ಬೆಳಗಾವಿ [ಸೆ.06]:   ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ. 

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅಥಣಿ ತಾಲೂಕಿನ 25 ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಎಲ್ಲಾ ಗ್ರಾಮಗಳಿಗೂ ಗ್ರಾಮ ಪಂಚಾಯತ್ ಗಳಿಂದ ಕೂಡ ಡಂಗೂರ ಸಾರುವ ಮೂಲಕ ಅಲರ್ಟ್ ನೀಡಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಿದ್ದು. ಜನರಿಗೆ ದಿಕ್ಕು ತೋಚದಂತಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಭಾರೀ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಈಗಾಗಲೇ ಸೂಕ್ತ ಮುನ್ನರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 

ಕೃಷ್ಣಾ ನದಿ ಪಾತ್ರದ ಊರುಗಳಲ್ಲಿ ಬೋಟ್, SDRF, ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿದ್ದಾರೆ.