ರಸ್ತೆಗಳಲ್ಲೂ ಪ್ರವಾಹ, ಗುಡ್ಡ ಕುಸಿತ ಅಥವಾ ಮರ  ಬೀಳುವ ಅಪಾಯಕಾರಿ ಸಂದರ್ಭಗಳೇ ಹೆಚ್ಚಿರುವುದರಿಂದ ಈ ದಿನಗಳಲ್ಲಿ ಪ್ರಯಾಣಮಾಡಿ ಸಂಕಷ್ಟಕ್ಕೆ ಗುರಿಯಾಗಬಾರದೆಂದು ಹಾಗೂ ಅಂತಹ
ದುಸ್ಸಾಹಸಕ್ಕೆ ಕೈಹಾಕಬಾರದೆಂದು ತಿಳಿಸಿದ್ದಾರೆ.

Follow Us:
Download App:
  • android
  • ios